ಕಪ್ಪ ಸಂದಾಯದ ಡೈರಿ ಬಿಎಸ್‌ವೈ, ಮೋದಿ, ಅಮಿತ್‌ ಷಾ ಷಡ್ಯಂತ್ರ

Team Udayavani, Feb 25, 2017, 11:43 AM IST

poojari.jpg

ಮಂಗಳೂರು: ಕಾಂಗ್ರೆಸ್‌ ಹೈಕಮಾಂಡ್‌ಗೆ ಕಪ್ಪ ಸಂದಾಯದ ಡೈರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅವರು ಜತೆಯಾಗಿ ಹೆಣೆದಿರುವ ಷಡ್ಯಂತ್ರವಾಗಿದೆ. ಈ ಡೈರಿ ಯಡಿಯೂರಪ್ಪಗೆ ಹೇಗೆ ಸಿಕ್ಕಿತು ಎಂಬುದನ್ನು ಮೊದಲು ತಿಳಿಸಲಿ ಎಂದು ಹಿರಿಯ ಕಾಂಗ್ರೆಸ್‌ ನಾಯಕ, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಹೇಳಿದರು. 

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಪ್ರಧಾನಿ ಮೋದಿಯವರು ನೋಟು ಅಪಮೌಲ್ಯದಿಂದ ಕಂಗಾಲಾಗಿ ಹೋಗಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಆಡಳಿತ ಇರುವ ರಾಜ್ಯಗಳನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.  

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಜವಾಬ್ದಾರಿ ಇದೆ. ಅವರು ಈ ರೀತಿ ಸುಳ್ಳು ಹೇಳುವ ಕೆಲಸವನ್ನು ಮಾಡಬಾರದು. ಅವರ ಬಳಿ ಪೂರ್ತಿ ವಿವರಗಳಿದ್ದರೆ ಅದನ್ನು ತತ್‌ಕ್ಷಣ ಬಹಿರಂಗ ಪಡಿಸಲಿ. ದಾಖಲೆ ಬಹಿರಂಗ ಪಡಿಸದಂತೆ ಯಾರಾದರೂ ಕಪ್ಪ ಕೊಟ್ಟಿದ್ದಾರೆಯೇ ಎಂಬುದನ್ನೂ ತಿಳಿಸಲಿ. ಗೋವಿಂದರಾಜು ಅವರೇ ಅದು ನನ್ನ ಹಸ್ತಾಕ್ಷರ ಅಲ್ಲ ಎಂದು ಹೇಳುತ್ತಿದ್ದಾರೆ. ಅದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ಯಾರು ಸೃಷ್ಟಿಸಿದ್ದಾರೆ ಎಂಬುದನ್ನು ಸ್ಟಷ್ಟಪಡಿಸಲಿ. ಅದಕ್ಕಾಗಿ ಸುಪ್ರಿಂಕೋರ್ಟ್‌ನ ನ್ಯಾಯಾಧೀಶರನ್ನು ನೇಮಿಸಿ ತನಿಖೆ ನಡೆಸಲಿ ಎಂದು ಆಗ್ರಹಿಸಿದರು. 

ದಾಖಲೆ ತಿರುಚಿ ಈ ರೀತಿ ರಾಜಕೀಯ ಮಾಡುತ್ತಿರುವುದರಿಂದ ಜಗತ್ತೇ ಭಾರತದ ಕುರಿತು ಕೆಟ್ಟದಾಗಿ ಮಾತನಾಡುತ್ತಿದೆ. ಇತರ ದೇಶದವರು ಬಿಜೆಪಿ, ಕಾಂಗ್ರೆಸ್‌ ಸಹಿತ ಎಲ್ಲ ಪಕ್ಷಗಳನ್ನೂ ತೆಗಳುತ್ತಿದ್ದಾರೆ. ಬಿಎಸ್‌ವೈಯವರು ಬಿಜೆಪಿ ನಾಯಕರಿಗೆ ಚೆಕ್‌ ಮೂಲಕ ಕಪ್ಪ ನೀಡಿದ್ದಾರೆ ಎಂದು ಆರೋಪಿಸುವ ಕುಮಾರಸ್ವಾಮಿಯವರು ಕೂಡ ದಾಖಲೆ ನೀಡಿ ಮಾತನಾಡಲಿ ಎಂದು ತಿಳಿಸಿದರು. 

