ದುಷ್ಕರ್ಮಿಗಳ ಶೀಘ್ರ ಬಂಧನಕ್ಕೆ ನಳಿನ್ ಆಗ್ರಹ
Team Udayavani, Aug 22, 2017, 7:15 AM IST
ಮಂಗಳೂರು: ಪಶ್ಚಿಮ ವಲಯ ಐಜಿಪಿ ಅವರ ಸರಕಾರಿ ನಿವಾಸದ ಆವರಣದಿಂದಲೇ ಗಂಧದ ಮರಗಳನ್ನು ಕಳವು ಮಾಡಿರುವುದು ಗಂಭೀರ ಪ್ರಕರಣವಾಗಿದ್ದು ಕೃತ್ಯ ನಡೆಸಿರುವ ದುಷ್ಕರ್ಮಿಗಳನ್ನು ಪತ್ತೆಹಚ್ಚಿ ಕೂಡಲೇ ಬಂಧಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲು ಆಗ್ರಹಿಸಿದ್ದಾರೆ.
ನಾಲ್ಕು ಜಿಲ್ಲೆಗಳ ಜವಾಬ್ದಾರಿಯನ್ನು ಹೊಂದಿರುವ ಉನ್ನತ ಪೊಲೀಸ್ ಅಧಿಕಾರಿಯೋರ್ವರ ನಿವಾಸದಲ್ಲೇ ಈ ರೀತಿಯ ಕೃತ್ಯ ನಡೆದಿದ್ದರೂ ಇದನ್ನು ಗಂಭೀರವಾಗಿ ಪರಿಗಣಿಸದಿರುವುದು ಖೇದಕರವಾಗಿದೆ. ದುಷ್ಕರ್ಮಿಗಳನ್ನು ಶೀಘ್ರ ಬಂಧಿಸದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸೂಕ್ತ ತನಿಖೆಯಾಗಲಿ
ಐಜಿಪಿ ಅವರ ಸರಕಾರಿ ಬಂಗ್ಲೆ ಆವರಣದಲ್ಲಿದ್ದ ಶ್ರೀಗಂಧದ ಮರ ವನ್ನು ದುಷ್ಕರ್ಮಿಗಳು ಕಳವು ಮಾಡಿರುವುದು ಸಣ್ಣ ವಿಚಾರವಲ್ಲ. ಹಿರಿಯ ಪೊಲೀಸ್ ಅಧಿಕಾರಿಗಳ ನಿವಾಸಕ್ಕೆ ಕಳ್ಳರು ಕಾಲಿಡುತ್ತಾರೆ ಎಂದರೆ ಇನ್ನು ಜನಸಾಮಾನ್ಯರ ಪಾಡೇನು ಎಂದು ಬಿಜೆಪಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ.ಐಜಿಪಿ ಅವರ ಬಂಗ್ಲೆ ಆವರಣದಿಂದ ಶ್ರೀಗಂಧದ ಮರ ಕಳವು ಆಗುತ್ತಿರು ವುದು ಇದೇ ಮೊದಲಲ್ಲ.
ಈ ಹಿಂದೆ ಸತ್ಯನಾರಾಯಣ ರಾವ್ ಅವರು ಐಜಿಪಿಯಾಗಿದ್ದ ಅವಧಿಯಲ್ಲಿ ಇಲ್ಲಿಂದ ಬೃಹತ್ ಗಂಧದ ಮರ ಕಳವು ಆಗಿತ್ತು. ಈ ಕೃತ್ಯದ ಹಿಂದೆ ಬಹುದೊಡ್ಡ ಮಾಫಿಯಾ ಇರುವುದು ಸ್ಪಷ್ಟವಾಗುತ್ತಿದೆ. ಈ ನಿಟ್ಟಿನಲ್ಲಿ ಸೂಕ್ತ ತನಿಖೆ ನಡೆಯಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
ವಿದ್ಯುತ್ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ
Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.