ಫ್ಲೈಓವರ್ ತುರ್ತು ಕಾಮಗಾರಿಗೆ ಸಚಿವ ಗಡ್ಕರಿಗೆ ನಳಿನ್ ಕುಮಾರ್ ಮನವಿ
Team Udayavani, Jul 26, 2018, 3:35 AM IST
ಮಂಗಳೂರು: ನಗರದ ಪಂಪ್ವೆಲ್ ಹಾಗೂ ತೊಕ್ಕೊಟ್ಟು ಫ್ಲೈಓವರ್ ಕಾಮಗಾರಿಯನ್ನು ಅತ್ಯಂತ ತುರ್ತಾಗಿ ಪೂರ್ಣಗೊಳಿಸುವ ಸಂಬಂಧ ಗುತ್ತಿಗೆದಾರ ಸಂಸ್ಥೆ ನವಯುಗದ ಜತೆ ಸಭೆ ನಡೆಸಿ ಸ್ಪಷ್ಟ ನಿರ್ದೇಶನ ನೀಡಬೇಕು ಹಾಗೂ ಕಾಮಗಾರಿ ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ಬುಧವಾರ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಹೊಸದಿಲ್ಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ನಳಿನ್ ಅವರು, ಮಂಗಳೂರಿನಲ್ಲಿ ಎರಡು ಫ್ಲೈಓವರ್ ಕಾಮಗಾರಿ ನಿಧಾನವಾಗಿರುವುದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ಈ ಬಗ್ಗೆ ಸಂಬಂಧಪಟ್ಟ ಸಂಸ್ಥೆಗೆ ಸೂಚನೆ ನೀಡಬೇಕು ಎಂದು ಮನವಿ ಮಾಡಿದರು. ಕುಳಾಯಿಯಲ್ಲಿ ನೂತನ ಮೀನುಗಾರಿಕಾ ಜೆಟ್ಟಿ ನಿರ್ಮಾಣಕ್ಕೆ ಯೋಜಿಸಲಾಗಿದ್ದು, ಇದರ ಶಿಲಾನ್ಯಾಸಕ್ಕೆ ಆಗಮಿಸುವಂತೆ ಸಚಿವರನ್ನು ವಿನಂತಿಸಿಕೊಂಡರು. ಮೀನುಗಾರ ಮುಖಂಡ ರಾಮಚಂದ್ರ ಬೈಕಂಪಾಡಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.