ಕಸ್ತೂರಿ ವರದಿ ಜಾರಿ ಬೇಡ: ನಳಿನ್
Team Udayavani, Mar 25, 2017, 1:25 PM IST
ಮಂಗಳೂರು: ಕರ್ನಾಟಕದಲ್ಲಿ ಕಸ್ತೂರಿ ರಂಗನ್ ವರದಿ ಜಾರಿಯ ಅಧಿಸೂಚನೆ ಯನ್ನು ಹಿಂಪಡೆಯಬೇಕೆಂದು ಲೋಕಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದರು.
ವರದಿಯ ಪರಿಸರ ಸೂಕ್ಷ್ಮ ವಲಯ ಅಧಿಸೂಚನೆಯನ್ನು ಕರ್ನಾಟಕದ ಜನತೆ ವಿರೋಧಿಸು ತ್ತಿದ್ದಾರೆ. ರಾಜ್ಯ ಸರಕಾರವೂ ಕೂಡ ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ ವ್ಯಕ್ತಪಡಿಸಿದೆ. ಅಧಿಸೂಚನೆ ಪ್ರಕಾರ 10 ಜಿಲ್ಲೆಗಳ 1,576 ಗ್ರಾಮಗಳೂ ಸೇರಿದಂತೆ 20,668 ಚದರ ಕಿ.ಮೀ. ಪರಿಸರ ಸೂಕ್ಷ್ಮ ವಲಯ ಪ್ರದೇಶದ ವ್ಯಾಪ್ತಿಗೆ ಬರುತ್ತದೆ. ಈ ಅಧಿಸೂಚನೆ ಜಾರಿಗೊಳಿಸಿದರೆ, ಈ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕೈಗೊಳ್ಳು ವಂತಿಲ್ಲ ಎಂದರು.
ಈ ವಲಯದ ವ್ಯಾಪ್ತಿಯ ಗ್ರಾಮಗಳಲ್ಲಿ ಶಾಲೆ, ಆಸ್ಪತ್ರೆ ಮತ್ತು ರಸ್ತೆಗಳ ನಿರ್ಮಾಣ ನಿಷೇಧಿಸಲ್ಪಡುತ್ತದೆ. ಭೂಮಂಜೂರಾತಿ ಪ್ರದೇಶದಲ್ಲಿ ಕೃಷಿ ಚಟುವಟಿಕೆ ನಡೆಸುವಂತಿಲ್ಲ. ಸದ್ಯ ಅಸ್ತಿತ್ವದಲ್ಲಿರುವ ಕಾಫಿ ಮತ್ತು ಟೀ ತೋಟಗಳಿಗೂ ಸಮಸ್ಯೆ ಯಾಗುತ್ತದೆ. ಪ್ರಮುಖವಾಗಿ ಆರ್ಥಿಕ ಬೆಳವಣಿಗೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಆದ್ದರಿಂದ ಈ ವರದಿಯನ್ನು ಜಾರಿಗೊಳಿಸದೆ ಹಿಂದಕ್ಕೆ ಪಡೆದುಕೊಳ್ಳಬೇಕು ಎಂದು ನಳಿನ್ ಕುಮಾರ್ ಕಟೀಲು ಆಗ್ರಹಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.