ನೇತ್ರಾ ಜಂಬೋ-1 ತಳಿ
ಗೇರು ಕೃಷಿಯಲ್ಲಿ ಕೂಲಿ ಖರ್ಚು ತಗ್ಗಿಸಲು
Team Udayavani, Mar 22, 2022, 11:14 AM IST
ಪುತ್ತೂರು: ಕೂಲಿ ಖರ್ಚು ತಗ್ಗಿಸುವ ಸಲುವಾಗಿ ರಾಷ್ಟ್ರೀಯ ಗೇರು ಸಂಶೋಧನ ಕೇಂದ್ರವು ಅಭಿವೃದ್ಧಿಪಡಿಸಿರುವ ದೊಡ್ಡ ಗಾತ್ರದ ಗೇರು ಬೀಜದ ನೇತ್ರಾ ಜಂಬೋ -1 ತಳಿ ಲೋಕಾರ್ಪಣೆಗೆ ಸಿದ್ಧಗೊಂಡಿದೆ.
ಗೇರು ಕೃಷಿಯಲ್ಲಿ ಒಟ್ಟು ಖರ್ಚಿನ ಸುಮಾರು ಶೇ. 40ರಷ್ಟು ಬಿದ್ದ ಹಣ್ಣು/ಬೀಜ ಹೆಕ್ಕಲು ಬೇಕು. ಆರರಿಂದ ಎಂಟು ಗ್ರಾಂ. ತೂಕದ ಬೀಜಗಳು ಗೇರಿನಲ್ಲಿ ಸರ್ವೆ ಸಾಮಾನ್ಯವಾಗಿದೆ. ಆದರೆ ಬೀಜದ ಗಾತ್ರ ಹೆಚ್ಚಿಸಿದರೆ ಮೂರು ರೀತಿಯ ಲಾಭ ದೊರೆಯುತ್ತದೆ ಎಂಬ ಕಾರಣದಿಂದ ಹೊಸ ತಳಿ ಅಭಿವೃದ್ಧಿಪಡಿಸಲಾಗಿದೆ.ಕಡಿಮೆ ಬೀಜ ಹೆಕ್ಕಿ ಜಾಸ್ತಿ ತೂಕ, ಮಾರುಕಟ್ಟೆಯಲ್ಲಿ ದೊಡ್ಡ ಬೀಜಗಳಿಗೆ ಹೆಚ್ಚಿನ ದರ, ಸಂಸ್ಕರಣೆ ಸುಲಭ ಇದರ ಲಾಭ. ಇದನ್ನರಿತು ದೊಡ್ಡ ಬೀಜ ಬಿಡುವ ನೇತ್ರಾ ಜಂಬೋ-1 ತಳಿ ಅಭಿವೃದ್ಧಿ ಪಡಿಸಿದ್ದು ಬೆಳೆಗಾರರಿಗೆ ಅನುಕೂಲವಾಗುವ ನಿರೀಕ್ಷೆ ಹೊಂದಲಾಗಿದೆ.
12 ಗ್ರಾಂ ತೂಕದ ಗೇರು ಬೀಜ
ಈ ತಳಿಯಲ್ಲಿ 12 ರಿಂದ 13 ಗ್ರಾಂ ತೂಕದ ಬೀಜ ಗಳಿರುತ್ತವೆ. ಶೇ.90ಕ್ಕೂ ಹೆಚ್ಚಿನ ಗೇರು ಬೀಜಗಳದ್ದು ಒಂದೇ ಗಾತ್ರ. ನೂರು ಕೆ.ಜಿ. ಬೀಜ ಸಂಸ್ಕರಣೆಯಿಂದ ಸುಮಾರು 29 ರಿಂದ 30 ಕೆಜಿ ತಿರುಳು ಸಿಗುತ್ತದೆ. ಈಗಿರುವ ರಫ್ತು ಗುಣಮಟ್ಟದ ಗ್ರೇಡ್ ಡಬ್ಲ್ಯೂ 180ಕ್ಕಿಂತ ಜಾಸ್ತಿ ಗ್ರೇಡ್ (ಡಬ್ಲ್ಯೂ) ಈ ತಳಿಯ ತಿರುಳಿನದ್ದು. ಸಾಮಾನ್ಯವಾಗಿ ದೊಡ್ಡ ಬೀಜ ಬಿಡುವ ತಳಿಗಳ ಇಳುವರಿ ಕಡಿಮೆ. ಆದರೆ ಈ ತಳಿಯ ಇಳುವರಿ ಹೆಕ್ಟೇರಿಗೆ ಎರಡು ಟನ್. ಹಣ್ಣಿನ ತೂಕ 100 ಗ್ರಾಂ. ಕ್ಕಿಂತ ಜಾಸ್ತಿ ಹಾಗೂ ಕೆಂಪು ಬಣ್ಣ ಗಿಡಗಳನ್ನು ನೆಡಬೇಕಾದ ಅಂತರ 23 ಅಡಿ ಇರುತ್ತದೆ.
