ನೇತ್ರಾವತಿ ನದಿ, ಪಶ್ಚಿಮ ಘಟ್ಟಕ್ಕೆ ಸ್ವಾತಂತ್ರ್ಯ ವಂಚನೆ ಆರೋಪ

Team Udayavani, Aug 16, 2017, 9:35 AM IST

Netravati-16-8.jpg

ಮಂಗಳೂರು: ದೇಶದೆಲ್ಲೆಡೆ ಸ್ವಾತಂತ್ರ್ಯ ದಿನ ಸಂಭ್ರಮವಾದರೂ ನೇತ್ರಾವತಿ ನದಿ ಹಾಗೂ ಪಶ್ಚಿಮ ಘಟ್ಟಕ್ಕೆ ದುಷ್ಟ ರಾಜಕೀಯ ವ್ಯವಸ್ಥೆಯಿಂದ ಸ್ವಾತಂತ್ರ್ಯ ವಂಚನೆಯಾಗಿದೆ ಎಂದು ಆರೋಪಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮಂಗಳವಾರ ಸಹ್ಯಾದ್ರಿ ಸಂಚಯದ ವತಿಯಿಂದ ನದಿವನ ರೋದನ ವೈಶಿಷ್ಟ್ಯಪೂರ್ಣ ಕಾರ್ಯಕ್ರಮ ನಡೆಯಿತು.

ಸಹ್ಯಾದ್ರಿ ಸಂಚಯದಲ್ಲಿ ಚಿತ್ರ ಕಲಾವಿದರೇ ಹೆಚ್ಚಿರುವ ಕಾರಣ ನೇತ್ರಾವತಿ ನದಿ ಹಾಗೂ ಪಶ್ಚಿಮ ಘಟ್ಟಗಳ ಮೇಲಾಗುವ ದುಷ್ಪರಿಣಾಮಗಳನ್ನು ಕಲಾಕೃತಿಗಳ ಮೂಲಕ ಚಿತ್ರಿಸಲಾಗಿತ್ತು. ನದಿಗಳ ಉಗಮ ಸ್ಥಳವಾದ ಪಶ್ಚಿಮ ಘಟ್ಟಗಳ ಕಲಾಕೃತಿಯ ಮೇಲೆ ವಿದ್ಯಾರ್ಥಿಗಳು ತ್ರಿವರ್ಣ ಧ್ವಜದ ಬಣ್ಣವನ್ನು ಎರಚುವ ಮೂಲಕ ಚಾಲನೆ ನೀಡಿದರು.

ಸಹ್ಯಾದ್ರಿ ಸಂಚಯದ ದಿನೇಶ್‌ ಹೊಳ್ಳ ಮಾತನಾಡಿ, ಎತ್ತಿನಹೊಳೆ ಯೋಜನೆಯ ಮೂಲಕ 2 ಸಾವಿರ ಕೋ.ರೂ. ಹಣವನ್ನು ವ್ಯರ್ಥ ಮಾಡಿದ ಸರಕಾರ, ನೀರಿಲ್ಲ ಎಂಬ ಕಾರಣಕ್ಕೆ ಇದೀಗ ನದಿಯ ಉಗಮವನ್ನು ಬಿಟ್ಟು ಸಂಗಮ ಸ್ಥಾನಕ್ಕೆ ಕನ್ನ ಹಾಕಲು ಹೊರಟಿದೆ. ಪಶ್ಚಿಮ ಘಟ್ಟಕ್ಕೆ ಹಾನಿಯಾಗಿರುವುದರಿಂದ ಪ್ರಸ್ತುತ ಮಳೆಯ ಪ್ರಮಾಣವೂ ಇಳಿಕೆಯಾಗಿದೆ ಎಂದರು.

