ನಂತೂರಿನಲ್ಲಿ ಓವರ್‌ಪಾಸ್ : ಬೇಗ ಆದಷ್ಟೂ ಅನುಕೂಲ
Team Udayavani, Jul 17, 2017, 5:05 AM IST
ಮಹಾನಗರ: ರಾಷ್ಟ್ರೀಯ ಹೆದ್ದಾರಿ 66ರ ನಂತೂರಿನಲ್ಲಿ ಓವರ್ ಪಾಸ್ ಅಥವಾ ಅಂಡರ್‌ಪಾಸ್ ನಿರ್ಮಾಣಕ್ಕಾಗಿ ಹಲವು ಧರಣಿ, ಪ್ರತಿಭಟನೆಗಳು ನಡೆದರೂ ಇನ್ನೂ ಈಡೇರದ ಪರಿಣಾಮ ನಿತ್ಯವೂ ಸಂಚಾರ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯೂ ಯೋಜನೆ ರೂಪಿಸಿತ್ತು. ಆದರೆ ಇದುವರೆಗೂ ಕಾರ್ಯರೂಪಕ್ಕೆ ಬಾರದಿರುವುದು ನಾಗರಿಕರಿಗೆ ಬೇಸರವನ್ನುಂಟು ಮಾಡಿದೆ. ನಗರದ ಸಂಚಾರ ಸಮಸ್ಯೆಗೆ ಪ್ರಮುಖ ಕಾರಣ ನಂತೂರು ವೃತ್ತದಲ್ಲಿ ಆಗಾಗ್ಗೆ ಉಂಟಾಗುವ ವಾಹನ ದಟ್ಟಣೆಯೂ ಒಂದು ಕಾರಣ. ನಗರದ ಹೃದಯ ಭಾಗದಲ್ಲಿರುವ ಈ ವೃತ್ತದಲ್ಲಿ ದಿನವಿಡೀ ಈ ಸಮಸ್ಯೆ ಇದ್ದೇ ಇರುತ್ತದೆ. ಆದರೆ, ಇದರ ಪರಿಣಾಮ ನಗರದೊಳಗಿನ ಇತರೆ ಪ್ರದೇಶಗಳಲ್ಲಿ ಸಂಚಾರ ಅಸ್ತವ್ಯಸ್ತಗೊಳ್ಳುವುದಕ್ಕೂ ಕಾರಣವಾಗುತ್ತಿದೆ. ಇದು ಆಡಳಿತ ವ್ಯವಸ್ಥೆಗೂ ತಿಳಿದಿದ್ದು, ಇನ್ನೂ ಪ್ರಸ್ತಾವನೆ ರೂಪದಲ್ಲಿಯೇ ಯೋಜನೆಗಳು ಉಳಿದಿವೆಯೇ ಹೊರತು ಅನುಮೋದನೆಗೊಂಡಿಲ್ಲ.
ನಗರ ಅಭಿವೃದ್ಧಿ ಹೊಂದುತ್ತಿದೆ. ರಸ್ತೆಗಳು ಮೇಲ್ದರ್ಜೆಗೇರುತ್ತಿದ್ದು, ರಾಷ್ಟ್ರೀಯ ಹೆದ್ದಾರಿಗಳು ಚತುಷ್ಪಥವಾಗಿವೆ. ಆದರೆ ಅಭಿವೃದ್ಧಿಯ ಸಂದರ್ಭದಲ್ಲಿ ಆಗಿರುವ ಕೆಲವು ಪ್ರಮಾದಗಳು, ಕೊರತೆಗಳಿಂದ ಜನತೆ ಕಿರಿಕಿರಿ ಅನುಭವಿಸುವಂತಾಗಿದೆ. ರಾಷ್ಟ್ರೀಯ ಹೆದ್ದಾರಿ ಹಾಗೂ ನಗರದ ಕೆಲವು ಕಡೆಗಳಲ್ಲಿ ವೃತ್ತಗಳ ಅಪಾಯಕಾರಿ ವಿನ್ಯಾಸದಿಂದ ವಾಹನ ಚಾಲಕರು, ಸಾರ್ವಜನಿಕರ ಪಾಲಿಗೆ ಆತಂಕಕಾರಿಯಾಗಿ ಪರಿಣಮಿಸಿದೆ. ಇದರಲ್ಲಿ ಪ್ರಮುಖವಾದುದು ನಂತೂರು ವೃತ್ತ.
