100 ಪೊಲೀಸ್ ಠಾಣೆಗಳಿಗೆ ಹೊಸ ಕಟ್ಟಡ: ಸಚಿವ ಆರಗ
Team Udayavani, Nov 9, 2021, 6:14 AM IST
ಸುಬ್ರಹ್ಮಣ್ಯ: ಪೊಲೀಸ್ ಇಲಾಖೆಯ ಬಲವರ್ಧನೆಗೆ ರಾಜ್ಯ ಸರಕಾರ ಹೆಚ್ಚಿನ ಮಹತ್ವ ನೀಡುತ್ತಿದೆ. ಸುಮಾರು 100 ಠಾಣೆಗಳಿಗೆ 200 ಕೋಟಿ ರೂ. ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಿಸಲಾಗುವುದು. ಸುಬ್ರಹ್ಮಣ್ಯ ಠಾಣೆಗೂ 1 ಕೋಟಿ ರೂ. ಅನುದಾನ ಇಡಲಾಗಿದ್ದು, ಸದ್ಯದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.
ಅವರು ಸೋಮವಾರ ರಾತ್ರಿ ಸುಬ್ರಹ್ಮಣ್ಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.”ಪೊಲೀಸರಿಗೆ ಗೃಹ 20-25′ ಯೋಜನೆಯಲ್ಲಿ 2025ರ ಹೊತ್ತಿಗೆ 10 ಸಾವಿರ ಮನೆ ನಿರ್ಮಾಣ ವಾಗಲಿದ್ದು, ವಸತಿ ಸಮಸ್ಯೆ ನಿವಾರಣೆಯಾಗಲಿದೆ. ಇಲಾಖೆಯಲ್ಲಿ ವಾರ್ಷಿಕ 4 ಸಾವಿರ ನೇಮಕಾತಿ ನಡೆಸಲಾಗುತ್ತಿದೆ. ಈಗ ಕೇವಲ 12 ಸಾವಿರ ಹುದ್ದೆಗಳು ಖಾಲಿ ಇವೆ ಎಂದರು.
ಗೋಹತ್ಯೆ ನಿಷೇಧ ಕಾಯಿದೆ ಈಗಾಗಲೇ ಜಾರಿಯಲ್ಲಿದ್ದು, ಹೊಸ ಕಾಯಿದೆಯಂತೆ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ. ಸಾರ್ವಜನಿಕರೂ ಸಹಕರಿಸಬೇಕು. ಉಪ್ಪಿನಂಗಡಿಯ ಇಳಂತಿಲದಲ್ಲಿ ಪತ್ತೆಯಾದ ಗ್ರೆನೇಡ್ ಪ್ರಕರಣದ ತನಿಖೆ ಎಲ್ಲ ರೀತಿಯಲ್ಲೂ ನಡೆಯುತ್ತಿದೆ ಎಂದರು.
ಈ ಮೊದಲು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವರು ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ವೇಳೆ ಕಾರ್ಯನಿರ್ವಹಣಾಧಿಕಾರಿ ಡಾ| ನಿಂಗಯ್ಯ, ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಪುಷ್ಪಲತಾ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ ಮುಂತಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ:2025ರ ವೇಳೆಗೆ 10 ಲಕ್ಷ ಉದ್ಯೋಗ ಸೃಷ್ಟಿ ಗುರಿ: ಡಾ| ಸಿ.ಎನ್.ಅಶ್ವತ್ಥನಾರಾಯಣ
ಸುಬ್ರಹ್ಮಣ್ಯ ಶ್ರೀ ಭೇಟಿ
ಅರಗ ಜ್ಞಾನೇಂದ್ರ ಅವರು ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಶ್ರೀಗಳು ಸಚಿವರಿಗೆ ಶಾಲು ಹೊದಿಸಿ ಗೌರವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.