ಕಟೀಲಿನಲ್ಲಿ ನಾಗಮಂಡಲೋತ್ಸವ

Team Udayavani, Jan 31, 2020, 10:36 PM IST

kat-3

ದೇವರು ಜಳಕದಿಂದ ಬರುತ್ತಿರುವುದು.

ಕಟೀಲು: ಸಾವಿರ ಸೀಮೆಯ ಆದಿಮಾಯೆ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಗುರುವಾರ ಜರಗಿದ ವಿಜೃಂಭಣೆಯ ಬ್ರಹ್ಮಕಲಶೋತ್ಸವದ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಸಾಕ್ಷಿಯಾಗಿದ್ದರು. ಕಟೀಲಿನ ಯಾವ ಭಾಗದಲ್ಲಿ ನೋಡಿದರೂ ಕೂಡ ಭಕ್ತ ಗಣವೇ ಭಕ್ತಿ ಭಾವಪರವಶದಿಂದ ತಾಯಿ ಆದಿ ಮಾಯೆಯನ್ನು ಸ್ಮರಿಸುತ್ತಿದ್ದು ಕಂಡುಬಂದಿತ್ತು. ಇಂತಹ ಈ ಕ್ಷಣಕ್ಕೆ ಕಟೀಲು ಕ್ಷೇತ್ರವೂ ಮತ್ತೂಮ್ಮೆ ಶುಕ್ರವಾರ ಸಿದ್ಧಗೊಳ್ಳುತ್ತಿರುವುದು ಕಂಡುಬಂತು.

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವೈದಿಕ ವಿಧಿವಿಧಾನಗಳಿಂದ ಫೆ. 1 ರಂದು ನಾಗಮಂಡಲೋತ್ಸವ ಜರಗಲಿದ್ದು ಕ್ಷೇತ್ರದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸುಮಾರು 2 ಲಕ್ಷ ಭಕ್ತರು ಸೇರುವ ನಿರೀಕ್ಷೆ ಇದೆ. ಒಂದು ಲಕ್ಷ ಜನರಿಗೆ ಅನ್ನ ಪ್ರಸಾದ ನಡೆಯಲಿದೆ.

ಕಟೀಲಿನ ಮೂಲಸ್ಥಳವಾಗಿರುವ ಕುದ್ರುವಿನಲ್ಲಿ ಈಗಾಗಲೇ ನಾಗಮಂಡಲದ ಸ್ಥಳದಲ್ಲಿ ತಗಡು ಚಪ್ಪರ ಹಾಕಲಾಗಿದ್ದು ಸಕಲ ರೀತಿ ಯಲ್ಲಿ ಸನ್ನದ್ಧವಾಗಿದೆ. ಕುದ್ರು ಮೂಲ ವನಕ್ಕೆ ಹೋಗಲು ಎರಡು ಸೇತು ವೆಗಳು ಇವೆ. ನಾಗ ಮಂಡಲ ಕ್ಕೋಸ್ಕರ ನದಿಗೆ ಮಣ್ಣು ತುಂಬಿಸಿ ಹೊಸ ಸೇತುವೆ ನಿರ್ಮಿಸಲಾಗಿದೆ.

10 ಕಡೆ ಎಲ್‌ಸಿಡಿ ಪರದೆ
ನಾಗಮಂಡಲದಲ್ಲಿ ಸ್ಥಳ ಕಿರಿದಾಗಿದ್ದು ನಾಗಮಂಡಲ ವೀಕ್ಷಣೆಗೆ ಬಸ್‌ ನಿಲ್ದಾಣ ದೇವಸ್ಥಾನ ರಥಬೀದಿ, ಭೋಜನ ಶಾಲೆ ವಿವಿಧ 10 ಕಡೆಗಳಲ್ಲಿ ಎಲ್‌ಸಿಡಿ ಪರದೆ ವ್ಯವಸ್ಥೆ ಮಾಡಲಾಗಿದೆ.

ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಸರತಿ ಸಾಲು ಮಾಡಿದ್ದು ಎಲ್ಲ ಭಕ್ತರಿಗೂ ದೇವರ ದರ್ಶನ ಮಾಡಲು ಅವಕಾಶವಿದೆ. ಕಟೀಲು ದೇವಸ್ಥಾನ ಹಾಗೂ ವಿವಿಧ ಕಡೆಗಳಲ್ಲಿ ಪಾನಕದ ವ್ಯವಸ್ಥೆ ಮಾಡ ಲಾಗಿದೆ. ನಾಳೆಯೂ ಸುಮಾರು 3,000 ಸ್ವಯಂಸೇವಕರು ನಾಗ ಮಂಡಲದ ವ್ಯವಸ್ಥೆಗೆ ಸಹಕರಿಸಲಿದ್ದಾರೆ.

ಫೆ. 1ರಂದು ಶನಿವಾರ ನಾಗ ಮಂಡ ಲೋತ್ಸವ ಪ್ರಯುಕ್ತವಾಗಿ ಕಟೀಲಿಗೆ ಬರುವ ಭಕ್ತರ ಅನುಕೂಲಕ್ಕಾಗಿ ಬೆಳಗ್ಗಿನಿಂದ ರಾತ್ರಿ 11.30ರ ವರೆಗೆ (ಕಟೀಲು ರೂಟಿನಲ್ಲಿ ಸಂಚರಿಸುವ ಬಸ್‌ಗಳು) ಉಚಿತ ಬಸ್‌ ಸೇವೆ ನೀಡಲಾಗುವುದು ಎಂದು ಕಿನ್ನಿ ಗೋಳಿ ವಲಯ ಬಸ್‌ ಮಾಲಕರ ಸಂಘದ ಅಧ್ಯಕ್ಷ ದುರ್ಗಾಪ್ರಸಾದ್‌ ಹೆಗ್ಡೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

6

Mangaluru; ನಗರದ ಇನ್ನಷ್ಟು ಕಡೆ ಬೀದಿ ಬದಿ ವ್ಯಾಪಾರಸ್ಥರ ವಲಯ: ಮೇಯರ್‌

5

Mangaluru: ಇಂದು ಕ್ರಿಸ್ಮಸ್‌ ಜಾಗರಣೆ ವಿಶೇಷ ಬಲಿಪೂಜೆ

2

Mangaluru; ಒಡಿಶಾದ ಗುಜ್ಜೆದೋಸೆ ಈಗ ಕರಾವಳಿಯಲ್ಲೂ ಪ್ರಯೋಗ

1

Kinnigoli-ಗುತ್ತಕಾಡು ರಸ್ತೆಯಂಚಿನಲ್ಲಿ ಅಪಾಯಕಾರಿ ಹೊಂಡಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗದ್ಗೀತೆಯ ಪ್ರಸ್ತುತತೆ ವಿಶೇಷ ಸಂವಾದ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.