ಉಪವಾಸ ಸತ್ಯಾಗ್ರಹದ ಎಚ್ಚರಿಕೆ
ಎತ್ತಿನಹೊಳೆ ಯೋಜನೆಯ ಮೂಲಕ ಎಷ್ಟು ಹಣ ದೋಚಲು ಸಾಧ್ಯವೋ, ಅಷ್ಟನ್ನು ದೋಚಲು ಸಿದ್ಧತೆ ನಡೆದಿದೆ. ಬೆಂಗಳೂರು, ಕೋಲಾರದಲ್ಲಿ ನೀರಿಲ್ಲ ಎಂದು ಕರಾವಳಿಯನ್ನೇ ಬರಡಾಗಿಸಲು ಹೊರಟಿದ್ದಾರೆ. ಇದಕ್ಕೆ ರಾಜ್ಯ ಸರಕಾರದ ಜತೆ ಕೇಂದ್ರವೂ ಹೊಣೆಯಾಗುತ್ತದೆ. ಮುಂದೆ ಯೋಜನೆಯನ್ನು ನಿಲ್ಲಿಸದೇ ಇದ್ದಲ್ಲಿ ಕುದ್ರೋಳಿ ಕ್ಷೇತ್ರದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ ಎಂದು ಎಚ್ಚರಿಸಿದರು.

ಬಂದ್‌: ನ್ಯಾಯಾಲಯಕ್ಕೆ ಸವಾಲು
ಕೇರಳ ಮುಖ್ಯಮಂತ್ರಿಯ ದಕ್ಷಿಣ ಕನ್ನಡ ಭೇಟಿ ವಿರೋಧಿಸಿ ಜಿಲ್ಲಾ ಬಂದ್‌ಗೆ ಕರೆ ಕೊಟ್ಟಿರುವ ಸಂಘ ಪರಿವಾರಗಳು ಹಾಗೂ ಬಿಜೆಪಿ ಸುಪ್ರಿಂಕೋರ್ಟ್‌ಗೆ ಸವಾಲು ಹಾಕುವ ಕಾರ್ಯವನ್ನು ಮಾಡಿದೆ. ಬಂದ್‌ನಿಂದ ಹಿಂಸೆ, ವ್ಯಾಪಾರ-ವ್ಯವಹಾರಕ್ಕೆ ಹಾನಿಯಾದರೆ ಬಂದ್‌ಗೆ ಕರೆ ಕೊಟ್ಟವರೇ ಭರಿಸಬೇಕು ಎಂದು ಪೂಜಾರಿ ಆಗ್ರಹಿಸಿದರು. 
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕಳ್ಳಿಗೆ ತಾರಾನಾಥ ಶೆಟ್ಟಿ, ಅರುಣ್‌ ಕುವೆಲ್ಲೊ, ಮಾಜಿ ಮೇಯರ್‌ ಅಜಿತ್‌ಕುಮಾರ್‌, ಯು.ಕರುಣಾಕರ ಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್‌; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

6

Mangaluru: ಅಪಾರ್ಟ್‌ಮೆಂಟ್‌, ಮಾಲ್‌ಗ‌ಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ

5

Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು

4

Kulur: ಗೈಲ್‌ ಪೈಪ್‌ಲೈನ್‌ ಕಾಮಗಾರಿ; ಹೆದ್ದಾರಿ ಕುಸಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

9

Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫ‌ಲಪ್ರದ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.