ನೇರಳಕಟ್ಟೆ ದ.ಕ. ಜಿ.ಪಂ. ಉ.ಹಿ.ಪ್ರಾ. ಶಾಲೆಗೆ ಶತಮಾನ ಸಂಭ್ರಮ

ಊರ ಪಟೇಲರು, ವಿದ್ಯಾಭಿಮಾನಿಗಳಿಂದ ಸ್ಥಾಪನೆ

Team Udayavani, Nov 18, 2019, 5:09 AM IST

1611MANI-OLD-SCHOOL

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

ಮಾಣಿ : ಬಂಟ್ವಾಳ ತಾಲೂಕಿನ ನೆಟ್ಲಮುಟ್ನೂರು ಗ್ರಾಮದ ಮಾಣಿ-ಮೈಸೂರು ಹೆದ್ದಾರಿ ಪಕ್ಕದಲ್ಲಿರುವ ನೇರಳಕಟ್ಟೆ ದ.ಕ. ಜಿ.ಪಂ. ಉನ್ನತೀಕರಿಸಿದ ಹಿ.ಪ್ರಾ. ಶಾಲೆ ಶತಮಾನೋತ್ಸವದ ಸಿದ್ಧತೆಯಲ್ಲಿದೆ. ಊರಿನ ಗಣ್ಯರು ಹಾಗೂ ವಿದ್ಯಾಭಿಮಾನಿಗಳಿಂದ ನಿರ್ಮಾಣಗೊಂಡ ಶಾಲೆಯು 1 ಎಕ್ರೆ 7 ಸೆಂಟ್ಸ್‌ ಸ್ಥಳವನ್ನು ಹೊಂದಿದೆ. ಉರ್ದಿಲ ಪಟೇಲರೆಂದೇ ಹೆಸರಾಗಿದ್ದ ಇಂದುಹಾಸ ರೈ ಸ್ಥಳದಾನ ಮಾಡಿದ್ದಾರೆ. ಯು.ಎಸ್‌.ಎ.ಯಲ್ಲಿರುವ ಉರ್ದಿಲಗುತ್ತು ರಾಮಪ್ರಸಾದ್‌ ರೈ ಅವರು ಊರಿಗೆ ಬಂದಾಗಲೆಲ್ಲ ಶಾಲೆಗೆ ಭೇಟಿ ನೀಡಿ ಶಾಲಾಭಿವೃದ್ಧಿಗೆ ಸಹಕಾರ ನೀಡುತ್ತಿದ್ದಾರೆ. 1919ರ ಎ. 1ರಂದು ಕಿ.ಪ್ರಾ. ಶಾಲೆ ಆರಂಭಗೊಂಡು 1975ರಲ್ಲಿ ಹಿ.ಪ್ರಾ. ಶಾಲೆಯಾಗಿ ಪರಿವರ್ತನೆಗೊಂಡಿತು. 2011ರಲ್ಲಿ 8ನೇ ತರಗತಿ ಆರಂಭಗೊಂಡು ಉನ್ನತೀಕರಿಸಿದ ಹಿ.ಪ್ರಾ.ಶಾಲೆಯಾಯಿತು.

ಸಾಂಸ್ಕೃತಿಕ ಕೇಂದ್ರ
ಹಿಂದೆ ವಾರದ ಭಜನ ಕಾರ್ಯಕ್ರಮ ಶಾಲೆಯಲ್ಲಿ ನಡೆದುಕೊಂಡು ಬರುತ್ತಿತ್ತು. ಸ್ಥಳೀಯರಿಂದ ವರ್ಷಕೊಮ್ಮೆ ಏಕಾಹ ಭಜನೆ, ಸ್ಥಳೀಯ ಯುವಕ ವೃಂದದವರ ಸಹಭಾಗಿತ್ವದಲ್ಲಿ ವಾರ್ಷಿಕೋತ್ಸವ ಹಾಗೂ ನಾಟಕ ಪ್ರದರ್ಶನ ನಡೆಯುತ್ತಿದೆ. ಯಕ್ಷಗಾನ ಕಲಾವಿದ ಕರಾಯ ಕೊರಗಪ್ಪ ನೇತೃತ್ವದಲ್ಲಿ ಯಕ್ಷಗಾನ ತಾಳಮದ್ದಳೆ ಕೂಟ ನಡೆದುಕೊಂಡು ಬರುತ್ತಿದೆ ಎಂದು ಶಾಲೆಯಲ್ಲಿ ಹಲವು ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ರಾಮಣ್ಣ ಆಳ್ವರು ನೆನಪಿಸಿಕೊಳ್ಳುತ್ತಾರೆ.

