‘ಅಭ್ಯರ್ಥಿಗಳೂ ಕಾವಲು ಕಾಯಬಹುದು..’: ಈ ಬಾರಿ ಮತಯಂತ್ರ ಸುರಕ್ಷತೆಗೆ ಹೊಸ ವ್ಯವಸ್ಥೆ
Team Udayavani, May 9, 2023, 6:58 PM IST
ಮಂಗಳೂರು: ಮತದಾನ ನಡೆದ ಬಳಿಕ ಮತ ಯಂತ್ರಗಳನ್ನು ಹಿಂದಕ್ಕೆ ತಂದು ಭದ್ರತಾ ಕೊಠಡಿಗಳಲ್ಲಿ ಇರಿಸಲಾಗುತ್ತದೆ, ಆ ಬಳಿಕ ಮತ ಎಣಿಕೆಯಂದು ಅವುಗಳನ್ನು ಹೊರತೆಗೆದು ಎಣಿಕೆ ಮಾಡಲಾಗುತ್ತದೆ.
ಡಿಮಸ್ಟರಿಂಗ್ ಕೇಂದ್ರಗಳಿಂದ ಭದ್ರತಾ ಕೊಠಡಿಗೆ ಮತಯಂತ್ರ ತರುವಾಗ ಹಾಗೂ ಭದ್ರತಾ ಕೊಠಡಿಗಳಲ್ಲಿ ಇರಿಸಿರುವಾಗ ಕೇವಲ ಕೇಂದ್ರೀಯ ಅರೆ ಮಿಲಿಟರಿ ಪೊಲೀಸ್ ಪಡೆ (ಸಿಪಿಎಂಎಫ್) ಭದ್ರತೆ ಕೊಡುವುದು ಸಹಜ. ಈ ಬಾರಿ ಚುನಾವಣಾ ಆಯೋಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಭದ್ರತೆ ನೀಡುವುದು ಹಾಗೂ ವೀಕ್ಷಣೆಗೆ ಮತ್ತೊಂದು ವರ್ಗಕ್ಕೆ ಅವಕಾಶ ಮಾಡಿಕೊಟ್ಟಿದೆ.
ಇದನ್ನೂ ಓದಿ:ಕಾಂಗ್ರೆಸ್ ತುಷ್ಟೀಕರಣದ ಪಕ್ಷ ಬಿಜೆಪಿ ವಿಕಾಸದ ಪಕ್ಷ : ಅಸ್ಸಾಂ ಸಿಎಂ ಹಿಮಂತ್ ಶರ್ಮ
ಹೌದು. ಈ ಬಾರಿ ಪಕ್ಷಗಳ ಅಭ್ಯರ್ಥಿ ಅಥವಾ ಅವರ ಪ್ರತಿನಿಧಿ ಮತಯಂತ್ರಗಳನ್ನು ಭದ್ರತಾ ಕೊಠಡಿಗೆ ತರುವ ವೇಳೆ ಕೇಂದ್ರೀಯ ಪೊಲೀಸ್ ಬಲದ ವಾಹನದ ಹಿಂದೆ ಪ್ರತ್ಯೇಕ ವಾಹನದಲ್ಲಿ ಬರಬಹುದು. ಅಷ್ಟೇ ಅಲ್ಲ ಸ್ಟ್ರಾಂಗ್ ರೂಂನಲ್ಲಿ ಇರಿಸಿದ ಬಳಿಕ ಅಭ್ಯರ್ಥಿಗಳು/ ಅವರ ಏಜೆಂಟರು/ ಪ್ರತಿನಿಧಿಗಳು (ಯರಾದರೂ ಒಬ್ಬರು ಮಾತ್ರ) ಅದೇ ಕೇಂದ್ರದಲ್ಲಿ ಅವರಿಗೆ ನಿಗದಿ ಪಡಿಸಿದ ಕೊಠಡಿಯಲ್ಲಿ ಇರಬಹುದು. ಭದ್ರತಾ ಕೊಠಡಿಯ ಸಿಸಿಟಿವಿಯನ್ನು ಅವರಿಗೆ ನೇರವಾಗಿ ವೀಕ್ಷಿಸಲು ಈ ಬಾರಿ ಅವಕಾಶ ಇದೆ.
ಮಂಗಳೂರಿನ ಎನ್‌ಐಟಿಕೆಯಲ್ಲಿ ಭದ್ರತಾ ಕೊಠಡಿ ಇದ್ದು, ಅದೇ ಕ್ಯಾಂಪಸ್‌ನಲ್ಲಿ ಅಭ್ಯರ್ಥಿ/ಪ್ರತಿನಿಧಿಗಳಿಗೆ ಮೇ 13ರ ವರೆಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿರುವುದು ಈ ಬಾರಿಯ ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Bantwal: ತುಂಬೆ ಜಂಕ್ಷನ್; ಸರಣಿ ಅಪಘಾತ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.