ಪೌರ ಕಾರ್ಮಿಕರಿಗೆ ನಿಗದಿತ ಸಮಯಕ್ಕೆ ವೇತನ ಪಾವತಿ: ಜಿಲ್ಲಾಧಿಕಾರಿ ಸೂಚನೆ
Team Udayavani, Dec 30, 2022, 7:35 AM IST
![ಪೌರ ಕಾರ್ಮಿಕರಿಗೆ ನಿಗದಿತ ಸಮಯಕ್ಕೆ ವೇತನ ಪಾವತಿ: ಜಿಲ್ಲಾಧಿಕಾರಿ ಸೂಚನೆ](https://www.udayavani.com/wp-content/uploads/2022/12/pawra-karmikaru-620x403.jpg)
![ಪೌರ ಕಾರ್ಮಿಕರಿಗೆ ನಿಗದಿತ ಸಮಯಕ್ಕೆ ವೇತನ ಪಾವತಿ: ಜಿಲ್ಲಾಧಿಕಾರಿ ಸೂಚನೆ](https://www.udayavani.com/wp-content/uploads/2022/12/pawra-karmikaru-620x403.jpg)
ಮಂಗಳೂರು: ಮಂಗಳೂರು ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಪೌರ ಕಾರ್ಮಿಕರಿಗೆ ಪ್ರತೀ ತಿಂಗಳ 5ನೇ ತಾರೀಕಿನೊಳಗೆ ಕಡ್ಡಾಯವಾಗಿ ವೇತನ ಪಾವತಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಸಲ್ಲದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಜಿಲ್ಲಾ ಖಜಾನೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ತಮ್ಮ ಕಚೇರಿಯಲ್ಲಿ ಗುರುವಾರ ನಡೆದ ಸಫಾಯಿ ಕರ್ಮಚಾರಿ/ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆರೋಗ್ಯ ತಪಾಸಣೆ
ಜಿಲ್ಲಾ ಖಜಾನೆಯ ಉಪ ನಿರ್ದೇಶಕರು ಈ ಸಂಬಂಧ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು. ನಗರವನ್ನು ಸ್ವತ್ಛಗೊಳಿಸುವ ಪೌರ ಕಾರ್ಮಿಕರು ಉತ್ತಮ ಆರೋಗ್ಯದಿಂದಿರುವುದು ಮುಖ್ಯ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ, ಜಿಲ್ಲೆಯಲ್ಲಿರುವ ಮೆಡಿಕಲ್ ಹಾಗೂ ನರ್ಸಿಂಗ್ ಕಾಲೇಜುಗಳ ಸಹಯೋಗದಲ್ಲಿ ಪ್ರತೀ ತಿಂಗಳು ಪೌರಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಬೇಕು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ದುಡಿಯುವ ಎಲ್ಲ ಪೌರಕಾರ್ಮಿಕರಿಗೆ ಮೂಲಸೌಕರ್ಯ, ಸ್ನಾನ ಗೃಹ, ಶೌಚಾಲಯ, ವಿಶ್ರಾಂತಿ ಕೊಠಡಿ, ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿ ಕೊಡಬೇಕು ಎಂದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನ ನಿರ್ದೇಶಕ ಅಭಿಷೇಕ್ ಮಾತನಾಡಿ, ವಿಶ್ರಾಂತಿ ಕೊಠಡಿಗೆ ಬೇಕಾದ ಪೀಠೊಪಕರಣಗಳನ್ನು ಖರೀದಿಸಲು ನಗರೋತ್ಥಾನ ಯೋಜನೆಯಡಿ ಅನುದಾನ ಮೀಸಲಿಡಲಾಗುವುದು ಎಂದರು.
ಮಂಗಳೂರು ಮನಪಾ ಆಡಳಿತ ವಿಭಾಗದ ಉಪ ಆಯುಕ್ತ ರವಿಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿದ್ಧಲಿಂಗೇಶ, ಜಿ.ಪಂ. ಯೋಜನ ನಿರ್ದೇಶಕ ಪ್ರದೀಪ್ ಡಿ’ಸೋಜಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರವೀಣ್, ಸಫಾಯಿ ಕರ್ಮಚಾರಿ ಸಮಿತಿ ಸದಸ್ಯ ಆನಂದ ಹಾಗೂ ಸಂಬಂಧಿಸಿದ ಇಲಾಖಾ ಅಧಿಕಾರಿಗಳು, ಪೌರಕಾರ್ಮಿಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
![accident](https://www.udayavani.com/wp-content/uploads/2025/02/accident-14-150x84.jpg)
![accident](https://www.udayavani.com/wp-content/uploads/2025/02/accident-14-150x84.jpg)
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-150x90.jpg)

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
![1](https://www.udayavani.com/wp-content/uploads/2025/02/1-28-150x80.jpg)
![1](https://www.udayavani.com/wp-content/uploads/2025/02/1-28-150x80.jpg)
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
![BR-Hills](https://www.udayavani.com/wp-content/uploads/2025/02/BR-Hills-150x90.jpg)
![BR-Hills](https://www.udayavani.com/wp-content/uploads/2025/02/BR-Hills-150x90.jpg)
![BR-Hills](https://www.udayavani.com/wp-content/uploads/2025/02/BR-Hills-150x90.jpg)
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!