ಇಂದು ವಿವಿಧೆಡೆ ಬ್ರಹ್ಮ ಶ್ರೀ ನಾರಾಯಣ ಗುರು ಜನ್ಮ ದಿನಾಚರಣೆ 

Team Udayavani, Aug 27, 2018, 10:38 AM IST

27-agust-3.jpg

ಮಹಾನಗರ : ದ.ಕ. ಜಿಲ್ಲಾಡಳಿತ, ಜಿ.ಪಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಆ. 27ರಂದು ಬ್ರಹ್ಮ ಶ್ರೀನಾರಾಯಣ ಗುರು ಜಯಂತಿ ಕುದ್ರೋಳಿಯ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಸಚಿವ ಯು.ಟಿ. ಖಾದರ್‌ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಡಿ. ವೇದವ್ಯಾಸ ಕಾಮತ್‌ ಅಧ್ಯಕ್ಷತೆ ವಹಿಸಲಿದ್ದಾರೆ.

ದ.ಕ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸಂಸದ ನಳಿನ್‌, ಶಾಸಕರಾದ ಉಮಾನಾಥ ಎ. ಕೋಟ್ಯಾನ್‌, ಡಾ| ಭರತ್‌ ಶೆಟ್ಟಿ ವೈ., ರಾಜೇಶ್‌ ನಾೖಕ್‌ ಉಳಿಪಾಡಿ, ಹರೀಶ್‌ ಪೂಂಜ, ಸಂಜೀವ ಮಠಂದೂರು, ಎಸ್‌. ಅಂಗಾರ, ವಿಧಾನ ಪರಿಷತ್‌ ಸದಸ್ಯರಾದ ಐವನ್‌ ಡಿ’ಸೋಜಾ, ಕೋಟ ಶ್ರೀನಿವಾಸ ಪೂಜಾರಿ, ಕೆ. ಪ್ರತಾಪಚಂದ್ರ ಶೆಟ್ಟಿ, ಹರೀಶ್‌ ಕುಮಾರ್‌, ಎಸ್‌.ಎಲ್‌. ಭೋಜೇಗೌಡ, ಆಯನೂರು ಮಂಜುನಾಥ್‌, ಮೇಯರ್‌ ಕೆ. ಭಾಸ್ಕರ್‌ ಮುಖ್ಯ ಅತಿಥಿಗಳಾಗಿರುತ್ತಾರೆ. ಸಂತ ಅಲೋಶಿಯಸ್‌ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕ ಡಾ| ಗಣೇಶ್‌ ಅಮೀನ್‌ ಸಂಕಮಾರ್‌ ಅವರು ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿಯ ಸಂದೇಶ ನೀಡಲಿದ್ದಾರೆ.

ಉಳ್ಳಾಲ
ಸೋಮೇಶ್ವರ ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರದಲ್ಲಿ ಗುರುಗಳ ದಿನಾಚರಣೆ ಜರಗಲಿದೆ ಎಂದು ಕೊಲ್ಯ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಆನಂದ್‌ ಎಸ್‌. ಕೊಂಡಾಣ ತಿಳಿಸಿದ್ದಾರೆ.

ಹಳೆಯಂಗಡಿ
ಇಲ್ಲಿನ ಬಿಲ್ಲವ ಸಮಾಜ ಸೇವಾ ಸಂಘ ಹಾಗೂ ಯುವವಾಹಿನಿ ಘಟಕದ ಸಂಯುಕ್ತ ಆಶ್ರಯದಲ್ಲಿ ಬೆಳಗ್ಗೆ 7ರಿಂದ ಪಂಚಾಮೃತ ಅಭಿಷೇಕ, 8ರಿಂದ ಭಜನೆ, 11ಕ್ಕೆ ಸಭಾ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ, ಬಹುಮಾನ ವಿತರಣೆ, ದಿ| ದಾಮೋದರ ಸುವರ್ಣರ ಸ್ಮರಣಾರ್ಥವಾಗಿ ನಿರ್ಮಿಸಿದ ಶ್ರೀ ಗುರು ಪ್ರಸಾದಾಲಯದ ಉದ್ಘಾಟನೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಚಂದ್ರಶೇಖರ ನಾನಿಲ್‌ ತಿಳಿಸಿದ್ದಾರೆ.

ಗುತ್ತಕಾಡು
ಬ್ರಹ್ಮ ಶ್ರೀ ನಾರಾಯಣಗುರು ಧರ್ಮಪರಿಪಾಲನ ಸಮಿತಿ ಗುತ್ತಕಾಡು ತಾಳಿಪಾಡಿ ಇದರ ಆಶ್ರಯದಲ್ಲಿ ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ, ಕಲಶ ಪೂಜೆ ಅಭಿಷೇಕ, ನೂತನ ಪಲ್ಲಕ್ಕಿಯ ಸಮರ್ಪಣೆ ನಡೆಯಲಿದೆ. ಬೆ. 10ರಿಂದ ಬರ್ಕೆ ತಾಳಿಪಾಡಿ ಸಂಪ ಪೂಜಾರ್ತಿ ಅವರ ಮನೆಯಲ್ಲಿ ಭಜನೆ, ಶ್ರೀಗುರು ಪಾದುಕೆಯ ಪೂಜೆಯ ಬಳಿಕ ನೂತನ ಪಲ್ಲಕ್ಕಿಯಲ್ಲಿ ಗುರು ಭಾವಚಿತ್ರ ಹಾಗೂ ಶ್ರೀ ಗುರು ಪಾದುಕೆಯ ಮೆರವಣಿಗೆ ಗುರು ಮಂದಿರ ತಲುಪಿ ಬಳಿಕ ಅಲಂಕಾರ ಪೂಜೆ, ಪಾದ ಪೂಜೆ, ಸಂಜೆ ಭಜನೆ ನಡೆಯಲಿದೆ.

ಸಸಿಹಿತ್ಲು
ಇಲ್ಲಿನ ಸಸಿಹಿತ್ಲುವಿನ ಅಗ್ಗಿದಕಳಿಯದ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದಲ್ಲಿ ನಾರಾಯಣ ಗುರು ಮಂದಿರದಲ್ಲಿ ಇಂದು ಗುರುಗಳ ಜನ್ಮದಿನಾಚರಣೆ ಅಂಗವಾಗಿ ಭಜನ ಸಂಕೀರ್ತನೆ ಹಾಗೂ ಗ್ರಾ.ಪಂ.ನ ಸ್ವಚ್ಛತಾ ಕಾರ್ಮಿಕರನ್ನು ವಿಶೇಷವಾಗಿ ಸಮ್ಮಾನಿಸಲಾಗುವುದು ಎಂದು ಸಂಘದ ಅಧ್ಯಕ್ಷ ಪ್ರಕಾಶ್‌ಕುಮಾರ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮೂಲ್ಕಿ
ಕಾರ್ನಾಡು ಸದಾಶಿವ ರಾವ್‌ ನಗರದ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಆಶ್ರಯದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಗುರುಗಳ ಜನ್ಮದಿನಾ ಚ ರಣೆ ನಡೆಯಲಿದೆ. ಬೆಳಗ್ಗೆ 7 ಗಂಟೆಗೆ ಭಜನೆ, ಮಧ್ಯಾಹ್ನ ಮಹಾಪೂಜೆ ಮತ್ತು ಸಭಾ ಕಾರ್ಯಕ್ರಮ ನಡೆಯಲಿದೆ. ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಇಂದು ಮಹಾಪೂಜೆ, ಸಭಾ ಕಾರ್ಯಕ್ರಮ,ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ.

ಟಾಪ್ ನ್ಯೂಸ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.