ಮಂಗಳೂರು ರೈಲ್ವೇ ವಿಭಾಗ ರಚನೆಗೆ ನಳಿನ್ ಆಗ್ರಹ
Team Udayavani, Mar 15, 2020, 6:51 AM IST
ಮಂಗಳೂರು: ಮಂಗಳೂರಿನಲ್ಲಿ ರೈಲು ಸೇವೆ 1907ರಲ್ಲಿ ಆರಂಭಗೊಂಡಿದ್ದು 111 ವರ್ಷಗಳ ಇತಿಹಾಸವಿದೆ. ಆದರೆ ಈ ಭಾಗದಲ್ಲಿ ರೈಲ್ವೇ ಸೇವೆ ಗಳನ್ನು ಅಭಿವೃದ್ಧಿಪಡಿಸಲು ಅನೇಕ ವಿಚಾರಗಳು ಸಮಸ್ಯೆಗಳನ್ನು ಸೃಷ್ಟಿಸಿವೆ. ಆದುದರಿಂದ ಮಂಗಳೂರಿಗೆ ಪ್ರತ್ಯೇಕ ರೈಲ್ವೇ ವಿಭಾಗ ನೀಡುವುದು ಅವಶ್ಯವಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಲೋಕಸಭೆಯಲ್ಲಿ ಆಗ್ರಹಿಸಿದ್ದಾರೆ.
ಲೋಕಸಭೆಯಲ್ಲಿ ಶುಕ್ರವಾರ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಾಕಷ್ಟು ಸ್ಥಳಾವಕಾಶವಿರುವ ಮಂಗಳೂರು ಜಂಕ್ಷನ್‌ನಲ್ಲಿ ವಿಭಾಗೀಯ ಕೇಂದ್ರ ಕಚೇರಿ ನಿರ್ಮಿಸಬಹುದಾಗಿದೆ. ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣ ದಕ್ಷಿಣ ರೈಲ್ವೇಯ 7 ಕಿ.ಮೀ., ಕೊಂಕಣ ರೈಲ್ವೇಯ 18 ಕಿ.ಮೀ. ಮತ್ತು ನೈಋತ್ಯ ರೈಲ್ವೇಯ 6 ಕಿ.ಮೀ. ವ್ಯಾಪ್ತಿಯನ್ನು ಹೊಂದಿದೆ. ಹೀಗಾಗಿ ಕೊಂಕಣ ರೈಲ್ವೇಯ ಅಧೀನದಲ್ಲಿ ಪ್ರತ್ಯೇಕ ಮಂಗಳೂರು ವಿಭಾಗ ರಚಿಸಬೇಕು ಎಂದರು.
ವಿಶ್ವದರ್ಜೆ ನಿಲ್ದಾಣವಾಗಿಸಿ
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಹೊಸ ಕಟ್ಟಡ ನಿರ್ಮಿಸಿ ವಿಶ್ವದರ್ಜೆಯ ನಿಲ್ದಾಣವಾಗಿ ಅಭಿವೃದ್ಧಿಪಡಿಸಬೇಕು ಎಂದರು.
ಮಂಗಳೂರು-ಬೆಂಗಳೂರು ರೈಲುಮಾರ್ಗದ ಹಳಿ ದ್ವಿಗುಣ ಮತ್ತು ವಿದ್ಯುದೀಕರಣಗೊಳಿಸಬೇಕು. ಸುಬ್ರಹ್ಮಣ್ಯ ಮಾರ್ಗದಿಂದ ಮಂಗಳೂರು ವರೆಗೆ 8 ಕಡೆ ಮೇಲ್ಸೇತುವೆ ಅಥವಾ ಕೆಳಸೇತುವೆ ನಿರ್ಮಿಸಬೇಕು, ಮಂಗಳೂರಿನಿಂದ ಎಲ್ಲ ಜಿಲ್ಲಾ ಹಾಗೂ ರಾಜ್ಯಗಳ ಕೇಂದ್ರ ಸ್ಥಾನಗಳಲ್ಲಿ ರೈಲ್ವೇ ಸಂಪರ್ಕ ಕಲ್ಪಿಸಬೇಕು, ಮಂಗಳೂರು-ಬೀದರ್, ಮಂಗಳೂರು-ತಿರುಪತಿ ಹೊಸದಾಗಿ ರೈಲು ಸಂಚಾರ ಆರಂಭಿಸಬೇಕು, ಮಂಗಳೂರಿನಿಂದ ರಾಮೇಶ್ವರಕ್ಕೆ ನೇರ ರೈಲು ಸಂಚಾರ, ಮಂಗಳೂರು-ವಿಜಯಪುರ ರೈಲು ಅನ್ನು ಖಾಯಂಗೊಳಿಸಬೇಕು, ಮಂಗಳೂರು-ಮಡಂಗಾವ್ ರೈಲನ್ನು ಸೂಪರ್‌ಫಾಸ್ಟ್ ರೈಲು ಆಗಿ ಪರಿವರ್ತಿಸಬೇಕು ಹಾಗೂ ಥಾಣೆ ಅಥವಾ ಸಿಎಸ್‌ಟಿಗೆ ವಿಸ್ತರಿಸಬೇಕು ಮುಂತಾದ ಬೇಡಿಕೆಗಳನ್ನು ಅವರು ರೈಲ್ವೇ ಸಚಿವರಲ್ಲಿ ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.