Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್
Team Udayavani, Jan 15, 2025, 11:58 PM IST
ಮೂಲ್ಕಿ: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ಹಾಗೂ ಸಾಗಾಟಕ್ಕೆ ಸಂಬಂಧಿಸಿ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಒಟ್ಟು 88 ಪ್ರಕರಣಗಳಲ್ಲಿ 37 ಪ್ರಕರಣಗಳಿಗೆ ಸಂಬಂಧಿಸಿದ 6.80 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿ ಪಡೆದು ಮೂಲ್ಕಿಯ ಕೊಲಾ°ಡು ರೀಸಸ್‌ಸ್ಟೆಬಿಲಿಟಿ ಹೆಲ್ತ್‌ಕೇರ್ ಸೊಲ್ಯೂಶನ್ಸ್‌ನಲ್ಲಿ ಸುಟ್ಟು ನಾಶಪಡಿಸಲಾಗಿದೆ ಎಂದು ಕಮಿಷನರ್ ಅನುಪಮ್ ಅಗರ್‌ವಾಲ್ ತಿಳಿಸಿದರು.
ಅವರು ಮೂಲ್ಕಿಯಲ್ಲಿ ಕಮೀಷನರ್ ವ್ಯಾಪ್ತಿಯ 13 ಠಾಣೆಗಳ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳ ನಾಶಪಡಿಸುವ ಕಾರ್ಯಕ್ರಮದ ಮೊದಲು ಮಾಹಿತಿ ನೀಡಿದರು. ಮಾದಕ ವಸ್ತುಗಳ ಸೇವನೆಯ ಕುರಿತು 2024ರಲ್ಲಿ 1,026 ಮಂದಿಯ ಮೇಲೆ ಪ್ರಕರಣಗಳನ್ನು ದಾಖಲಿಸಲಾಗಿದ್ದು, 2025ನೇ ಸಾಲಿನಲ್ಲಿ 25 ಮಂದಿಯ ಮೇಲೆ ಪ್ರಕರಣಗಳನ್ನು ದಾಖಲಿಸಲಾಗಿದೆ.
ಮಂಗಳೂರು ನಗರ ವ್ಯಾಪ್ತಿಯ 13 ಠಾಣೆಗಳಿಗೆ ಸಂಬಂಧಿಸಿ ವಿಲೇವಾರಿ ಮಾಡಲಾಗಿರುವ ಮಾದಕ ವಸ್ತುಗಳಲ್ಲಿ ಗಾಂಜಾ 335 ಕಿಲೋ 460 ಗ್ರಾಂ ಮೌಲ್ಯ 75,00,508 ರೂ. ಹಾಗೂ ಎಂಡಿಎಂಎ 7 ಕಿಲೋ 640 ಗ್ರಾಂ ಮೌಲ್ಯ 6,03,65,050 ರೂ. ಮತ್ತು ಕೊಕೇನ್ 16 ಗ್ರಾಂ ಆಗಿದೆ ಎಂದರು.
ಹಂತ-ಹಂತವಾಗಿ ಬಂಧನ
ವೀಸಾ ಅವಧಿ ಮುಗಿದಿದ್ದರೂ ಅನಾವಶ್ಯಕವಾಗಿ ನಮ್ಮ ದೇಶದಲ್ಲಿ ನೆಲೆಸಿರುವ ವಿವಿಧ ದೇಶಗಳ ಪ್ರಜೆಗಳು ಕೂಡ ಮಾದಕ ವಸ್ತು ದಂಧೆಯಲ್ಲಿ ತೊಡಗಿಕೊಂಡಿದ್ದಾರೆ. ಅವರ ಬಂಧನ ಕಾರ್ಯ ಹಂತ-ಹಂತವಾಗಿ ನಡೆಯುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ
Mangaluru: ಆಟವಾಡುತ್ತಿದ್ದಾಗಲೇ ಯುವಕ ಸಾವು
Mangaluru: ನಾಳೆ(ಜ.17) ಸಿಎಂ ಮಂಗಳೂರಿಗೆ… ಬಹು ಸಂಸ್ಕೃತಿ ಉತ್ಸವದಲ್ಲಿ ಭಾಗಿ
Mangaluru: ಕಷ್ಟದ ಸಮಯದಲ್ಲಿ ದಾರಿ ತೋರುವ ದೇವರು: ಡಾ| ಎಲಿಯಾಸ್ ಫ್ರ್ಯಾಂಕ್
Mangaluru: ಕರ್ನಾಟಕ ಕ್ರೀಡಾಕೂಟಕ್ಕೆ 5 ಕೋ.ರೂ.: ಮುಲ್ಲೈ ಮುಗಿಲನ್
MUST WATCH
ಹೊಸ ಸೇರ್ಪಡೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.