ದ.ಕ. ಮತ್ತು ಉಡುಪಿ ಜಿಲ್ಲೆಯಾದ್ಯಂತ ಇಂದಿನಿಂದ ನವರಾತ್ರಿ ,ದಸರಾ ಸಂಭ್ರಮ
Team Udayavani, Oct 7, 2021, 6:15 AM IST
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಅ. 7ರಿಂದ ನವರಾತ್ರಿ, ದಸರಾ ಸಂಭ್ರಮ ಆರಂಭಗೊಳ್ಳಲಿದ್ದು, ಉಭಯ ಜಿಲ್ಲೆಗಳ ದೇವಾಲಯಗಳಲ್ಲಿ ಸಿದ್ಧತೆ ನಡೆಯುತ್ತಿವೆ.
ಕರಾವಳಿಯ ಪ್ರಮುಖ ದೇವಸ್ಥಾನಗಳಲ್ಲಿ 9 ದಿನಗಳ ಕಾಲ ನವರಾತ್ರಿ ಅಂಗವಾಗಿ ವಿಶೇಷ ಪೂಜೆ, ಹತ್ತನೇ ದಿನ ವಿಜಯದಶಮಿ ಕಾರ್ಯಕ್ರಮ ನೆರವೇರಲಿದೆ. ಹೆಚ್ಚಿನ ದೇಗುಲಗಳು ವಿದ್ಯುತ್ ದೀಪ, ಹೂವುಗಳಿಂದ ಶೃಂಗಾರಗೊಂಡಿವೆ.
ದ.ಕ.ಜಿಲ್ಲೆಯ ಶ್ರೀ ಮಂಗಳಾದೇವಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ, ಪೊಳಲಿ ಶ್ರೀ ರಾಜರಾಜೇಶ್ವರೀ, ಕಟೀಲು ಶ್ರೀ ದುರ್ಗಾ ಪರಮೇಶ್ವರೀ, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಹಾಗೂ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕೆ, ಕಡಿಯಾಳಿ ಮಹಿಷಮರ್ದಿನಿ, ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ, ಕಮಲಶಿಲೆ ಬ್ರಾಹ್ಮೀ ದುರ್ಗಾಪರಮೇಶ್ವರೀ, ಬೈಲೂರು ಮಹಿಷಮರ್ದಿನಿ, ಕನ್ನರ್ಪಾಡಿ ಶ್ರೀ ದುರ್ಗಾಪರಮೇಶ್ವರೀ, ದೊಡ್ಡಣಗುಡ್ಡೆ ಶ್ರೀ ಆದಿಶಕ್ತಿ, ಇಂದ್ರಾಣಿ ಪಂಚದುರ್ಗೆ, ಕಾಪು ಮಾರಿಗುಡಿ, ಕುಂಜಾರು ದುರ್ಗಾದೇವಿ ಸಹಿತ ಇತರ ದೇವಸ್ಥಾನಗಳಲ್ಲಿ ಸರಳವಾಗಿ ನವರಾತ್ರಿ ಉತ್ಸವ ನಡೆಯಲಿದೆ.
ಸರಳ ಆಚರಣೆಗೆ ಮಾರ್ಗಸೂಚಿ
ಕೋವಿಡ್ ಆತಂಕ ಹಿನ್ನೆಲೆಯಲ್ಲಿ ನವರಾತ್ರಿ, ದಸರಾ ಆಚರಣೆಯನ್ನು ಸರಳವಾಗಿ ಆಚರಿಸುವ ಬಗ್ಗೆ ಉಡುಪಿ, ದ.ಕ. ಜಿಲ್ಲಾಡಳಿತ ಈಗಾಗಲೇ ಮಾರ್ಗಸೂಚಿ ಹೊರಡಿಸಿದೆ. ಭಕ್ತರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣಪತ್ರ ಇದ್ದರೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಬೇಕು. ಭಕ್ತರು ಲಸಿಕೆ ಪಡೆಯದಿದ್ದಲ್ಲಿ ಅಂಥವರಿಗೆ ದೇವಾಲಯದ ಆವರಣದಲ್ಲಿ ಲಸಿಕಾ ಕೇಂದ್ರ ತೆರೆಯಬೇಕು.
ಇದನ್ನೂ ಓದಿ:“ಸ್ವಾಮಿತ್ವದಿಂದ ಗ್ರಾಮೀಣ ಆರ್ಥಿಕತೆ ಅಭಿವೃದ್ಧಿ’
ಸಾಂಸ್ಕೃತಿಕ ಕಾರ್ಯಕ್ರಮಗಳು ಶೇ. 50 ಜನರಿಗೆ ಮಿತಿಗೊಳಿಸಿ ನಡೆಸಬೇಕು. ಹುಲಿ ವೇಷಧಾರಿಗಳು ದೇವಸ್ಥಾನದ ಆವರಣದೊಳಗೆ, ಸಾರ್ವಜನಿಕ ಪ್ರದೇಶಗಳಲ್ಲಿ ಪ್ರದರ್ಶನ ನೀಡುವಾಗ ಜನಸಂದಣಿ ಯಾಗದಂತೆ ನೋಡಿಕೊಳ್ಳುವುದು, ಮಾಸ್ಕ್ ಧರಿಸದೆ ಸೇರುವ ಸಾರ್ವಜನಿಕರ ವಿರುದ್ಧ ನಿಯಮಾನುಸಾರ ದಂಡ ವಿಧಿಸಲು ಕ್ರಮ ಕೈಗೊಳ್ಳಬೇಕು ಎಂದು ಉಭಯ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.