ಪರ್ಯಾಯ ವ್ಯವಸ್ಥೆ ಅಗತ್ಯ
ಕೆಪಿಟಿ, ನಂತೂರು ವೃತ್ತಗಳಲ್ಲಿ ಫ್ಲೈ ಓವರ್‌ಗಳನ್ನು ನಿರ್ಮಿಸಬೇಕು ಎಂಬುದಾಗಿ ನಾಗರಿಕರು, ಜನಪ್ರತಿನಿಧಿಗಳು ಹೆದ್ದಾರಿ ಇಲಾಖೆ ಹಾಗೂ ಸರಕಾರವನ್ನು ಒತ್ತಾಯಿಸುತ್ತಲೇ ಇದ್ದಾರೆ. ಸುರತ್ಕಲ್‌ನಿಂದ ಬಿ.ಸಿ. ರೋಡು ಜಂಕ್ಷನ್‌ವರೆಗೆ ರಾ.ಹೆ. ಚತುಷ್ಪಥ ಯೋಜನೆಯಲ್ಲಿ ಇಲ್ಲಿ ಫ್ಲೈ ಒವರ್ ನಿರ್ಮಾಣ ಕಾಮಗಾರಿ ಇದ್ದಿತ್ತು. ಆದರೆ ಸಕಾಲದಲ್ಲಿ ಭೂಸ್ವಾಧೀನ ವಾಗದ ಕಾರಣ ಹೆದ್ದಾರಿ ಪ್ರಾಧಿಕಾರ ಕಾಮಗಾರಿಯನ್ನೇ ಕೈ ಬಿಟ್ಟಿತು. ಜಿಲ್ಲಾಡಳಿತ ಎಚ್ಚೆತ್ತು ಭೂಸ್ವಾಧೀನ ಮಾಡಿದ್ದರೂ ಗುತ್ತಿಗೆ ವಹಿಸಿಕೊಂಡ ಇರ್ಕಾನ್ ಯೋಜನ ವೆಚ್ಚ ದುಪ್ಪಟ್ಟು ಆಗಿರುವ ಹಿನ್ನೆಲೆಯಲ್ಲಿ ಕಾಮಗಾರಿ ನಡೆಸಲು ಒಪ್ಪಲಿಲ್ಲ. ಆದರೆ ಈಗ ಫ್ಲೈ ಓವರ್ ಅನಿವಾರ್ಯವಾಗಿದ್ದು, ಬಲವಾದ ಬೇಡಿಕೆ ಮಂಡಿಸಲಾಗಿದೆ. ಕೆಪಿಟಿ ಹಾಗೂ ನಂತೂರಿನಲ್ಲಿ ಫ್ಲೈ ಓವರ್ ನಿರ್ಮಿಸಬೇಕು ಎಂಬುದಾಗಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆ, ತ್ತೈಮಾಸಿಕ ಕೆಡಿಪಿ ಸಭೆಗಳು, ಹೆದ್ದಾರಿ ಇಲಾಖೆಗೆ ಸಂಬಂಧಪಟ್ಟ ಸಭೆಗಳಲ್ಲಿ ಜನಪ್ರತಿನಿಧಿಗಳು ಪ್ರಸ್ತಾವಿಸುತ್ತಲೇ ಇದ್ದಾರೆ.
ಸಮಸ್ಯೆ ನಿವಾರಣೆಯಾಗಲಿ
ನಂತೂರು ವೃತ್ತದಲ್ಲಿ ಸಂಚಾರ ದಟ್ಟನೆಯ ಸ್ಥಿತಿ ಹಾಗೂ ಸಾರ್ವಜನಿಕರ ಬೇಡಿಕೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪದವು ಶಾಲೆಯ ಬಳಿಯಿಂದ ತಾರೆತೋಟ ಬಳಿಯ ಸಂದೇಶ ಲಲಿತಾ ಕಲಾ ವಿದ್ಯಾಲಯದ ಸಮೀಪದವರೆಗೆ ಅಂಡರ್‌ಪಾಸ್ ನಿರ್ಮಾಣಕ್ಕೆ ನಿರ್ಧರಿಸಿತು. ಆದರೆ ಕೆಲವು ಬದಲಾವಣೆಗಳಾಗಿ ಈಗ ಓವರ್‌ಪಾಸ್ ಪ್ರಸ್ತಾವನೆ ರೂಪಿಸಲಾಗಿದೆ. ಹೆದ್ದಾರಿ ಪ್ರಾಧಿಕಾರ ಈ ಪ್ರಸ್ತಾವನೆಯನ್ನು ಕೇಂದ್ರ ಭೂಸಾರಿಗೆ ಸಚಿವಾಲಯಕ್ಕೆ ಕಳುಹಿಸಿದ್ದು ಅನುಮೋದನೆಯ ನಿರೀಕ್ಷೆಯಲ್ಲಿದೆ.
