“ಸುವ್ಯವಸ್ಥೆ ಕಾಪಾಡಲು ತಂತ್ರಜ್ಞಾನ ಸೌಲಭ್ಯ ವಿಸ್ತರಣೆ ಅಗತ್ಯ’

Team Udayavani, Aug 8, 2017, 7:15 AM IST

0708ule5.jpg

ಉಳ್ಳಾಲ: ವಿದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಆಧುನಿಕ ತಂತ್ರಜ್ಞಾನ‌ ಬಳಕೆಯಾಗುತ್ತಿದ್ದು, ಭಾರತದಲ್ಲಿಯೂ ಇಂದಿನ ಆಧುನಿಕತೆಗೆ ತಕ್ಕಂತೆ ಪೊಲೀಸರಿಗೆ ಸೂಕ್ತವಾದ ಮೂಲ ಭೂತ ವ್ಯವಸ್ಥೆಗಳನ್ನು ವಿಸ್ತರಿಸಿ, ಸುವ್ಯವಸ್ಥೆ ಕಾಪಾಡಲು ತಂತ್ರಜ್ಞಾನ ಸೌಲಭ್ಯಗಳನ್ನು ವಿಸ್ತರಿಸುವ ಅಗತ್ಯತೆ ಇದೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ| ಕೆ. ಭೈರಪ್ಪ ಅಭಿಪ್ರಾಯಪಟ್ಟರು.

ಮಂಗಳೂರು ವಿವಿಯ ಮಂಗಳಾ ಸಭಾಂಗಣದಲ್ಲಿ ರವಿವಾರ ನಡೆದ ಕೊಣಾಜೆ ಪೊಲೀಸ್‌ ಠಾಣೆ ಸುಧಾರಿತ ಗಸ್ತು ವ್ಯವಸ್ಥೆ (ಜನಸ್ನೇಹಿ ಪೊಲೀಸ್‌-ಪ್ರದೇಶಕ್ಕೊಬ್ಬ ಪೊಲೀಸ್‌) ಕಾರ್ಯ ಕ್ರಮದಡಿಯಲ್ಲಿ ಕೊಣಾಜೆ ಠಾಣಾ ವ್ಯಾಪ್ತಿಯ ಸರ್ವ ಗಸ್ತು ಸದಸ್ಯರ‌ ಸಭೆ ಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ವಿದೇಶಗಳಲ್ಲಿರುವ ಪೊಲೀಸ್‌ ವ್ಯವಸ್ಥೆಗೆ ಹೋಲಿಸಿದರೆ  ದೇಶದಲ್ಲಿನ ವ್ಯವಸ್ಥೆ ಬಹಳ ಕುಂಠಿತವಾಗಿದೆ. ಇದನ್ನು ಅಭಿವೃದ್ಧಿಪಡಿಸುವಲ್ಲಿ  ಶ್ರಮ ವಹಿಸಬೇಕಿದೆ.  ಜನಸ್ನೇಹಿ ಪೊಲೀಸ್‌ ವ್ಯವಸ್ಥೆಯು ಉತ್ತಮ ಪರಿಕಲ್ಪನೆಯಾ ಗಿದ್ದು, ಪೊಲೀಸರು ಹಾಗೂ ಜನರ ನಡುವೆ ಉತ್ತಮ ಬಾಂಧವ್ಯ ವೃದ್ಧಿಗೊಂಡು ಸಮಾಜದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಲಿದೆ ಎಂದು ಅವರು ಹೇಳಿದರು.

