ನಾವುಂದ ನಿಗದಿತ ಸ್ಥಳದಲ್ಲೇ ಅಂಡರ್ ಪಾಸ್ ನಿರ್ಮಿಸಿ: ಪ್ರತಿಭಟನೆ
Team Udayavani, Apr 13, 2017, 4:42 PM IST
ಮರವಂತೆ: ನಾವುಂದದಲ್ಲಿ ಈ ಹಿಂದೆ ನಿಗದಿಪಡಿಸಿದ ಪ್ರದೇಶದಲ್ಲಿ ಅಂಡರ್ ಪಾಸ್ ನಿರ್ಮಾಣ ಹಾಗೂ ನಿವೇಶನ ಸಹಿತ ಬಡ ಕುಟುಂಬಗಳಿಗೆ ಹಕ್ಕು ಪತ್ರಕ್ಕಾಗಿ ನಾವುಂದ ಗ್ರಾಮ ಪಂ. ಎದುರು ಬುಧವಾರ ಸಾರ್ವಜನಿಕರಿಂದ ಪ್ರತಿಭಟನೆ ನಡೆಯಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ತಾ.ಪಂ.ಸದಸ್ಯ ಹಕ್ಕಾಡಿ ಜಗದೀಶ ಪೂಜಾರಿ, ಸಾರ್ವಜನಿಕರ ಹಿತದೃಷ್ಟಿಯಿಂದ ಈ ಮೊದಲು ನಿರ್ಧರಿಸಿರುವ ಸ್ಥಳದಲ್ಲೇ ಅಂಡರ್ ಪಾಸ್ ನಿರ್ಮಾಣವಾಗಬೇಕು ಇದರಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ಉಪಯುಕ್ತವಾಗಿರುತ್ತದೆ. ನಿವೇಶನ ರಹಿತ ಬಡ ಕುಟುಂಬಗಳು 5 ವರ್ಷಗಳಿಂದ ಅರ್ಜಿ ಸಲ್ಲಿಸುತ್ತಿದ್ದು ಒಂದು ಸಾವಿರ ಫಲಾನುಭವಿಗಳಿದ್ದು ಇವರಿಗೆ ಗ್ರಾ. ಪಂ. ವ್ಯಾಪ್ತಿಯಲ್ಲಿರುವ 58 ಎಕರೆ ಸರಕಾರಿ ಭೂಮಿಯಲ್ಲಿ 30 ಎಕರೆ ಜಾಗವನ್ನು ನಿವೇಶನ ರಹಿತರಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು.
ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆ ಅಧಿಧಿಕಾರಿಗಳು ಜಂಟಿಯಾಗಿ ಸರಕಾರಿ ಜಾಗವನ್ನು ಸರ್ವೇ ಮಾಡುವುದರ ಮೂಲಕ ಹಕ್ಕು ಪತ್ರ ದೊರಕಿಸಿಕೊಡಲು ಶೀಘ್ರ ಮುಂದಾಗಬೇಕು ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿ ಸಂಘದ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ ಕೋಣಿ ಆಗ್ರಹಿಸಿದರು.
ಸರಕಾರಿ ಪದವಿ ಪೂರ್ವ ಕಾಲೇಜಿನಿಂದ ಗ್ರಾಮ ಪಂ. ತನಕ ಮೆರವಣಿಗೆಯಲ್ಲಿ ಬಂದು ಮನವಿಯನ್ನು ಬೈಂದೂರು ತಹಶೀಲ್ದಾರ ಕಿರಣ ಜಿ.ಗೋರಯ್ಯ ಹಾಗೂ ನಾವುಂದ ಗ್ರಾಮ ಪಂ.ಅಧ್ಯಕ್ಷ ನರಸಿಂಹ ದೇವಾಡಿಗ ಅವರಿಗೆ ನೀಡಿದರು.ಈ ಸಂದರ್ಭದಲ್ಲಿ ಮಹೇಂದ್ರ ಪೂಜಾರಿ, ರಾಮ ಖಾರ್ವಿ, ನರಸಿಂಹ ಆಚಾರಿ, ರಾಜೇಶ ಪೂಜಾರಿ, ಅಶೋಕ ಆಚಾರಿ, ನಿವೇಶನ ರಹಿತ ಸಮಿತಿ ಅಧ್ಯಕ್ಷೆ ಸಿಂಗಾರಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Today World Fisheries Day: ಸಮಸ್ಯೆ ಗೂಡಾಗಿರುವ ಕರಾವಳಿಯ ಪ್ರಮುಖ ಆರ್ಥಿಕತೆ
Road Mishap: ಇನ್ನೋವಾ ಕಾರಿಗೆ ಇನ್ಸುಲೇಟರ್ ಲಾರಿ ಢಿಕ್ಕಿ; ನಾಲ್ವರು ಗಂಭೀರ
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.