ಮಂಗಳೂರು ಅಭಿವೃದ್ಧಿಯಲ್ಲಿ ಸಂಸದರ ನಿರ್ಲಕ್ಷ್ಯ: ಎಸ್‌ಡಿಪಿಐ
Team Udayavani, Apr 9, 2019, 6:03 AM IST
ಮಹಾನಗರ: ಜಾಗತಿಕವಾಗಿ ಹೆಸರುವಾಸಿಯಾದ ಮಂಗಳೂರಿನಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಡ್ರೈನೇಜ್ ಸಮಸ್ಯೆ ದೊಡ್ಡ ಮಟ್ಟದಲ್ಲಿ ಮುಂದು ವರಿದಿದೆ. ಗುಣಮಟ್ಟದ ರಸ್ತೆ, ಬಸ್ ನಿಲ್ದಾಣ ವ್ಯವಸ್ಥೆಯನ್ನು ಮಾಡಲು ಸಂಸದರಿಗೆ ಸಾಧ್ಯವಾಗಿಲ್ಲ ಎಂದು ಎಸ್‌ಡಿಪಿಐ ಪಕ್ಷದ ದ.ಕ. ಲೋಕಸಭಾ ಅಭ್ಯರ್ಥಿ ಮಹಮ್ಮದ್ ಇಲಿಯಾಸ್ ತುಂಬೆ ಅವರು ತಿಳಿಸಿದ್ದಾರೆ.
ನಗರದ ಸೆಂಟ್ರಲ್ ಮಾರುಕಟ್ಟೆ, ಸ್ಟೇಟ್ ಬ್ಯಾಂಕ್, ಬಂದರು, ಕುದ್ರೋಳಿ ಸುತ್ತ ಮುತ್ತ ಪ್ರದೇಶಗಳಲ್ಲಿ ಪಾದಯಾತ್ರೆ ನಡೆಸಿ ಅವರು ಮಾತನಾಡಿದರು.
ಸೆಂಟ್ರಲ್ ಮಾರುಕಟ್ಟೆ ಮತ್ತು ಕೇಂದ್ರ ಬಸ್ ನಿಲ್ದಾಣ ತುರ್ತಾಗಿ ಆಧುನೀ ಕರಣಗೊಳ್ಳಬೇಕಾಗಿದೆ. ಕಂದಕ್, ಬಂದರು ಮತ್ತು ಕುದ್ರೋಳಿ ಪ್ರದೇಶಗಳಲ್ಲಿ ಹತ್ತು ಹಲವು ಸಮಸ್ಯೆಗಳಿವೆ. ಎಸ್‌ಡಿಪಿಐ ಪಕ್ಷದ ಸಂಸದರಾಗಿ ಜನರು ಆಯ್ಕೆ ಮಾಡಿದರೆ ನಗರವನ್ನು ತುರ್ತಾಗಿ ಅಭಿವೃದ್ಧಿಗೊಳಿಸಲು ತಾನು ಬದ್ಧ, ಹಳೆ ಬಂದರಿನ ಮೀನುಗಾರಿಕೆ ಜೆಟ್ಟಿ ಸಮಸ್ಯೆ ಪರಿಹರಿಸಬೇಕಾಗಿದೆ ಎಂದು ಅವರು ಹೇಳಿದರು.
ಎಸ್‌ಡಿಪಿಐ ಮುಖಂಡರಾದ ಜಲೀಲ್ ಕೆ., ಅಕ್ರಮ್ ಹಸನ್, ಅಥಾವುಲ್ಲಾ ಜೋಕಟ್ಟೆ, ಅಶ್ರಫ್ ಮಂಚಿ, ಸುಹೇಲ್‌ಖಾನ್, ಹಾರಿಸ್ ಮಲಾರ್, ಮುಝೈರ್ ಕುದ್ರೋಳಿ, ಚುನಾವಣ ಮುಖ್ಯಉಸ್ತುವಾರಿ ಅಬ್ದುಲ್ ಹನ್ನಾನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.