ಹಳೆ ವಿದ್ಯಾರ್ಥಿಗಳು
ಶಾಲೆಯಲ್ಲಿ ಸಹಸ್ರಾರು ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡಿದ್ದು, ಡಾ| ಶ್ರೀಧರ ಆಳ್ವ ಉನ್ನತ ಶಿಕ್ಷಣ ಪಡೆದು ಅಮೆರಿಕಾದ ಹೆಲ್ತ್‌ ಕೇರ್‌ ಕಂಪೆನಿಯಲ್ಲಿ ಜಾಗತಿಕ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಗುರುತಿಸಿಕೊಂಡಿರುವ ವಸಂತ ಆಳ್ವ, ದಿನೇಶ್‌ ನಾಯ್ಕ, ನಿರಂಜನ್‌ ರೈ, ವಿಟuಲ ನಾಯ್ಕ, ಸುರೇಶ ರೈ, ಕೃಷ್ಣಪ್ರಸಾದ್‌ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಮಂಜುನಾಥ್‌ ಎನ್‌. ಮೊದಲಾದವರು ಈ ಶಾಲೆಯ ಹಳೆ ವಿದ್ಯಾರ್ಥಿಗಳು.

ಮುಖ್ಯೋಪಾಧ್ಯಾಯರಾಗಿದ್ದವರು
ವೆಂಕಟ್ರಮಣ ಭಟ್‌ ಮಿತ್ತೂರು (ಬಚ್ಚ ಮಾಸ್ಟ್ರೆ), ಜತ್ತಪ್ಪ ರೈ ಕೆ.ಎನ್‌., ಶಂಕರನಾರಾಯಣ, ಬಾಲಕೃಷ್ಣ ಶೆಟ್ಟಿ ಮುನ್ನೂರು, ವಿಶ್ವನಾಥ ರೈ ಅನಂತಾಡಿ, ನಾರಾಯಣ ಪೂಜಾರಿ ಸೂರ್ಯ, ಬಾಲಕೃಷ್ಣ ಕೊಂಡೆ, ವಿಶ್ವನಾಥ ನಾಯ್ಕ, ಜ್ಯೋತಿ, ಇಂದಿರಾ ಮೊದಲಾದವರು ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದಾರೆ.
ಶಾಲೆಯು ಪ್ರಸ್ತುತ ವಿಶಾಲವಾದ ಆಟದ ಮೈದಾನ, ಕೈತೋಟವನ್ನು ಹೊಂದಿದೆ. ಸ್ಥಳೀಯ ಗ್ರಾಮಗಳ ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಪ್ರಸ್ತುತ ಏಮಾಜೆ ಕಿ.ಪ್ರಾ. ಶಾಲೆ, ಬಂಟ್ರಿಂಜ ಕಿ.ಪ್ರಾ. ಶಾಲೆ, ಪೆರಾಜೆ ಹಿ.ಪ್ರಾ. ಶಾಲೆ, ಅನಂತಾಡಿ, ಪಾಟ್ರಕೋಡಿ ಹಿ.ಪ್ರಾ. ಶಾಲೆಗಳಿಗೆ ಕೇಂದ್ರ ಸ್ಥಾನದಲ್ಲಿದೆ. 118 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, 7 ಮಂದಿ ಶಿಕ್ಷಕರಿದ್ದಾರೆ.

