ಧ್ಯೇಯ ನಿಷ್ಠ-ದೇಶ ನಿಷ್ಠ ರಾಜಕಾರಣ ಬಿಜೆಪಿ ಸಂಕಲ್ಪ :ನಳಿನ್ ಕುಮಾರ್ ಕಟೀಲು
Team Udayavani, Nov 13, 2021, 6:47 AM IST
ಮಂಗಳೂರು: ಧ್ಯೇಯ ನಿಷ್ಠ -ದೇಶನಿಷ್ಠ ರಾಜಕಾರಣ ಬಿಜೆಪಿಯ ಸಂಕಲ್ಪವಾಗಿದ್ದು ಈ ಕಾರ್ಯದಲ್ಲಿ ಪಕ್ಷದ ಪ್ರತಿಯೋರ್ವ ಕಾರ್ಯಕರ್ತರು ಸಮರ್ಪಣ ಭಾವದಿಂದ ಸಮರ್ಪಿಸಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಹೇಳಿದ್ದಾರೆ.
ನಗರದ ಟಿ.ವಿ. ರಮಣ್ ಪೈ ಹಾಲ್‌ನಲ್ಲಿ ಆಯೋಜಿಸಿರುವ ಬಿಜೆಪಿ ಕರ್ನಾಟಕ ಪ್ರಕೋಷ್ಠಗಳ ಎರಡು ದಿನಗಳ ರಾಜ್ಯಮಟ್ಟದ ಚಿಂತನ ವರ್ಗವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರೀಯ ವಿಚಾರಧಾರೆಯ ಭದ್ರ ತಳಹದಿಯಲ್ಲಿ ಬೆಳೆದು ಬಂದಿರುವ ಬಿಜೆಪಿ ಎಂದೂ ತನ್ನ ಸಿದ್ಧಾಂತದಲ್ಲಿ ರಾಜಿ ಮಾಡಿಕೊಂಡಿಲ್ಲ. ಬಿಜೆಪಿಗೆ ರಾಜಕಾರಣ ವೃತ್ತಿಯಲ್ಲ. ಅದೊಂದು ವ್ರತ. ವ್ಯಕ್ತಿಗಿಂತ ಪಕ್ಷ ಮುಖ್ಯ. ಪಕ್ಷಗಿಂತ ದೇಶ ಮುಖ್ಯ; ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಸಿದ್ಧಾಂತದಡಿ ಬಿಜೆಪಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಸ್ವಚ್ಛ, ಭ್ರಷ್ಟ ರಹಿತ ಆಡಳಿತವನ್ನು ನೀಡಿದ ಹೆಗ್ಗಳಿಕೆಯನ್ನು ಬಿಜೆಪಿ ಹೊಂದಿದೆ. ಅಟಲ್ ಬಿಹಾರಿ ವಾಜಪೇಯಿಯವರ ಆರು ವರ್ಷಗಳ ಆಡಳಿತ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಈವರೆಗಿನ ಆಡಳಿತದಲ್ಲಿ ಎಲ್ಲೂ ಭ್ರಷ್ಟಾಚಾರ ನಡೆದಿರುವ ಬಗ್ಗೆ ಆರೋಪಗಳಿಲ್ಲ. ಆದರೆ ಕಾಂಗ್ರೆಸ್ ಆಡಳಿತದಲ್ಲಿ ಲಾಲ್‌ಬಹದ್ದೂರ್ ಶಾಸ್ತ್ರಿಯವರು ಪ್ರಧಾನಿಯಾಗಿದ್ದ ಅವಧಿಯನ್ನು ಹೊರತುಪಡಿಸಿ ಉಳಿದಂತೆ ಎಲ್ಲಾ ಪ್ರಧಾನಿಗಳ ಕಾಲದಲ್ಲೂ ಭ್ರಷ್ಟಾಚಾರಗಳು ನಡೆದಿವೆ. ಬಿಜೆಪಿಯದ್ದು ಭ್ರಷ್ಟಾಚಾರ ರಹಿತ ಆಡಳಿತವಾಗಿದ್ದರೆ ಕಾಂಗ್ರೆಸ್‌ನದ್ದು ಭ್ರಷ್ಟಾಚಾರ ಸಹಿತ ಆಡಳಿತ ಎಂದರು.
