ಮುಡಿಪು ಸೇತುವೆ ಕಾಮಗಾರಿ ನನೆಗುದಿಗೆ

ಪ್ರಾಧಿಕಾರದಿಂದ 26.60 ಲ.ರೂ. ಬಿಡುಗಡೆ: ಕ್ರೆಡಲ್‌ ನಿರ್ಲಕ್ಷ್ಯ

Team Udayavani, Mar 25, 2019, 10:30 AM IST

25-March-2

ಇಚ್ಲಂಪಾಡಿ ಗ್ರಾಮದ ಇಚ್ಲಂಪಾಡಿ-ಹೊಸಮಠ ರಸ್ತೆಯ ಮುಡಿಪು ಎನ್ನುವಲ್ಲಿ ಸೇತುವೆ ನಿರ್ಮಿಸಬೇಕಾಗಿರುವ ಸ್ಥಳ.

ಕಡಬ: ಮೂಲ ಸೌಕರ್ಯಗಳಿಗೆ ಸರಕಾರದಿಂದ ಅನುದಾನ ತರುವುದೇ ಬಲುದೊಡ್ಡ ಸಾಹಸದ ಕೆಲಸ. ಆದರೆ ಇಲ್ಲಿ ಇಚ್ಲಂಪಾಡಿ ಮುಡಿಪು ಕಿರು ಸೇತುವೆಯ ಕಾಮಗಾರಿಗೆ ಅನುದಾನ ಇದ್ದರೂ ಕಾಮಗಾರಿ ನಡೆಸದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಕೌಕ್ರಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಇಚ್ಲಂಪಾಡಿ ಗ್ರಾಮದ ಇಚ್ಲಂಪಾಡಿ- ಹೊಸಮಠ ರಸ್ತೆಯ ಮುಡಿಪು ಎನ್ನುವಲ್ಲಿ ಮಾಣಿಯಡ್ಕ ಹೊಳೆಗೆ ಕಿರು ಸೇತುವೆ ನಿರ್ಮಿಸಲು ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ 26.60 ಲಕ್ಷ ರೂ. ಅನುದಾನ ಬಿಡುಗಡೆಯಾಗಿ ವರ್ಷವೇ ಕಳೆದಿದೆ. ಈ ಅನುದಾನಕ್ಕೆ ಸ್ಥಳೀಯ ಗ್ರಾ.ಪಂ. ನಿಧಿಯಿಂದ 1.40 ಲಕ್ಷ ರೂ. ಸೇರಿಸಿ ಒಟ್ಟು 28 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಬೇಕಾಗಿತ್ತು. ಆದರೆ ಸುಮಾರು 9 ತಿಂಗಳ ಹಿಂದೆ ಸೇತುವೆ ನಿರ್ಮಿಸಲು ಅಡಿಪಾಯ ಹಾಕುವುದಕ್ಕಾಗಿ 2 ಗುಂಡಿಗಳನ್ನು ತೆಗೆದಿರುವುದು ಬಿಟ್ಟರೆ ಬಳಿಕ ಯಾವುದೇ ಕಾಮಗಾರಿ ನಡೆದಿಲ್ಲ.
ಅನುದಾನ ದುರ್ಬಳಕೆ ಶಂಕೆ
ಕಾಮಗಾರಿಯನ್ನು ಸರಕಾರದ ಅಂಗ ಸಂಸ್ಥೆಯಾಗಿರುವ ಕರ್ನಾಟಕ ಮೂಲ ಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆಆರ್‌ ಐಡಿಎಲ್‌) ವಹಿಸಲಾಗಿದೆ. ಕಾಮಗಾರಿಗಾಗಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ಬಿಡುಗಡೆಗೊಂಡಿರುವ 26.60 ಲಕ್ಷ ರೂ. ಅನುದಾನದ ಪೈಕಿ ಪ್ರಥಮ ಕಂತು 11.20 ಲಕ್ಷ ರೂ.ಗಳನ್ನು ಕೆಆರ್‌ಐಡಿಎಲ್‌ ಖಾತೆಗೆ ವರ್ಗಾಯಿಸಿ ವರ್ಷವಾಗುತ್ತಿದೆ. ಈ ದುಡ್ಡಿನಲ್ಲಿ ಸೇತುವೆ ನಿರ್ಮಿಸಬೇಕಾಗಿರುವ ಸ್ಥಳದಲ್ಲಿ ಸುಮಾರು 9 ತಿಂಗಳ ಹಿಂದೆ ಕೇವಲ 2 ಅಡಿಪಾಯದ ಗುಂಡಿಗಳನ್ನು ತೆಗೆದಿರುವುದು ಬಿಟ್ಟರೆ ಬಳಿಕ ಯಾವುದೇ ಕಾಮಗಾರಿ ನಡೆದಿಲ್ಲ. ಆದುದರಿಂದ ಬಿಡುಗಡೆಯಾಗಿರುವ ಅನುದಾನ ದುರ್ಬಳಕೆಯಾಗಿದೆ ಎನ್ನುವುದು ಸಾರ್ವಜನಿಕರ ಸಂಶಯ.
ಎಸಿಬಿಗೆ ದೂರು