1952ರ ಸೆಂಟ್ರಲ್‌ ರಿವರ್‌ ಬೋರ್ಡ್‌ ಆ್ಯಕ್ಟ್ ಪ್ರಕಾರ ಪ್ರತಿ ರಾಜ್ಯಗಳಲ್ಲೂ ನದಿ-ಕೆರೆಗಳ ಒತ್ತುವರಿಯನ್ನು ತಡೆಯಲು ಪ್ರಾಧಿಕಾರವೊಂದು ರಚನೆಯಾಗಬೇಕಿದ್ದರೂ ಕರ್ನಾಟಕದಲ್ಲಿ ಅದು ಇನ್ನೂ ರಚನೆಯಾಗಿಲ್ಲ. ಹೀಗಾಗಿ ಬೆಂಗಳೂರು, ಕೋಲಾರ ಸೇರಿದಂತೆ ಇತರ ಪ್ರದೇಶಗಳ ಕೆರೆಗಳ ಒತ್ತುವರಿಯನ್ನು ಕೇಳುವವರೇ ಇಲ್ಲದಾಗಿದೆ. ಹೀಗಾಗಿ ಆ ಭಾಗಗಳಲ್ಲಿ ಬರಗಾಲ ಪರಿಸ್ಥಿತಿ ಉಂಟಾಗಿದೆ ಎಂದು ಹೇಳಿದರು.

ನದಿಗಳು ಬರಿದಾಗಿ ನೀರಿನ ಕೊರತೆ ಉಂಟಾಗಲಿದೆ ಎಂಬುದನ್ನು ಬಿಂಬಿಸುವ ರೀತಿಯಲ್ಲಿ ಖಾಲಿ ಬಾಟಲ್‌ಗ‌ಳನ್ನು ಬ್ಯಾಜ್‌ರೂಪದಲ್ಲಿ ಕುತ್ತಿಗೆಗೆ ಹಾಕಿದ್ದರು. ಎಸ್ಟೇಟ್‌ ಮಾಫಿಯ, ಗಣಿಗಾರಿಕೆ, ರೆಸಾರ್ಟ್‌ ಮಾಫಿಯಾ, ಅರಣ್ಯ ಅತಿಕ್ರಮಣ, ಮರಗಳ ಕಳ್ಳ ಸಾಗಾಣಿಕೆ, ಗಾಂಜಾ ಮಾಫಿಯಾದಿಂದಲೂ ಪಶ್ಚಿಮ ಘಟ್ಟಕ್ಕೆ ಹಾನಿಯಾಗುತ್ತಿದೆ ಎಂದು ಚಿತ್ರಿಸಲಾಗಿತ್ತು.

ನದಿ ಬರಿದಾಗುತ್ತಿರುವುದರಿಂದ ಕರಾವಳಿಯ ಪ್ರಮುಖ ಉದ್ಯಮ ಮೀನುಗಾರಿಕೆಗೂ ಹೊಡೆತ ನೀಡುತ್ತಿದೆ ಎಂದು ಬಿಂಬಿಸಿ ಮೀನಿನ ಬರೀ ಮುಳ್ಳಿನ ಕಲಾಕೃತಿಯನ್ನು ನೇತಾಡಿಸಿದ್ದರು. ‘ಎಲ್ಲಿ ಹೋದವೋ ಕಣ್ಣಿಗೆ ಕಾಣದಾದವೋ, ಗಿಡ ಮರ-ಪ್ರಾಣಿ ಪಕ್ಷಿಗಳು ಎಲ್ಲಿ ಹೋದವೋ ಕಣ್ಣಿಗೆ ಕಾಣದಾದವೋ ಎಂಬ ಗೀತೆಯನ್ನು ನಗರದ ಸ್ವರೂಪ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಹಾಡಿದರು.’

ಕಾರ್ಯಕ್ರಮವನ್ನುದ್ದೇಶಿಸಿ ಸ್ವರೂಪ ಅಧ್ಯಯನ ಕೇಂದ್ರದ ನಿರ್ದೇಶಕ ಗೋಪಾಡ್ಕರ್‌, ದಿನೇಶ್‌ ಕೊಡಿಯಾಲ್‌ಬೈಲ್‌ ಮಾತನಾಡಿದರು. ಪ್ರಮುಖರಾದ ಹರೀಶ್‌ ಅಡ್ಯಾರ್‌, ಸಪ್ನಾ ನೊರೊನ್ಹಾ, ರಾಜೇಶ್‌ ದೇವಾಡಿಗ, ಕಟೀಲು ದಿನೇಶ್‌ ಪೈ, ಪವನ್‌ ಜೈನ್‌ ಮೊದಲಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Mangaluru: ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.