Nellyadi: ಬೈಕ್ ಪಲ್ಟಿ; ಸಹಸವಾರನಿಗೆ ಗಾಯ
Team Udayavani, May 29, 2024, 9:00 PM IST
ಉಪ್ಪಿನಂಗಡಿ: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ನ ಸಹಸವಾರ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನೆಲ್ಯಾಡಿ ಗ್ರಾಮದ ಮಕ್ಕಿಗದ್ದೆಯಲ್ಲಿ ಸಂಭವಿಸಿದೆ.
ಇಲ್ಲಿನ ಶಾಸ್ತಾರೇಶ್ವರ ದೇವಸ್ಥಾನದ ಕಡೆಗೆ ರಾಮ್ರಾಜ್ ಅವರು ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ಮಕ್ಕಿಗದ್ದೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಸಹ ಸವಾರ ಸ್ವಸ್ತಿಕ್ ಗಂಭೀರ ಗಾಯಗೊಂಡರು.
ತತ್ಕ್ಷಣ ಅವರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಬೈಕ್ ಸವಾರ ರಾಮ್ರಾಜ್ಗೆ ಸಣ್ಣಪುಟ್ಟ ಗಾಯವಾಗಿದೆ.
ಈ ಬಗ್ಗೆ ಮಕ್ಕಿಗದ್ದೆ ನಿವಾಸಿ ಗೋಪಾಲಕೃಷ್ಣ ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.