Netravathi ನದಿಯಲ್ಲಿ ತಾಯಿ,ಮಗು ಮೃತದೇಹ ಪತ್ತೆ: ಆತ್ಮಹತ್ಯೆ ಶಂಕೆ
ಆಶ್ರಮದಲ್ಲಿ ಹುಟ್ಟುಹಬ್ಬ ಆಚರಿಸಿದ್ದರು !
Team Udayavani, Mar 29, 2024, 11:11 PM IST
ಮುಡಿಪು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳ ಕಡವಿನಬಳಿ ಸಮೀಪದ ನೇತ್ರಾವತಿ ನದಿಯಲ್ಲಿ ತಾಯಿ ಹಾಗೂ ಒಂದು ವರ್ಷದ ಮಗುವಿನ ಮೃತದೇಹ ಶುಕ್ರವಾರ ರಾತ್ರಿ ಪತ್ತೆಯಾಗಿದೆ. ತಾಯಿಯು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೈದಿರಬಹುದೆಂದು ಶಂಕಿಸಲಾಗಿದೆ.
ಮೃತ ಮಹಿಳೆಯನ್ನು ನಾಗರಾಜ್ ಎಂಬವರ ಪತ್ನಿ ಚೈತ್ರಾ( 30) ಎಂದು ಗುರುತಿಸಲಾಗಿದೆ. ಅಡ್ಯಾರ್ ನಿವಾಸಿಯಾಗಿರುವ ಇವರು ತನ್ನ ಒಂದು ವರ್ಷದ ಮಗು ದಿಯಾಂಶ್ ಜತೆ ಮಧ್ಯಾಹ್ನ ಸೇತುವೆಯ ಮೂಲಕ ನಡೆದುಕೊಂಡು ಬಂದು ಹರೇಕಳ ಕಡವಿನಬಳಿ ಬಂದಿದ್ದರು ಎನ್ನಲಾಗಿದೆ. ನದಿಯ ಸಮೀಪ ನಡೆದುಕೊಂಡು ಹೋಗುವುದನ್ನು ಸ್ಥಳೀಯರು ಗಮನಿಸಿದ್ದರು. ಆದರೆ ಮಧ್ಯಾಹ್ನ ಬಳಿಕ ಆಕೆಯ ಮನೆಯವರು ಬಂದು ವಿಚಾರಿಸಿದ್ದು, ಆ ಬಳಿಕ ಮಹಿಳೆ ನಾಪತ್ತೆಯಾಗಿರುವ ಬಗ್ಗೆ ತಿಳಿದಿತ್ತು. ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ರಾತ್ರಿ 8.30 ರ ವೇಳೆಗೆ ಹರೇಕಳ ನೇತ್ರಾವತಿ ನದಿಯಲ್ಲಿ ತಾಯಿ ಮಗುವಿನ ಶವ ಪತ್ತೆಯಾಗಿದೆ. ಮಹಿಳೆಯು ಮಗುವಿನೊಂದಿಗೆ ಆತ್ಮಹತ್ಯೆಗೈದಿರಬಹುದೆಂದು ಶಂಕಿಸಲಾಗಿದೆ. ಕೊಣಾಜೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಆಶ್ರಮದಲ್ಲಿ ಹುಟ್ಟುಹಬ್ಬ ಆಚರಿಸಿದ್ದರು !
ದಿಯಾಂಶ್ ಒಂದು ವರ್ಷದ ಹುಟ್ಟುಹಬ್ಬವನ್ನು ಆಶ್ರಮವೊಂದರಲ್ಲಿ ನಿನ್ನೆಯಷ್ಟೇ ಆಚರಿಸಿದ್ದರೆಂಬ ಮಾಹಿತಿಯಿದೆ. ಆದರ್ಶಯುತವಾಗಿ ಮಗುವಿನ ಹುಟ್ಟುಹಬ್ಬ ಆಚರಿಸಿ ಇಂದು ಏಕಾಏಕಿ ಇಂತಹ ನಿರ್ಧಾರ ಕೈಗೊಂಡಿರುವುದರ ಕುರಿತು ಸಾರ್ವಜನಿಕ ವಲಯದಲ್ಲಿ ಸಂಶಯಗಳು ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.