ಎಸಿಪಿ ರಾಮರಾವ್‌ ಮಾತನಾಡಿ, ಹಿಂದೆ ಜನಸಂಪರ್ಕ ಸಭೆಯ ಮೂಲಕ ಆಯಾ ಪ್ರದೇಶದ ಕಾನೂನು ಸುವ್ಯವಸ್ಥೆ ಕಾಪಾಡಲು ಪ್ರಯತ್ನಿಸಲಾಗುತ್ತಿತ್ತು. ಈಗ ಸುಧಾರಿತ ಗಸ್ತು ವ್ಯವಸ್ಥೆಯಿಂದಾಗಿ ಆಯಾ ಪ್ರದೇಶದ ಜವಾಬ್ದಾರಿ ವಹಿಸಿದ ಪೊಲೀಸರ ಜತೆಗೆ 50 ಜನ ಸ್ಥಳೀಯರ ಸಹಕಾರವೂ ದೊರೆಯಲಿರುವುದರಿಂದ ಪೊಲೀಸ್‌ ವ್ಯವಸ್ಥೆಗೆ ಬಲ ಸಿಕ್ಕಿದಂತಾಗಿದೆ. ಅಲ್ಲದೆ, ಸಮಾಜದಲ್ಲಿ ಎದುರಾಗುವ ಯಾವುದೇ ಸಮಸ್ಯೆಯನ್ನು ಈ ತಂಡದ ಮೂಲಕ ನಿವಾರಿಸಿಕೊಳ್ಳಲು ಬಹಳಷ್ಟು ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸರೊಂದಿಗೆ ಕೈ ಜೋಡಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕೆಂದು ಹೇಳಿದರು.
ಕೇಂದ್ರ ಸರಕಾರದ ಯೋಜನೆಯಂತೆ ಮಂಗಳೂರು ಸ್ಮಾರ್ಟ್‌ ಸಿಟಿಗೆ ಆಯ್ಕೆ ಯಾಗಿರುವುದರಿಂದ  ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಸಿ.ಸಿ. ಟಿವಿಯನ್ನು ಅಳವಡಿಸುವ ಭರವಸೆ ಸಿಕ್ಕಿದೆ. ಈಗಾಗಲೇ ಇಲಾಖೆಯಿಂದ ಕೆಮರಾ ಅಳವಡಿಸುವ ಪ್ರದೇಶಗಳ ಕುರಿತು ಮಾಹಿತಿಯನ್ನು ಸಂಗ್ರಹಿಸಲಾಗಿದೆ ಎಂದರು.

ಸಾರ್ವಜನಿಕ ಹಿತಾಸಕ್ತಿಯಿಂದ ಖಾಸಗಿ ಸಂಸ್ಥೆಗಳು  ಆಯಾಯ ಪ್ರದೇಶಕ್ಕೆ ಸಿಸಿಟಿವಿಯನ್ನು ಅಳವಡಿಸುವಂತೆ ಇಲಾಖೆಯ ವತಿಯಿಂದ ಮನವಿ ಮಾಡಲಾಗುವುದು ಎಂದು ಅವರು ತಿಳಿಸಿದರು.

ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆಯುವವ ವಿರುದ್ಧ ಕಠಿಣ ಕ್ರಮ, ಬಸ್ಸುಗಳು ನಡು ರಸ್ತೆಯಲ್ಲೇ ನಿಂತು ಜನರನ್ನು ಹತ್ತಿಸುವ ವಿಚಾರ, ಬಸ್‌ ಸಿಬಂದಿ ಅಶ್ಲೀಲ ಪದ ಬಳಸುವ ವಿಚಾರ, ಪಂಪ್‌ವೆಲ್‌ ಬಳಿಕ ಬೇರೆ ಬಸ್ಸಿಗೆ ಕ್ರಾಸಿಂಗ್‌ ನೀಡುವ ವಿಚಾರ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದರು.

ಕೊಣಾಜೆ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ ಅಶೋಕ್‌ ಪಿ. ಅವರು ಪ್ರಾಸ್ತಾವಿಕ ವಾಗಿ ಮಾತನಾಡಿ ಜನಸ್ನೇಹಿ ಪೊಲೀಸ್‌ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು. 

ಎಸ್‌ಐ ಸುಕುಮಾರನ್‌ ಉಪಸ್ಥಿತ ರಿದ್ದರು. ಕಾನ್‌ಸ್ಟೆಬಲ್‌ ಗುರುವಪ್ಪ ಕಾಂತಿ ಸ್ವಾಗತಿಸಿದರು. ಸುಖಲತಾ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.