ಮುಲ್ಕಿ ಸುಂದರರಾಮ ರಸ್ತೆ ನಾಮಕರಣ ಆದೇಶ ಜಾರಿಗೆ ಆಗ್ರಹ

Team Udayavani, Jul 30, 2017, 6:50 AM IST

Sundar-Ram-Shetty-29-7.jpg

ಮುಲ್ಕಿ ಸುಂದರರಾಮ ಶೆಟ್ಟಿ  ಸಂಸ್ಮರಣೆ -2017

ಮಂಗಳೂರು: ಮಂಗಳೂರಿನ ಲೈಟ್‌ಹೌಸ್‌ ಹಿಲ್‌ ರಸ್ತೆಗೆ ಮುಲ್ಕಿ ಸುಂದರ ರಾಮ ಶೆಟ್ಟಿ ರಸ್ತೆ ಎಂಬುದಾಗಿ ನಾಮಕರಣಕ್ಕೆ ಸರಕಾರ ನೀಡಿರುವ ತಡೆಯಾಜ್ಞೆಯನ್ನು  ತ್‌ಕ್ಷಣ ತೆರವುಗೊಳಿಸಬೇಕು ಹಾಗೂ ನಾಮಕರಣಗೊಳಿಸಿ ಈ ಹಿಂದೆ ಸರಕಾರ ಹೊರಡಿಸಿರುವ ಆದೇಶವನ್ನು ಜಾರಿಗೊಳಿಸಬೇಕು ಎಂದು ಶನಿವಾರ ನಗರದಲ್ಲಿ ಜರಗಿದ ಮುಲ್ಕಿ ಸುಂದರರಾಮ ಶೆಟ್ಟಿ ಸಂಸ್ಮರಣೆ ಕಾರ್ಯ ಕ್ರಮದಲ್ಲಿ ಆಗ್ರಹಿಸಲಾಯಿತು. ಮುಲ್ಕಿ ಸುಂದರರಾಮ ಶೆಟ್ಟಿ ಅಭಿಮಾನಿ ಬಳಗ ಹಾಗೂ ವಿಜಯ ಬ್ಯಾಂಕ್‌ ವರ್ಕರ್ ಹಾಗೂ ಆಫೀಸರ್ ಯೂನಿಯನ್‌ ಮಂಗಳೂರು ವಲಯ ವತಿಯಿಂದ ಪುರಭವನದಲ್ಲಿ ಮುಲ್ಕಿ ಸುಂದರರಾಮ ಶೆಟ್ಟಿ ಸಂಸ್ಮರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಮಾತನಾಡಿ, ಮಹಾನ್‌ ಸಾಧಕ ಮುಲ್ಕಿ ಸುಂದರ ರಾಮ ಶೆಟ್ಟಿಯವರ ಹೆಸರನ್ನು ರಸ್ತೆಗೆ ಇಡುವುದಕ್ಕೆ ಆಕ್ಷೇಪ ನೋವಿನ ವಿಚಾರ ಎಂದರು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಹಾಗೂ ಮುಲ್ಕಿ ಸುಂದರರಾಮ ಶೆಟ್ಟಿ ಅಭಿಮಾನಿ ಬಳಗದ ಕಾರ್ಯಾಧ್ಯಕ್ಷ ಅಜಿತ್‌ಕುಮಾರ್‌ ರೈ ಮಾಲಾಡಿ ಅವರು ಲೈಟ್‌ಹೌಸ್‌ ಹಿಲ್‌ ರಸ್ತೆಗೆ ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ ಎಂದು ನಾಮಕರಣ ಪ್ರಕ್ರಿಯೆ ಕಾನೂನು ಬದ್ಧವಾಗಿಯೇ ನಡೆದಿದೆ. ಈ ರಸ್ತೆಗೆ ಸರಕಾರದ ಆದೇಶದಂತೆ ಮುಲ್ಕಿ ಸುಂದರರಾಮ ಶೆಟ್ಟಿ ಅವರ ಹೆಸರು ಇಡಬೇಕು ಎಂಬುದು ನಮ್ಮ ಹಕ್ಕೊತ್ತಾಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಇಂಟರ್‌ ನ್ಯಾಶನಲ್‌ ಬಂಟ್ಸ್‌ ವೆಲ್ಪೇರ್‌ ಟ್ರಸ್ಟ್‌ನ ಅಧ್ಯಕ್ಷ ಹಾಗೂ ಅಭಿಮಾನಿ ಬಳಗದ ಗೌರವಾಧ್ಯಕ್ಷ ಎ. ಸದಾನಂದ ಶೆಟ್ಟಿ ಮಾತನಾಡಿ, ಸುಂದರರಾಮ ಶೆಟ್ಟಿ ಅವರು ಜಾತಿ, ಮತ ಮೀರಿ ಸಮಾಜದ ಕೆಲಸ ಮಾಡಿದ್ದಾರೆ. ರಸ್ತೆಗೆ ಹೆಸರಿಡುವ ವಿಷಯದಲ್ಲಿ ಆಕ್ಷೇಪಗಳನ್ನು ಎತ್ತಿರುವುದು ಸರಿಯಲ್ಲ ಎಂದರು.