6 ನೇ ತಳಿ
ಗೇರಿನಲ್ಲಿ ಸದ್ಯ ಕೃಷಿ ಮಾಡುತ್ತಿರುವ ತಳಿಗಳು (ಭಾಸ್ಕರ, ವಿಆರ್ ಐ-3, ಉಳ್ಳಾಲ -3 ಇತ್ಯಾದಿ) ಬಹುತೇಕ ಸಣ್ಣ ಹಾಗೂ ಮಧ್ಯಮ ಗಾತ್ರದವು. ಹಾಗಾಗಿ ಈ ದೊಡ್ಡ ಗಾತ್ರದ ಬೀಜದ ತಳಿ ಒಣ ಭೂಮಿ ಕೃಷಿಯಲ್ಲಿ ಹೊಸ ಭರವಸೆ ಹುಟ್ಟಿಸಬಲ್ಲುದು. ಪ್ರಸ್ತುತ ಇದಕ್ಕೆ ತಳಿ ಹಕ್ಕಿನ ರಕ್ಷಣೆ ಪಡೆಯಲಾಗಿದೆ. ಕೂಲಿ ಖರ್ಚು ಉಳಿತಾಯ ಸರಾಸರಿ ಈ ತಳಿ ಒಂದು ಟನ್ ಇಳುವರಿಗೆ ಬೀಜ ಹೆಕ್ಕುವಾಗ 16,000 ರೂ.ಕೂಲಿ ಖರ್ಚನ್ನು ಉಳಿಸುತ್ತದೆ. ಜತೆಗೆ ಈಗಿನ ಮಾರುಕಟ್ಟೆ ದರದಲ್ಲಿ ದೊಡ್ಡ ಗಾತ್ರದ ಬೀಜಕ್ಕೆ ಒಂದು ಟನ್ನಿಗೆ ಸುಮಾರು 10,000 ರೂ. ಜಾಸ್ತಿ ಸಿಗುತ್ತದೆ. ಒಟ್ಟು 26,000 ರೂ.ಗಳಷ್ಟು ಲಾಭ ಒಂದು ಟನ್ನಿಗೆ ಸಿಗುತ್ತದೆ. ಇದರ ತಿರುಳಿನ ಸಿಪ್ಪೆ ಸುಲಭದಲ್ಲಿ ಬಿಡಿಸಬಹುದು. ಹಾಗಾಗಿ ಕಾರ್ಖಾನೆಯಲ್ಲೂ ಕೂಲಿ ಖರ್ಚು ಉಳಿಸುತ್ತದೆ. ಜತೆಗೆ ತಿರುಳು ತುಂಬಾ ರುಚಿಕರ. 1.5 ಲಕ್ಷ ಗಿಡ ಮಾ.22 ರಂದು ಹೊಸ ತಳಿ ಬಿಡುಗಡೆಗೊಳ್ಳಲಿದೆ. ಮಳೆಗಾಲದ ಅನಂತರ ಇದರ ವಿತರಣೆ ಮಾಡಲಾಗುತ್ತದೆ. ಸುಮಾರು 1 ರಿಂದ 1.5 ಲಕ್ಷ ಗಿಡ ಉತ್ಪಾದಿಸಿ ನೀಡುವ ಗುರಿ ಹೊಂದಲಾಗಿದೆ. -ಡಾ| ಜೆ. ದಿನಕರ ಅಡಿಗ, ಪ್ರಧಾನ ವಿಜ್ಞಾನಿ (ತೋಟಗಾರಿಕೆ), ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರ, ಪುತ್ತೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.