Mundkur ರಾಮದಾಸ್ ಕಾಮತ್ ಪ್ರಕರಣ: ಅನುಮಾನ ಹಿನ್ನೆಲೆ; ಎಸಿಪಿ ನೇತೃತ್ವದಲ್ಲಿ ತನಿಖೆ
Team Udayavani, Oct 8, 2023, 12:27 AM IST
ಮಂಗಳೂರು: ಉದ್ಯಮಿ ಮುಂಡ್ಕೂರು ರಾಮದಾಸ್ ಕಾಮತ್ (75) ಅವರ ಆತ್ಮಹತ್ಯೆ ಪ್ರಕರಣದ ತನಿಖೆ ಎಸಿಪಿ ನೇತೃತ್ವದಲ್ಲಿ ನಡೆಯುತ್ತಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.
ಸೆ.17ರಂದು ರಥಬೀದಿಯ ಫ್ಲ್ಯಾಟ್‌ನಲ್ಲಿ ರಾಮದಾಸ್ ಕಾಮತ್ ಅವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಘಟನೆಯ ಮೂರು ದಿನಗಳ ಅನಂತರ ಆತ್ಮಹತ್ಯೆಯ ಕಾರಣದ ಕುರಿತಾಗಿ ಅನುಮಾನ ವ್ಯಕ್ತಪಡಿಸಿ ಮಾಹಿತಿಗಳು ಬಂದವು. ಈ ಹಿನ್ನೆಲೆಯಲ್ಲಿ ಕೂಡಲೇ ಕೇಂದ್ರ ಉಪವಿಭಾಗದ ಎಸಿಪಿ ನೇತೃತ್ವದಲ್ಲಿ ತನಿಖೆಗೆ ಆದೇ ಶಿಸಲಾಗಿದೆ.
ತನಿಖೆಗೆ ಪತ್ರ
ಕಾಮತ್ ಅವರ ಆತ್ಮಹತ್ಯೆ ಪ್ರಕರಣದ ಬಗ್ಗೆ ಅನುಮಾನಗಳಿವೆ. ಅವರಿಗೆ ಯಾವುದೇ ಸಮಸ್ಯೆ ಇರಲಿಲ್ಲ. ನಾನು ಅವರ ಬಗ್ಗೆ ತಿಳಿದಿದ್ದೇನೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನಂಬಲು ಸಾಧ್ಯವಿಲ್ಲ ಎಂದು ಉದ್ಯಮಿ ಬಿ.ಆರ್.ಶೆಟ್ಟಿ ಅವರು ವಕೀಲರ ಮೂಲಕ ಮಂಗಳೂರು ಪೊಲೀಸ್ ಆಯುಕ್ತರು ಹಾಗೂ ರಾಜ್ಯ ಸರಕಾರಕ್ಕೆ ಶುಕ್ರವಾರ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತರು, “ಪತ್ರ ಶುಕ್ರವಾರ ನಮಗೆ ತಲುಪಿದೆ. ಆದರೆ ಅದಕ್ಕೂ ಮೊದಲೇ ಎಸಿಪಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ. ತನಿಖೆ ನಡೆಯುತ್ತಿದೆ’ ಎಂದು ತಿಳಿಸಿದ್ದಾರೆ.
ದೂರು ನೀಡಿಲ್ಲ
ಕಾಮತ್ ಅವರ ಸಾವಿನ ಬಗ್ಗೆ ಅವರ ಕುಟುಂಬಸ್ಥರು ಯಾವುದೇ ಸಂದೇಹ ವ್ಯಕ್ತಪಡಿಸಿ ದೂರು ನೀಡಿಲ್ಲ. ಆದಾಗ್ಯೂ ಯಾವುದೇ ಅನುಮಾನಗಳಿಗೆ ಆಸ್ಪದವಾಗಬಾರದೆಂಬ ಉದ್ದೇಶದಿಂದ ಎಸಿಪಿ ನೇತೃತ್ವದಲ್ಲಿಯೇ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಬ್ಬರೇ ಇದ್ದಾಗ ಕೃತ್ಯ
ರಾಮದಾಸ್ ಕಾಮತ್ ಅವರು ಪತ್ನಿಯನ್ನು ಮುಂಡ್ಕೂರಿಗೆ ಬಿಟ್ಟು ಬಂದಿದ್ದರು. ಮರುದಿನ ತಾನು ಕೂಡ ಮುಂಡ್ಕೂರಿಗೆ ಬರುವುದಾಗಿ ಹೇಳಿದ್ದರು. ಆದರೆ ಹೋಗಿರಲಿಲ್ಲ. ಪತ್ನಿ ಕರೆ ಮಾಡಿದಾಗ ಸ್ವೀಕರಿಸಲಿಲ್ಲ. ಆಗ ಪತ್ನಿ ಮಂಗಳೂರಿನಲ್ಲಿರುವ ತನ್ನ ತಂಗಿಯ ಮಕ್ಕಳಿಗೆ ತಿಳಿಸಿದರು. ಅವರು ಬಂದು ನೋಡಿದಾಗ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.