ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಟೆಂಪೋ: ಚಾಲಕ ಸಾವು
Team Udayavani, Jun 30, 2022, 11:18 PM IST
ಮೂಲ್ಕಿ : ಕಾರ್ನಾಡು ಕೈಗಾರಿಕಾ ಪ್ರದೇಶದ ಬಳಿಯ ರಸ್ತೆಯಲ್ಲಿ ಕೂಲಿ ಕಾರ್ಮಿಕರನ್ನು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ 407 ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಚಾಲಕ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ವಿದ್ಯುತ್ ತಂತಿಗಳು ಢಿಕ್ಕಿಯ ಪರಿಣಾಮ ತುಂಡಾಗಿ ಬಿದ್ದಿವೆ.
ಚಾಲಕ, ಕಾರ್ನಾಡು ಬಿಜಾಪುರ ಕಾಲನಿಯ ನಿವಾಸಿ, ಮೂಲತಃ ಕಲಬುರಗಿಯ ಯಶವಂತರಾಯ (43) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗಾಯಗೊಂಡಿದ್ದ ಭಗವಂತರಾಯ (60) ಕುಮಾರ (45) ಚೇತರಿಸಿಕೊಳ್ಳುತ್ತಿದ್ದಾರೆ.
ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : ಮೂಡಿಗೆರೆ : ಕಾಡಾನೆ ದಾಳಿ, ಪ್ರಾಣಪಾಯದಿಂದ ಪಾರದ ಎಂಎಸ್ಐಎಲ್ ನೌಕರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.