ಸಂಘಟನೆಗಳಿಂದ ಸಮಾಜ ಕಟ್ಟುವ ಕೆಲಸವಾಗಲಿ: ನಳಿನ್‌ಕುಮಾರ್ ಕಟೀಲು
ಕಾವೂರು ಬಂಟರ ಸಂಘದ ವಾರ್ಷಿಕ ಮಹಾಸಭೆ
Team Udayavani, Jul 11, 2019, 5:26 AM IST
ಕಾವೂರು: ಸಮಾಜ ಕಟ್ಟುವ ಕೆಲಸ ಸಂಘಟನೆಗಳ ಮೂಲಕ ಆಗಬೇಕಿದೆ. ಈ ನಿಟ್ಟಿನಲ್ಲಿ ಕಾವೂರು ಬಂಟರ ಸಂಘವು ಮಾದರಿಯಾಗಿದೆ ಎಂದು ಸಂಸದ ನಳಿನ್‌ಕುಮಾರ್ ಕಟೀಲು ಹೇಳಿದರು.
ಕಾವೂರು ಸಹಕಾರಿ ಸಭಾಂಗಣದಲ್ಲಿ ಜರಗಿದ ಕಾವೂರು ಬಂಟರ ಸಂಘದ 18ನೇ ವಾರ್ಷಿಕ ಮಹಾಸಭೆಯಲ್ಲಿ ಸಮ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಸಂಘವು ಉತ್ತಮವಾದ ಸಮಾ ಜಮುಖೀ ಚಟುವಟಿಕೆಗಳನ್ನು ಹಮ್ಮಿ ಕೊಳ್ಳುತ್ತಿರುವುದು ಶ್ಲಾಘನೀಯ. ತನ್ನ ಇತಿಮಿತಿಯೊಳಗೆ ಬಂಟರ ಸಂಘದ ಬೇಡಿಕೆಗಳನ್ನು ಈಡೇರಿಸುವಲ್ಲಿ ಪ್ರಾಮಾ ಣಿಕ ಪ್ರಯತ್ನ ಮಾಡುವುದಾಗಿ ಅವರು ಹೇಳಿದರು.
ಕಾವೂರು ಬಂಟರ ಸಂಘದ ಅಧ್ಯಕ್ಷ ಆನಂದ್ ಶೆಟ್ಟಿ ಅಡ್ಯಾರ್ ಅಧ್ಯಕ್ಷತೆ ವಹಿಸಿದ್ದರು.
ಶಾಸಕ ಡಾ| ಭರತ್ ಶೆಟ್ಟಿ ವೈ., ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್‌ಕುಮಾರ್ ರೈ ಮಾಲಾಡಿ, ಪ್ರ. ಕಾರ್ಯದರ್ಶಿ ವಸಂತ ಶೆಟ್ಟಿ, ವರ್ಲ್ಡ್ಬಂಟ್ಸ್ ವೆಲ್ಫೆàರ್ ಟ್ರಸ್ಟ್ ಸಂಘಟನ ಕಾರ್ಯದರ್ಶಿ ರಾಜಗೋಪಾಲ ರೈ ಮುಖ್ಯ ಅತಿಥಿಗಳಾಗಿದ್ದರು.
ರಾಮಣ್ಣ ಶೆಟ್ಟಿ ಮುಗಿಪು, ಕಿಶೋರ್ ರೈ ಮರಕಡ, ಎಂ. ಎಸ್. ಶೆಟ್ಟಿ ಸರಪಾಡಿ, ಭಾಸ್ಕರ ಕೊಂಡೆ, ಕಾವೂರು ಬಂಟರ ಸಂಘದ ಉಪಾಧ್ಯಕ್ಷರಾದ ನಿಟ್ಟೆ ಶಶಿಧರ್ ಶೆಟ್ಟಿ, ಗಿರಿಜಾತೆ ಆರ್. ಭಂಡಾರಿ, ಸುಧಾ ಕರ ಶೆಟ್ಟಿ ಮುಗ್ರೋಡಿ, ವಾಮನ ಶೆಟ್ಟಿ ಉರುಂದಾಡಿ, ತುಕಾರಾಮ್ ಶೆಟ್ಟಿ ತೋಡ್ಲ, ಕ್ರೀಡಾ ಕಾರ್ಯದರ್ಶಿ ಚಂದ್ರರಾಜ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಗಣೇಶ್ ಮಲ್ಲಿ, ಸಂಘಟನ ಕಾರ್ಯದರ್ಶಿ ಸುಧಾಕರ ಆಳ್ವ, ಮಹಿಳಾ ವಿಭಾಗ ಕಾರ್ಯದರ್ಶಿ ರೇಖಾ ವಿ. ಶೆಟ್ಟಿ, ಪ್ರಭಾಕರ ಶೆಟ್ಟಿ, ಚಂದ್ರ ಶೆಟ್ಟಿ ಕೂಳೂರು ಉಪಸ್ಥಿತರಿದ್ದರು.
ಕಾವೂರು ಬಂಟರ ಸಂಘದ ಪ್ರ.ಕಾರ್ಯದರ್ಶಿ ಅವಿನಾಶ್ ನಾಯ್ಕ ಸ್ವಾಗತಿಸಿದರು. ಖಜಾಂಚಿ ಲಕ್ಷ್ಮೀ ನಾರಾಯಣ ಶೆಟ್ಟಿ ಲೆಕ್ಕ ಪತ್ರ ಮಂಡಿಸಿದರು. ಮಹಿಳಾ ವಿಭಾಗ ಅಧ್ಯಕ್ಷೆ ಸುಜಯಾ ಎಸ್. ಶೆಟ್ಟಿ ವಂದಿಸಿದರು.
ಸದಾಶಿವ ಶೆಟ್ಟಿ ಬೊಲ್ಪುಗುಡ್ಡೆ ನಿರೂಪಿಸಿದರು. ಬಳಿಕ ಬಂಟರ ಸಂಘ ಮಹಿಳಾ ವಿಭಾಗದಿಂದ ಮನೋರಂಜನೆ ಕಾರ್ಯಕ್ರಮ ಜರಗಿತು.
ವಿದ್ಯಾರ್ಥಿವೇತನ ವಿತರಣೆ
ಪ್ರತಿಭಾನ್ವಿತರಿಗೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿವೇತನ ವಿತರಿಸ ಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.