ಸಂಸದ ನಳಿನ್‌ ಕುಮಾರ್‌ ಕಟೀಲು, ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ, ಮೂಲ್ಕಿ ದುಗ್ಗಣ್ಣ ಸಾವಂತರು, ಪ್ರೊ| ಎಂ.ಬಿ. ಪುರಾಣಿಕ್‌ ಮೊದಲಾದವರು ಮಾತನಾಡಿದರು. ಎ.ಜೆ. ಶೆಟ್ಟಿ, ವಿಜಯ ಕುಮಾರ್‌ ಶೆಟ್ಟಿ, ಅಪ್ಪಣ್ಣ ಹೆಗ್ಡೆ, ಮೋನಪ್ಪ ಭಂಡಾರಿ, ಗಣೇಶ್‌ ಹೊಸಬೆಟ್ಟು, ಶಶಿಧರ ಹೆಗ್ಡೆ, ಮಹಾಬರ್ಲ ಮಾರ್ಲ, ಪ್ರದೀಪ್‌ ಕುಮಾರ್‌ ಕಲ್ಕೂರ, ಹನುಮಂತ ಕಾಮತ್‌, ಉಮಾನಾಥ ಕೋಟ್ಯಾನ್‌, ವೇದವ್ಯಾಸ ಕಾಮತ್‌, ಬದ್ರಿನಾಥ್‌ ಕಾಮತ್‌, ದೇವಿಪ್ರಸಾದ್‌ ಶೆಟ್ಟಿ, ಟಿ.ಕೆ. ರಾಜನ್‌, ಅರವಿಂದ ಪೂಂಜ, ಸವಣೂರು ಸೀತಾರಾಮ ರೈ, ಡಾ| ಆಶಾಜ್ಯೋತಿ ರೈ, ವಿಜಯಲಕ್ಷ್ಮೀ ಶೆಟ್ಟಿ, ಮನೋಹರ ಶೆಟ್ಟಿ, ದೇವಾನಂದ ಶೆಟ್ಟಿ, ಎ.ಬಿ. ಶೆಟ್ಟಿ, ಸದಾನಂದ ರೈ ಕಾಸರಗೋಡು, ಸಂತೋಷ್‌ ಕುಮಾರ್‌ ಶೆಟ್ಟಿ, ಡಾ| ಭರತ್‌ ಶೆಟ್ಟಿ, ಕಾಪು ಲೀಲಾಧರ ಶೆಟ್ಟಿ, ಸುಧಾಕರ ಶೆಟ್ಟಿ, ನಿಟ್ಟೆಗುತ್ತು ರವಿರಾಜ ಶೆಟ್ಟಿ, ವಸಂತ ಶೆಟ್ಟಿ, ವಿ.ಜಿ. ಪಾಲ್‌, ಮೂಲ್ಕಿ ಕರುಣಾಕರ ಶೆಟ್ಟಿ, ಸೀತಾಚರಣ್‌ ಶೆಟ್ಟಿ,  ಶ್ರೀಧರ್‌ ಶೆಟ್ಟಿ, ರಘರಾಮ ಸುವರ್ಣ ಉಪಸ್ಥಿತರಿದ್ದರು. ಬಿ. ನಾಗರಾಜ ಶೆಟ್ಟಿ ಸ್ವಾಗತಿಸಿದರು. ರಾಜಗೋಪಾಲ ರೈ ವಂದಿಸಿದರು. ಕದ್ರಿ ನವನೀತ ಶೆಟ್ಟಿ, ಅಡ್ಯಾರ್‌ ಪುರುಷೋತ್ತಮ ಭಂಡಾರಿ, ಸಾಹಿಲ್‌ ರೈ ನಿರೂಪಿಸಿದರು.

ಟಾಪ್ ನ್ಯೂಸ್

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.