ಸರಕಾರದ ಅನುದಾನದೊಂದಿಗೆ ಹೊಸ ಕಟ್ಟಡ ನಿರ್ಮಾಣವಾಗಿದ್ದು, ಎಸ್‌.ಡಿಎಂ.ಸಿ. ಜನಪ್ರತಿನಿಧಿಗಳು, ವಿದ್ಯಾರ್ಥಿಗಳ ಹೆತ್ತವರ ಸಹಕಾರದಿಂದ ಶತಮಾನೋತ್ಸವ ಆಚರಿಸಲಾಗುವುದು. ವಿದ್ಯಾರ್ಥಿಗಳ ಕಲಿಕಾ ಮಟ್ಟ ಉತ್ತಮವಾಗಿದ್ದು ಪ್ರತಿವರ್ಷ ಶೇ. 100 ಫ‌ಲಿತಾಂಶ ದಾಖಲಾಗುತ್ತಿದೆ. ಗ್ರಂಥಾಲಯ, ಪ್ರಯೋಗಾಲಯ, ಕಂಪ್ಯೂಟರ್‌ ಕೊಠಡಿ, ರಂಗಮಂದಿರ ಮತ್ತು ಸುಸಜ್ಜಿತ ಅಡುಗೆ ಕೋಣೆಯ ಆವಶ್ಯಕತೆ ಇದೆ.
-ಗೀತಾ ಕುಮಾರಿ ಕೆ.ಎಸ್‌.,ಪ್ರಭಾರ ಮುಖ್ಯ ಶಿಕ್ಷಕಿ.

ನನ್ನ ಪ್ರಾಥಮಿಕ ಶಿಕ್ಷಣಕ್ಕೆ ಉತ್ತಮ ಅಡಿಪಾಯ ನೀಡಿದ ಶಾಲೆ ಶತಮಾನದ ಸಂಭ್ರಮದ ಸಿದ್ಧತೆಯಲ್ಲಿದೆ. ನನ್ನ ತಂದೆ ಈ ಶಾಲೆಯ ಬೆಳವಣಿಗೆಗೆ ವಿಶೇಷ ಕಾಳಜಿ ತೋರಿದ್ದರು. ನನ್ನ ಸಹೋದರ ಉರ್ದಿಲಗುತ್ತು ರಾಮಪ್ರಸಾದ್‌ ರೈ ಸಹಕಾರ ನೀಡುತ್ತಿದ್ದಾರೆೆ. ನಾನು ಕಲಿತ ಶಾಲೆಯು ಇನ್ನೂ ಎತ್ತರಕ್ಕೆ ಬೆಳೆಯಲಿ ಎಂಬುದು ನನ್ನ ಮನದಾಳದ ಹಾರೈಕೆ.
-ಡಾ| ಅನಸೂಯಾ ಕಿಶೋರ್‌ ಶೆಟ್ಟಿ,
ಹಳೆ ವಿದ್ಯಾರ್ಥಿನಿ.

-  ಮಹೇಶ್‌ ಮಾಣಿ

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEW-SCHOOL

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

430514561342IMG-20191203-WA0023

ಅನಂತೇಶ್ವರ ದೇಗುಲದ ಪೌಳಿಯಲ್ಲಿ ಪ್ರಾರಂಭವಾದ ಶಾಲೆಗೆ 128ರ ಸಂಭ್ರಮ

sx-22

ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಶಾಲೆಗೆ 111 ವರ್ಷಗಳ ಸಂಭ್ರಮ

ds-24

112 ವರ್ಷ ಕಂಡಿರುವ ಮೂಡುಬಿದಿರೆಯ ಡಿ.ಜೆ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ds-35

ಮನೆಯ ಚಾವಡಿಯಲ್ಲಿ ಪ್ರಾರಂಭಗೊಂಡಿದ್ದ ಶಾಲೆಗೆ 105ರ ಸಂಭ್ರಮ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.