ಮುಸ್ಲಿಂ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಇಂದು ಬೃಹತ್ ಸಮಾವೇಶ
ಲಕ್ಷ ಜನರು ಭಾಗವಹಿಸುವ ನಿರೀಕ್ಷೆ
Team Udayavani, Jan 15, 2020, 1:30 AM IST
ಮಂಗಳೂರು: ಕೇಂದ್ರ ಸರಕಾರವು ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ವಿವಿಧ ಸಮಾನ ಮನಸ್ಕ ಸಂಘಟನೆಗಳ ಸಹಯೋಗದೊಂದಿಗೆ ಬುಧವಾರ ಮಧ್ಯಾಹ್ನ 2.30ಕ್ಕೆ ನಗರದ ಅಡ್ಯಾರ್ ಕಣ್ಣೂರು ರಾಷ್ಟ್ರೀಯ ಹೆದ್ದಾರಿ ಬಳಿಯ ಶಹಾ ಗಾರ್ಡನ್ ಮೈದಾನದಲ್ಲಿ ಸಮಾವೇಶ ಆಯೋಜಿಸಲಾಗಿದ್ದು, ಸುಮಾರು ಒಂದು ಲಕ್ಷಕ್ಕಿಂತ ಅಧಿಕ ಜನರು ಭಾಗವಹಿಸುವ ನಿರೀಕ್ಷೆಯಿದೆ.
ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಜಿ ಕೆ.ಎಸ್. ಮುಹಮ್ಮದ್ ಮಸೂದ್ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆಯಲಿದ್ದು, “ನಾವು ಭಾರತೀಯರು ತಂಡ’ದ ವಿಶ್ರಾಂತ ಐಎಎಸ್ ಅಧಿಕಾರಿಗಳಾದ ಹರ್ಷ್ ಮಂದರ್ ಹಾಗೂ ಕಣ್ಣನ್ ಗೋಪಿನಾಥನ್, ವಿಶ್ರಾಂತ ನ್ಯಾಯಮೂರ್ತಿ ಗೋಪಾಲಗೌಡ, ಮಾನವ ಹಕ್ಕುಗಳ ಹೋರಾಟಗಾರ ಶಿವಸುಂದರ್, ನ್ಯಾಯವಾದಿ ಸುಧೀರ್ ಕುಮಾರ್ ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ.
ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್, ಉಡುಪಿ ಜಿಲ್ಲಾ ಖಾಝಿ ಅಲ್‌ಹಾಜ್ ಬೇಕಲ ಇಬ್ರಾಹಿಂ ಮುಸ್ಲಿಯಾರ್, ಉಳ್ಳಾಲ ಖಾಝಿ ಸೆಯ್ಯದ್ ಪಝಲ್ ಕೋಯಮ್ಮ ತಂಗಳ್, ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಯು.ಕೆ. ಮೋನು, ಮೈಸೂರು ಹುರಿಲಿಂಗ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಮಂಗಳೂರು ಬಿಷಪ್ ಡಾ| ಪೀಟರ್ ಪಾವ್É ಸಲ್ಡಾನ್ಹಾ, ಪ್ರಮುಖರಾದ ಪಾವ್É ರೂಫಿ ಡಿ ಕಾಸ್ತಾ, ಯು.ಟಿ. ಖಾದರ್, ಬಿ.ಎಂ. ಫಾರೂಕ್, ಬಿ.ಎ. ಮೊದಿನ್ ಬಾವಾ, ಡಾ| ಅಬ್ದುಲ್ ರಶೀದ್ ಝೈನಿ, ಯು.ಕೆ. ಅಬ್ದುಲ್ ಅಝೀಝ್ ದಾರಿಮಿ, ಮುಹಮ್ಮದ್ ಕುಂಞಿ, ಮುಹಮ್ಮದ್ ಶಾಕಿಬ್, ಎಂ.ಜಿ. ಮುಹಮ್ಮದ್, ರಫೀವುದ್ದೀನ್ ಕುದ್ರೋಳಿ, ಬಿ.ಕೆ. ಇಮಿ¤ಯಾಝ್ ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಕೆ.ಎಸ್. ಮುಹಮ್ಮದ್ ಮಸೂದ್ ತಿಳಿಸಿದ್ದಾರೆ.
ಕಾಂಗ್ರೆಸ್ ಬೆಂಬಲ
ಮುಸ್ಲಿಂ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆಗೆ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಬೆಂಬಲ ಘೋಷಿಸಿದೆ. ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಸದಸ್ಯರು ಸೇರಿದಂತೆ ಕಾರ್ಪೊರೇಟರ್‌ಗಳು, ಜಿಲ್ಲಾ, ತಾಲೂಕು ಮತ್ತು ಗ್ರಾ.ಪಂ. ಸದಸ್ಯರು, ಪಕ್ಷದ ಮುಖಂಡರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ.
ರಾಷ್ಟ್ರಧ್ವಜಕ್ಕೆ ಮಾತ್ರ ಅವಕಾಶ; ಶಾಂತಿ ಸಂಯಮಕ್ಕೆ ಕರೆ
ಒಂದು ಕೈಯಲ್ಲಿ ರಾಷ್ಟ್ರಧ್ವಜ, ಮತ್ತೂಂದರಲ್ಲಿ ಸಂವಿಧಾನ, ಮನದಲ್ಲಿ ಅಹಿಂಸೆ, ಬಾಯಲ್ಲಿ ಜನಗಣ ಮನ ಇದು ಸಮಾವೇಶದ ಧ್ಯೇಯವಾಕ್ಯ. ಸಮಾವೇಶದಲ್ಲಿ ಭಾಗವಹಿಸುವವರು ರಾಷ್ಟ್ರಧ್ವಜ ಮತ್ತು ಮುಸ್ಲಿಮ್ ಸೆಂಟ್ರಲ್ ಕಮಿಟಿ ಸಿದ್ಧಪಡಿಸಿರುವ ಪ್ಲಕಾರ್ಡ್, ಘೋಷಣೆಗಳಿಗೆ ಮಾತ್ರ ಅವಕಾಶವಿದೆ. ಯಾವುದೇ ಪಕ್ಷ, ಸಂಘಟನೆಯ ಧ್ವಜ, ಘೋಷಣೆಗಳಿಗೆ ಅವಕಾಶವಿರುವುದಿಲ್ಲ. ಸಮಾವೇಶದಲ್ಲಿ ಭಾಗವಹಿಸುವವರು ಶಾಂತಿ, ಸಂಯಮ ಪಾಲಿಸಬೇಕು ಮತ್ತು ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಮಹಿಳೆಯರು ಮತ್ತು ಮಕ್ಕಳು ಸಮಾವೇಶದಲ್ಲಿ ಭಾಗವಹಿಸುವ ಆವಶ್ಯಕತೆಯಿಲ್ಲ ಎಂದು ಕೆ.ಎಸ್. ಮುಹಮ್ಮದ್ ಮಸೂದ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Kulur: ಗೈಲ್ ಪೈಪ್‌ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.