3ನೇ ಬಾರಿ ಪ್ರಧಾನಿಯಾಗಿ “ನಮೋ’ ಪ್ರಮಾಣ: ಕರಾವಳಿಯಲ್ಲಿ ಸಂಭ್ರಮಾಚರಣೆ


Team Udayavani, Jun 9, 2024, 11:52 PM IST

3ನೇ ಬಾರಿ ಪ್ರಧಾನಿಯಾಗಿ “ನಮೋ’ ಪ್ರಮಾಣ: ಕರಾವಳಿಯಲ್ಲಿ ಸಂಭ್ರಮಾಚರಣೆ

ಮಂಗಳೂರು: ನರೇಂದ್ರ ಮೋದಿ ಅವರು ರವಿವಾರ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೋದಿ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆಮಾಡಿತ್ತು.

ಮೋದಿಯವರ ಪ್ರಮಾಣವಚನ ಸಂಭ್ರಮ ಹಾಗೂ ನೂತನ ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರ ಗೆಲುವಿನ ವಿಜಯೋತ್ಸವ ಕಾರ್ಯಕ್ರಮ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ರವಿವಾರ ಜಿಲ್ಲಾ ಕಾರ್ಯಾಲಯದಲ್ಲಿ ನಡೆಯಿತು. ಪ್ರಮಾಣ ವಚನ ಸಮಾರಂಭ ವೀಕ್ಷಣೆಗೆ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ಬೃಹತ್‌ ಎಲ್‌ಇಡಿ ಪರದೆ ಅಳವಡಿಸಲಾಗಿತ್ತು. ತಾಲೂಕು ಕೇಂದ್ರಗಳಲ್ಲೂ ಹರ್ಷಾಚರಣೆ ನಡೆಯಿತು.

ಸಂಭ್ರಮ, ಹರ್ಷೋದ್ಘಾರ
ಮೋದಿ ಅವರು ಪ್ರಮಾಣ ವಚನ ಸ್ವೀಕಾರಕ್ಕೆ ಆಗಮಿಸಿದ ವೇಳೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು. ಪ್ರಮಾಣ ವಚನ ಸ್ವೀಕರಿಸುವ ವೇಳೆ ಎದ್ದು ನಿಂತು, ಚಪ್ಪಾಳೆ, ಶಿಳ್ಳೆ, ಪಟಾಕಿ, ಹರ್ಷೋದ್ಘಾರದೊಂದಿಗೆ ನಾಯಕರು, ಕಾರ್ಯಕರ್ತರು ಸಂಭ್ರಮಿಸಿದರು. ಜೈ ಜೈ ಮೋದಿ, ಜೈ ಬಿಜೆಪಿ ಘೋಷಣೆಗಳು ಮೊಳಗಿದವು.

ಬ್ಯಾನರ್‌, ಪೋಸ್ಟರ್‌,
ತಂಪು ಪಾನಿಯ ವಿತರಣೆ
ನರೇಂದ್ರ ಮೋದಿಯವರಿಗೆ ಶುಭಾಶಯ ಕೋರಿ ನಗರದ ಅಲ್ಲಲ್ಲಿ ಅಭಿಮಾನಿಗಳು ಪೋಸ್ಟರ್‌ ಅಳವಡಿಸಿದ್ದರು. ಮಣ್ಣಗುಡ್ಡದ ಸಂಘನಿಕೇತನದ ಬಳಿ ಮೋದಿ ಅಭಿಮಾನಿ ಶಂಕರ್‌ ಅವರು ಸಾರ್ವಜನಿಕರಿಗೆ ಉಚಿತ ಕಬ್ಬು ಜ್ಯೂಸ್‌ ವಿತರಿಸಿದರು.

ಜನಾಶೀರ್ವಾದದಿಂದ
ಪಟ್ಟಾಭಿಷೇಕ: ಕಾಮತ್‌
ಶಾಸಕ ವೇದವ್ಯಾಸ ಕಾಮತ್‌ ಮಾತನಾಡಿ, ನರೇಂದ್ರ ಮೋದಿ ಹ್ಯಾಟ್ರಿಕ್‌ ಸಾಧನೆಗೆ ಜನರ ಆಶೀರ್ವಾದ ಹಾಗೂ ಬೆಂಬಲವೇ ಕಾರಣ. ದ.ಕ. ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್‌ ಚೌಟ ಗೆಲುವಿಗೆ ಅನೇಕರು ಶ್ರಮಿಸಿದ್ದಾರೆ. ಮುಂದಿನ ದಿನಗಳು ದೇಶದಲ್ಲಿ ಮತ್ತಷ್ಟು ಅಭಿವೃದ್ಧಿಗೆ ಪೂರಕವಾಗಿರಲಿವೆ. ಜನರ ನಂಬಿಕೆಗೂ ಮೀರಿ ಮೋದಿ ನೇತೃತ್ವದ ಎನ್‌ಡಿಎ ಸರಕಾರ ದೇಶದ ಪ್ರಗತಿಗೆ ಕೊಡುಗೆ ನೀಡಲಿದೆ ಎಂದರು.

ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಕಿಶೋರ್‌ ಬೊಟ್ಯಾಡಿ, ಯತೀಶ್‌ ಆರ್ವರ್‌, ಮಂಡಲ ಅಧ್ಯಕ್ಷ ರಮೇಶ್‌ ಕಂಡೆಟ್ಟು, ಯುವ ಮೋರ್ಚ ಅಧ್ಯಕ್ಷ ನಂದನ್‌ ಮಲ್ಯ, ಮಹಿಳಾ ಮೋರ್ಚ ಅಧ್ಯಕ್ಷೆ ಮಂಜುಳಾ ರಾವ್‌, ಪ್ರಮುಖರಾದ ಕವಿತಾ ಸನಿಲ್‌, ಕಿಶೋರ್‌ ಕೊಟ್ಟಾರಿ, ಪೂರ್ಣಿಮಾ, ರಾಜಗೋಪಾಲ್‌ ರೈ, ವಿಕಾಸ್‌ ಪುತ್ತೂರು, ಬಾಲಕೃಷ್ಣ ಭಟ್‌, ಪೂಜಾ ಪೈ, ಜಗದೀಶ್‌ ಶೇಣವ, ಮಹೇಶ ಜೋಗಿ, ನಂದನ್‌ ಮಲ್ಯ, ಅಶ್ವಿ‌ತ್‌ ಕೊಟ್ಟಾರಿ ಸೇರಿದಂತೆ ಮನಪಾ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಉಡುಪಿ: ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುತ್ತಿ ದ್ದಂತೆಯೇ ಜಿಲ್ಲೆಯ ವಿವಿಧೆಡೆ ಸಂಭ್ರಮಾಚರಣೆ ನಡೆಯಿತು.ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ ನೇತೃತ್ವದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಸಹಯೋಗದೊಂದಿಗೆ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಹಣತೆಗಳನ್ನು ಹಚ್ಚಿ, ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು ಪ್ರಮಾಣ ವಚನ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲಾಯಿತು.

ತಾಲೂಕು ಕೇಂದ್ರಗಳಲ್ಲೂ ಹರ್ಷಾಚರಣೆ ನಡೆಯಿತು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್‌ ಶೆಟ್ಟಿ, ಶಾಸಕ ಯಶಪಾಲ್‌ ಎ. ಸುವರ್ಣ, ಬಿಜೆಪಿ ಮುಖಂಡರಾದ ಕುಯಿಲಾಡಿ ಸುರೇಶ್‌ ನಾಯಕ್‌, ಕಿರಣ್‌ ಕುಮಾರ್‌ ಬೈಲೂರು, ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ನಯನಾ ಗಣೇಶ್‌, ಶಿಲ್ಪಾ ಜಿ. ಸುವರ್ಣ, ಸಂಧ್ಯಾ ರಮೇಶ್‌, ವೀಣಾ ಎಸ್‌. ಶೆಟ್ಟಿ, ರಾಘವೇಂದ್ರ ಕುಂದರ್‌, ಶಿವಕುಮಾರ್‌ ಅಂಬಲಪಾಡಿ, ಗಿರೀಶ್‌ ಎಂ. ಅಂಚನ್‌, ಸುಮಿತ್ರಾ ಆರ್‌. ನಾಯಕ್‌, ಸುಜಾಲಾ ಸತೀಶ್‌, ನಳಿನಿ ಪ್ರದೀಪ್‌ ರಾವ್‌, ಭಾರತೀ ಚಂದ್ರಶೇಖರ್‌, ದಯಾಶಿನಿ, ಜಗದೀಶ್‌ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಆನಂದ ಸುವರ್ಣ, ಲಕ್ಷ್ಮೀಶ ಬಂಗೇರ, ಆಸೀಫ್ ಕಟಪಾಡಿ, ಅಂಡಾರು ದೇವಿ ಪ್ರಸಾದ್‌ ಶೆಟ್ಟಿ, ವೆಂಕಟರಮಣ ಕಿದಿಯೂರು, ನೀತಾ ಪ್ರಭು, ಸರೋಜಾ ಶೆಣೈ, ಪೂರ್ಣಿಮಾ ಶೆಟ್ಟಿ, ಪ್ರೀತಿ, ದೀಪಾ ಪೈ, ಸುಗುಣಾ ನಾಯ್ಕ…, ಸಂತೋಷ್‌ ಆಚಾರ್ಯ, ಸುರೇಶ್‌ ಶೆಟ್ಟಿ, ಸತೀಶ್‌ ಪೂಜಾರಿ ಕುಕ್ಕಿಕಟ್ಟೆ, ಹೇಮನಾಥ್‌ ಹೆಗ್ಡೆ, ದಿವಾಕರ ಶೆಟ್ಟಿ, ನಾಗರಾಜ್‌ ಕರ್ಕೇರ, ರಾಜೇಶ್‌ ಸುವರ್ಣ ಉಪಸ್ಥಿತರಿದ್ದರು.

ಸಿಹಿತಿಂಡಿ, ಚಹಾ ವಿತರಣೆ
ಮಣಿಪಾಲದ ಟೈಗರ್‌ ಸರ್ಕಲ್‌ನಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಸಾರ್ವಜನಿಕರಿಗೆ ಸಿಹಿತಿಂಡಿ, ಚಹಾ ವಿತರಣೆ ಮಾಡಲಾಯಿತು.

ಶಾಸಕ ಯಶ್‌ಪಾಲ್‌ ಎ.ಸುವರ್ಣ, ನಗರಸಭಾ ಸದಸ್ಯರಾದ ಸುಮಿತ್ರಾ ನಾಯಕ್‌, ವಿಜಯಲಕ್ಷ್ಮೀ, ಕಲ್ಪನಾ ಸುಧಾಮ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಕುಂದರ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ, ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್‌ ಆಚಾರ್ಯ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ನಿತಿನ್‌ ಪೈ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿ‌ನಿ ಶೆಟ್ಟಿ, ಹಿಂದೂ ಯುವಸೇನೆ ಅಧ್ಯಕ್ಷ ಅಜಿತ್‌ ಕೊಡವೂರು ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Anwar-Manippady

Mangaluru: ವಕ್ಫ್‌ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ

Pocso

Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.