ರಾಷ್ಟ್ರೀಯ ಸಹಕಾರ ನೀತಿ ಅಗತ್ಯ: ಕೋಟ
ದಕ್ಷಿಣ ಕನ್ನಡ ಜಿಲ್ಲಾ ಸೌಹಾರ್ದ ಸಹಕಾರಿಗಳ ಸಮಾವೇಶ
Team Udayavani, Jan 2, 2020, 1:16 AM IST
ಮಂಗಳೂರು: ಸಹಕಾರ ವ್ಯವಸ್ಥೆಯು ದೇಶದ ಅರ್ಥಿಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗಿ ರಾಷ್ಟ್ರೀಯ ಸಹಕಾರ ನೀತಿಯ ಜಾರಿ ಅಗತ್ಯ. ಈ ದಿಶೆಯಲ್ಲಿ ಅಗತ್ಯ ಸಹಕಾರ ನೀಡಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಮೀನುಗಾರಿಕೆ ಮತ್ತು ಮುಜರಾಯಿ ಖಾತೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಬುಧವಾರ ನಗರದ ಪುರಭವನದಲ್ಲಿ ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ನಿ. ಮಂಗಳೂರು ಮತ್ತು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ಬೆಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ನಡೆದ ದ.ಕ. ಜಿಲ್ಲಾ ಸೌಹಾರ್ದ ಸಹಕಾರಿಗಳ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿದ್ದರು.
ಸಹಕಾರ ಕ್ಷೇತ್ರದ ಕಾನೂನು, ನಿಯಮಾವಳಿಗಳನ್ನು ರೂಪಿಸುವ ನಿಟ್ಟಿನಲ್ಲಿ ವಿಧಾನ ಪರಿಷತ್‌ನಲ್ಲಿ ಸಹಕಾರ ರಂಗದ ಬಗ್ಗೆ ಸಾಕಷ್ಟು ತಿಳುವಳಿಕೆ ಇರುವ ಸದಸ್ಯರೊಬ್ಬರನ್ನು ನಾಮನಿರ್ದೇಶನ ಮಾಡಲು ಪ್ರಯತ್ನಿಸುತ್ತೇನೆ ಎಂದರು. ದ.ಕ. ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಕಚೇರಿ ನಾಮಫಲಕವನ್ನು ಸಚಿವರು ಅನಾವರಣ ಮಾಡಿದರು.
ತಂತ್ರಾಂಶ ಬಳಕೆ
ಕೋ- ಸಿಬಿಲ್ ತಂತ್ರಾಂಶ ಅನಾವರಣಗೊಳಿಸಿದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಹಕಾರ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಕೆ ಅಗತ್ಯ. ಈ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಕೋ- ಸಿಬಿಲ್ ತಂತ್ರಾಂಶ ಅಳವಡಿಸಿರುವುದು ಉತ್ತಮ ಬೆಳವಣಿಗೆ ಎಂದರು.
ಸಮಾವೇಶವನ್ನು ಉದ್ಘಾಟಿಸಿದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಸಾಮಾಜಿಕ ಬದ್ಧತೆ ಇದ್ದಾಗ ಮಾತ್ರ ಸಹಕಾರ ಸಂಘ ದೃಢವಾಗುತ್ತದೆ ಎಂದರು.
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಸಂಸದ ನಳಿನ್ ಕುಮಾರ್ ಕಟೀಲು, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ಅಧ್ಯಕ್ಷ ಬಿ.ಎಚ್. ಕೃಷ್ಣಾ ರೆಡ್ಡಿ, ನಿರ್ದೇಶಕ ಮಂಜುನಾಥ ಎಸ್.ಕೆ., ತುಮಕೂರಿನ ಲ್ಯಾನ್ಸಿ ಪಾಯ್ಸ, ಸಹಕಾರ ಸಂಘಗಳ ಉಪ ನಿಬಂಧಕ ಪ್ರವೀಣ್ ನಾಯಕ್, ದ.ಕ. ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಅತಿಥಿಗಳಾಗಿದ್ದರು.
ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ನಿ. ಅಧ್ಯಕ್ಷ ಎ. ಸುರೇಶ್ ರೈ ಸ್ವಾಗತಿಸಿ, ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಪ್ರಸ್ತಾವನೆಗೈದರು. ಉಪಾಧ್ಯಕ್ಷ ಜಿ.ಆರ್. ಪ್ರಸಾದ್ ವಂದಿಸಿದರು. ಸಿಇಒ ಎಂ. ಉಗ್ಗಪ್ಪ ಶೆಟ್ಟಿ ಉಪಸ್ಥಿತರಿದ್ದರು. ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಚಿಂತಕರ ಚಾವಡಿ – ಚಿನ್ನದ ಅಂಗಡಿ!
ವಿಧಾನ ಪರಿಷತ್ ಎನ್ನುವುದು ಚಿಂತಕರ ಚಾವಡಿ ಆಗಬೇಕಿತ್ತು. ಆದರೆ ಇಂದು ಅದು ಚಿನ್ನದ ಅಂಗಡಿ ಆಗಿದೆ. ಕೃಷಿ, ತೋಟ ಗಾರಿಕೆ ಸಹಿತ ಸಹಕಾರ ವ್ಯವಸ್ಥೆ ಬಗ್ಗೆ ಸಾಕಷ್ಟು ತಿಳುವಳಿಕೆ ಇರುವ ವರ ಕೊರತೆ ಇದೆ. ಇಂದಿನ ರಾಜಕಾರಣ ರಾಜಕಾರಣಿಗಳಿಗೆ ಯಾವುದೇ ವಿಷಯದ ಬಗ್ಗೆ ಆಳವಾದ ಅಧ್ಯಯನಕ್ಕೆ ಅವಕಾಶ ವನ್ನೇ ಕೊಡುತ್ತಿಲ್ಲ ಎಂದು ಕೋಟ ಅಭಿಪ್ರಾಯ ಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.