ಮಹಾತ್ಮಾ ಗಾಂಧೀಜಿಯವರು ರಾಮರಾಜ್ಯದ ಕನಸು ಕಂಡಿದ್ದರಲ್ಲದೇ ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸ ಬೇಕೆಂದು ಹೇಳಿದ್ದರು. ಕಾಂಗ್ರೆಸ್ ಅಧಿಕಾರದಲ್ಲಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಆಗುವ ಅನಾಹುತಗಳನ್ನು ಹಾಗೂ ರಾಮ ರಾಜ್ಯದ ಕನಸು ಸಾಕಾರಗೊಳ್ಳಲು ಸಾಧ್ಯವಿಲ್ಲ ಎಂಬುದನ್ನು ಅವರು ಮೊದಲೇ ಉಹಿಸಿ ಆ ರೀತಿ ಹೇಳಿದ್ದರು ಎಂದರು.
ದೇಶದ ರಾಜಕೀಯ ಇತಿಹಾಸ ಗಮನಿಸಿದರೆ ಕಾಂಗ್ರೆಸ್, ಜನತಾ ಪರಿವಾರ ಸಾಕಷ್ಟು ಬಾರಿ ವಿಭಜನೆಗೊಂಡಿದೆ. ಆದರೆ ಬಿಜೆಪಿ ಸಂಘಟನಾತ್ಮಕವಾಗಿ ಬಲಿಷ್ಠವಾಗಿ ಬೆಳೆದಿದೆ. ನಮ್ಮ ವಿಚಾರಧಾರೆ, ಕಾರ್ಯಕ್ರಮಗಳಲ್ಲಿ ಎಲ್ಲೂ ವ್ಯತ್ಯಾಸಗಳಾಗಿಲ್ಲ ಎಂದವರು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ದ.ಕ. ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಪ್ರಸ್ತಾವನೆಗೈದರು. ರಾಜ್ಯ ಸಂಯೋಜಕ ಭಾನು ಪ್ರಕಾಶ್, ಸಹ ಸಂಯೋಜಕ ಡಾ| ಶಿವ ಯೋಗಿ ಸ್ವಾಮಿ ಉಪಸ್ಥಿತರಿದ್ದರು. ಕೈಗಾರಿಕಾ ಪ್ರಕೋಷ್ಠ ಸಂಚಾಲಕ ಪ್ರದೀಪ್ ಪೈ ಸ್ವಾಗತಿಸಿದರು. ನಗರ ಪ್ರಕೋಷ್ಠ ಸಂಚಾಲಕ ಪ್ರೇಮಾನಂದ ಶೆಟ್ಟಿ ವಂದಿಸಿದರು.
ಚಿಂತನ ವರ್ಗ ಮಂಗಳೂರಿನಲ್ಲಿ ಪ್ರಥಮ:
ಬಿಜೆಪಿ ಪ್ರಕೋಷ್ಠಗಳ ಚಿಂತನ ವರ್ಗ ಪ್ರಥಮವಾಗಿ ಮಂಗಳೂರಿನಲ್ಲಿ ನಡೆಯುತ್ತಿದೆ. ರಾಜ್ಯ ಬಿಜೆಪಿಯ ಎಲ್ಲ 24 ಪ್ರಕೋಷ್ಠಗಳ ಸಂಯೋಜಕರು, ಸಹ ಸಂಯೋಜಕರು ಹಾಗೂ ರಾಜ್ಯ ಸಮಿತಿ ಸದಸ್ಯರು ಸೇರಿ ಒಟ್ಟು 225 ಮಂದಿ ಭಾಗವಹಿಸುತ್ತಿದ್ದಾರೆ. ಆರ್ಥಿಕ ನೀತಿ, ಸಂಘಟನಾತ್ಮಕ ವಿಚಾರ, ಕೇಂದ್ರ ಸರಕಾರದ ಕಾನೂನು ಹಾಗೂ ಅದರ ಪರಿಣಾಮ, ಸಂಘಟನಾತ್ಮಕವಾಗಿ ಪ್ರಕೋಷ್ಠ, ಜವಾಬ್ದಾರಿಗಳ ಕುರಿತು ಪ್ರಶಿಕ್ಷಣ ಜರಗಲಿದೆ. ಶನಿವಾರ ಅಪರಾಹ್ನ 1 ಗಂಟೆಗೆ ಚಿಂತನ ವರ್ಗದ ಸಮಾರೋಪ ನಡೆಯಲಿದ್ದು, ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.