ಗೊಂದಲಮಯ ನಂತೂರು ವೃತ್ತ
ನಂತೂರು ವೃತ್ತ ವಾಹನ ಚಾಲಕರ ಪಾಲಿಗೆ ಗೊಂದಲದ ಗೂಡಾಗಿದೆ. ಪರಿಣಾಮ ವಾಹನ ಸಂಚಾರ ಸ್ಥಗಿತಗೊಳ್ಳುವುದು ನಿತ್ಯದ ಸಮಸ್ಯೆ. ವೃತ್ತದ ವಿನ್ಯಾಸ ಈಗ ಹೇಗಿದೆ ಎಂದರೆ ಪಂಪ್‌ವೆಲ್‌ನಿಂದ ಕೆಪಿಟಿ ವೃತ್ತದ ಕಡೆಗೆ ಸಾಗುವ ವಾಹನಗಳು ಸ್ವಲ್ಪ ಎಡಕ್ಕೆ ತಿರುಗಿ ನೇರವಾಗಿ ಮುಂದಕ್ಕೆ ಸಾಗಬೇಕು. ಮಲ್ಲಿಕಟ್ಟೆ ಕಡೆಯಿಂದ ಬಂದು ಬಿಕರ್ನಕಟ್ಟೆ ಕಡೆಗೆ ಹೋಗುವ ವಾಹನಗಳು ನಂತೂರು ಬಸ್‌ನಿಲ್ದಾಣದಿಂದ ಮುಂದಕ್ಕೆ ಸಾಗಿ ಬಲಕ್ಕೆ ತಿರುಗಿ ವೃತ್ತಕ್ಕೆ ಅರ್ಧ ಸುತ್ತು ಹೊಡೆದು ಸಾಗಬೇಕು. ಈ ಸಂದರ್ಭದಲ್ಲಿ ಕೆಪಿಟಿ ಕಡೆಯಿಂದ ಮಲ್ಲಿಕಟ್ಟೆಗೆ ಬರುವ ವಾಹನಗಳು ಜಂಕ್ಷನ್‌ಗೆ ಬಂದು ಬಲಕ್ಕೆ ತಿರುಗಿ ಸಾಗಬೇಕು. ಪಂಪ್‌ವೆಲ್ ಕಡೆಗೆ ಹೋಗುವ ವಾಹನಗಳು ನೇರವಾಗಿ ಸಾಗಬೇಕು. ಇಲ್ಲಿ ಸಮಸ್ಯೆ ಎಂದರೆ ಏಕ ಕಾಲಕ್ಕೆ ಎಲ್ಲ ಕಡೆಯಿಂದ ವಾಹನಗಳು ಬರುತ್ತವೆ. ಯಾರಿಗೆ ಯಾವ ಕಡೆ ಹೋಗಬೇಕೆಂಬುದೇ ತಿಳಿಯದು. ಈ ಎಲ್ಲ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಓವರ್‌ಪಾಸ್ ಶೀಘ್ರ ನಿರ್ಮಾಣವಾಗಬೇಕು ಎಂಬುದು ಸಾರ್ವಜನಿಕರ ಆಗ್ರಹ.
ಶೀಘ್ರ ಮಂಜೂರಾತಿಗೆ ಕ್ರಮ
ಪ್ರಸ್ತಾಪ ಕೇಂದ್ರ ಭೂಸಾರಿಗೆ ಸಚಿವಾಲಯದ ಬಳಿ ಇದೆ. ವಿನ್ಯಾಸ ಪರಿಷ್ಕರಣೆಯಿಂದಾಗಿ ಓವರ್‌ಪಾಸ್ ನಿರ್ಮಾಣದಲ್ಲಿ ವಿಳಂಬವಾಗಿದೆ. ಪ್ರಸ್ತಾಪಕ್ಕೆ ಶೀಘ್ರ ಮಂಜೂರಾತಿ ದೊರಕುವ ನಿಟ್ಟಿನಲ್ಲಿ ಪೂರಕ ಕ್ರಮಗಳು ಆಗುತ್ತಿವೆ.
– ನಳಿನ್ ಕುಮಾರ್ ಕಟೀಲು, ಸಂಸದರು
– ಕೇಶವ ಕುಂದರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.