ರಾಜ್ಯದ ಮುಖ್ಯಮಂತ್ರಿಗಳು, ಲೋಕೋಪಯೋಗಿ ಸಚಿವರು, ದ.ಕ. ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಸಿಇಒಗೆ ದೂರು ನೀಡಲಾಗಿದೆ. ಇಲ್ಲಿ ಅನುದಾನ ನೀಡಿದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ನಿರ್ಲಕ್ಷ್ಯವೂ ಎದ್ದು ಕಾಣುತ್ತಿದೆ. ಪ್ರಾಧಿಕಾರದಿಂದ ನೀಡಲಾಗಿರುವ ಅನುದಾನ ಯಾವ ರೀತಿ ಬಳಕೆಯಾಗುತ್ತಿದೆ ಎಂದು ಮೇಲುಸ್ತುವಾರಿ ವಹಿಸಿ ಕೊಳ್ಳಬೇಕಾದ ಅಧಿಕಾರಿಗಳಿಗೆ ಈ ಕಾಮಗಾರಿಯ ಕುರಿತು ಯಾವುದೇ ಆಸಕ್ತಿ ಇದ್ದಂತಿಲ್ಲ.
ಸ್ಥಳೀಯ ಮುಖಂಡರು ಪದೇ ಪದೇ ಸಂಬಂಧಪಟ್ಟವರನ್ನು ವಿಚಾರಿಸಿದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಇದೀಗ ಆಕ್ರೋಶಗೊಂಡಿರುವ ಇಲ್ಲಿನ ಜನರು ಪ್ರತಿಭಟನೆಗೆ ಮುಂದಾಗಿದ್ದಾರೆ. ಅನುದಾನ ದುರ್ಬಳಕೆಯಾಗಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳಕ್ಕೂ ದೂರು ಸಲ್ಲಿಸಲಾಗಿದೆ. ಕೂಡಲೇ ಸೇತುವೆಯ ಕಾಮಗಾರಿ ಆರಂಭಿಸದೇ ಹೋದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸುವುದಿಲ್ಲ ಎಂದು ಸ್ಥಳೀಯರು ಪಟ್ಟು ಹಿಡಿದಿದ್ದಾರೆ.
ಅನುದಾನ ದುರ್ಬಳಕೆ ಆಗಿಲ್ಲ
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ನಾನು ಹೊಸದಾಗಿ ಕರ್ತವ್ಯಕ್ಕೆ ಹಾಜರಾಗಿರುವುದರಿಂದಾಗಿ ಹಿಂದಿನ ವಿಚಾರಗಳ ಕುರಿತು ಹೆಚ್ಚಿನ ಮಾಹಿತಿ ಇಲ್ಲ. ಮಣ್ಣು ಪರೀಕ್ಷೆಗಾಗಿ ಕಾಮಗಾರಿಯ ಸ್ಥಳದಿಂದ ಮಣ್ಣಿನ ಮಾದರಿ ಸಂಗ್ರಹಿಸಿ ಕಳುಹಿಸಲಾಗಿದೆ. ಅದರ ವರದಿ ಮತ್ತು ಸೇತುವೆ ನಿರ್ಮಾಣದ ವಿನ್ಯಾಸ ನಮ್ಮ ಕೈ ಸೇರಿದ ಕೂಡಲೇ ಕಾಮಗಾರಿ ಆರಂಭವಾಗಲಿದೆ. ಅನುದಾನ ಯಾವುದೇ ರೀತಿಯಲ್ಲಿ ದುರ್ಬಳಕೆಯಾಗಿಲ್ಲ. ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ನಮಗೆ ಬಂದಿರುವ ಅನುದಾನ ನಮ್ಮ ಖಾತೆಯಲ್ಲಿ ಭದ್ರವಾಗಿದೆ. ಶೀಘ್ರ ಕಾಮಗಾರಿ ಆರಂಭಗೊಳ್ಳಲಿದೆ.
– ಶಾಂತಕುಮಾರ್‌ ಎಇ,
 ಕೆಆರ್‌ಐಡಿಎಲ್‌ ಮಂಗಳೂರು
ಪತ್ರ ಬರೆಯಲಾಗಿದೆ
ಅನುದಾನವನ್ನು ಸೂಕ್ತವಾಗಿ ಬಳಸಿ ಕಾಮಗಾರಿ ಮುಗಿಸಬೇಕಾಗಿದ್ದು ಅಧಿಕಾರಿಗಳ ಜವಾಬ್ದಾರಿ. ಸೇತುವೆ ಕೆಲಸ ಆರಂಭಿಕ ಹಂತದಲ್ಲೇ ಸ್ಥಗಿತವಾಗಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಶೀಘ್ರ ಕಾಮಗಾರಿ ಮುಗಿಸುವಂತೆ ಸಂಬಂಧಪಟ್ಟವರಿಗೆ ಪತ್ರ ಬರೆಯಲಾಗಿದೆ.
ಶೇಷಕೃಷ್ಣ, ಎಇಇ
ಕರಾವಳಿ ಅಭಿವೃದ್ಧಿ ಪ್ರಾಧಿಕಾರ
ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.