ನಿಡ್ಪಳ್ಳಿ ಶಾಲೆ: ರಂಗ ಮಂದಿರ, ಆಟದ ಮೈದಾನ ನಿರ್ಮಿಸಿ


Team Udayavani, May 28, 2018, 12:50 PM IST

28-may-10.jpg

ನಿಡ್ಪಳ್ಳಿ : ಇಲ್ಲಿಯ ದ.ಕ.ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ ಆರಂಭವಾಗಿ ಶತಮಾನದ ಅಂಚಿನಲ್ಲಿದೆ. ಬೆಟ್ಟಂಪಾಡಿ ಕ್ಲಸ್ಟರ್‌ ಮಟ್ಟದಲ್ಲಿ ಹೆಚ್ಚು ಮಕ್ಕಳಿರುವ ಎರಡನೆ ಶಾಲೆ ಇದು. ಇಲ್ಲಿ ಶಾಲಾ ಕಟ್ಟಡದ ಅಥವಾ ಕೊಠಡಿಯ ಕೊರತೆಯೇನೂ ಇಲ್ಲ. ಕುಡಿಯುವ ನೀರು, ಅಕ್ಷರ ದಾಸೋಹ ಕಟ್ಟಡ, ಶೌಚಾಲಯ ಮೊದಲಾದ ಸೌಕರ್ಯಗಳೂ ಪರ್ಯಾಪ್ತವಾಗಿವೆ.

ಕೊಠಡಿ ದುರಸ್ತಿ
ಶಾಲೆಯ ಹಳೆಯ ಕಟ್ಟಡದ ಎರಡು ತರಗತಿ ಕೊಠಡಿಗಳ ಛಾವಣಿ ಶಿಥಿಲಗೊಂಡ ಕಾರಣ, ದುರಸ್ತಿಗಾಗಿ ಕಳೆದ ಶೈಕ್ಷಣಿಕ ವರ್ಷದಲ್ಲಿ ತಾ.ಪಂ. ಹಾಗೂ ಜಿ.ಪಂ.ಗೆ ಮನವರಿಕೆ ಮಾಡಲಾಗಿತ್ತು. ತಾ.ಪಂ. ಸದಸ್ಯ ಹರೀಶ್‌ ಬಿಜತ್ರೆ ಅವರು ಇದನ್ನು ಪರಿಶೀಲಿಸಿ, 2016-17ನೇ ಸಾಲಿನಲ್ಲಿ ಒಂದು ಕೊಠಡಿಯ ಮಾಡು ದುರಸ್ತಿಗೆ ಅನುದಾನ ಮಂಜೂರು ಮಾಡಿದರು. ಅದರಂತೆ, ದುರಸ್ತಿಯೂ ಆಗಿದೆ. ಇನ್ನೊಂದು ಕೊಠಡಿಯ ಛಾವಣಿ ಮಾಡು ಮತ್ತು ಎರಡು ಬಾಗಿಲುಗಳ ದುರಸ್ತಿಗೆ ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರು 2017-18ನೇ ಸಾಲಿನ ಮಾರ್ಚ್‌ ತಿಂಗಳಲ್ಲಿ ಅನುದಾನ ಮಂಜೂರು ಮಾಡಿದರು. ಛಾವಣಿ ಹಾಗೂ ಬಾಗಿಲುಗಳ ದುರಸ್ತಿಗೆ ಸಹಕರಿಸಿದ್ದಾರೆ ಎಂದು ಎಸ್‌ಡಿಎಂಸಿ ಅಧ್ಯಕ್ಷರು ತಿಳಿಸಿದ್ದಾರೆ.

ಸುಣ್ಣ-ಬಣ್ಣ ಆಗಲಿ
ಹಳೆಯ ಕಟ್ಟಡವನ್ನು ತೆಗೆದು 2006ರಲ್ಲಿ ನೂತನ ಕಟ್ಟಡ ನಿರ್ಮಿಸಲಾಗಿದೆ. ಉದ್ಘಾಟನೆಗೂ ಮೊದಲು ಸುಣ್ಣ-ಬಣ್ಣ
ಬಳಿಯಲಾಗಿತ್ತು. ಆಮೇಲೆ ಬಣ್ಣ ಮಾಸಿದ್ದು, ಹೊಸದಾಗಿ ಬಣ್ಣ ಬಳಿಯಲು ಇಲಾಖೆ ಅನುದಾನ ಮಂಜೂರು ಮಾಡಬೇಕಿದೆ. ವಾರ್ಷಿಕೋತ್ಸವ ಹಾಗೂ ಇತರ ಸಭಾ ಕಾರ್ಯಕ್ರಮಗಳನ್ನು ನಡೆಸಲು ವೇದಿಕೆಯ ಅಗತ್ಯವಿದೆ. ಗ್ರಾಮದ ಕೇಂದ್ರ ಶಾಲೆಯಾದ ಕಾರಣ ಇಲ್ಲಿ ಹಲವು ಕಾರ್ಯಕ್ರಮಗಳು ನಡೆಯುತ್ತಿವೆ. ಹೀಗಾಗಿ, ರಂಗ ಮಂದಿರ ನಿರ್ಮಾಣ ಮಾಡುವಂತೆ ಇಲಾಖೆಗೆ ಬೇಡಿಕೆ ಸಲ್ಲಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ. 

ಹಳ್ಳಿ ಮಕ್ಕಳು ಕ್ರೀಡೆಯಲ್ಲಿ ಗಮನಾರ್ಹ ಸಾಧನೆ ಮಾಡುವಂತಾಗಲು ಆಟದ ಮೈದಾನ, ಕ್ರೀಡೋಪಕರಣಗಳು, ದೈಹಿಕ ಶಿಕ್ಷಣ ಶಿಕ್ಷಕರು ಇರಬೇಕು. ಈ ಬಗ್ಗೆ ಸರಕಾರ ಮುತುವರ್ಜಿ ವಹಿಸಿ, ಶಾಲೆಗೆ ಆಟದ ಮೈದಾನ ಒದಗಿಸಿಕೊಡಬೇಕು. ದೈಹಿಕ ಶಿಕ್ಷಣ ಶಿಕ್ಷಕರ ನೇಮಕ ಮಾಡಬೇಕು. 

ಸಹಕಾರ ಅಗತ್ಯ
ಶಾಲೆ ಕಟ್ಟಡ ನಿರ್ಮಾಣ ಆದ ಮೇಲೆ ಸುಣ್ಣ – ಬಣ್ಣ ಬಳಿದಿಲ್ಲ. ಇದಕ್ಕೆ ಸಂಬಂಧಪಟ್ಟ ಇಲಾಖೆಗೆ ಬೇಡಿಕೆ ಸಲ್ಲಿಸಲು ಎಸ್‌ಡಿಎಂಸಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಆದುದರಿಂದ ಇದಕ್ಕೆ ಜನಪ್ರತಿನಿಧಿಗಳ, ಇಲಾಖಾಧಿಕಾರಿಗಳ ಸಹಕಾರದ ನಿರೀಕ್ಷೆಯಲ್ಲಿದ್ದೇವೆ. 
– ತೋಪಯ್ಯ ಕೆ., ಮುಖ್ಯ ಗುರುಗಳು

ವಿಶೇಷ ವರದಿ

ಟಾಪ್ ನ್ಯೂಸ್

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

1-raj

Vijay Hazare Trophy; ರಾಜಸ್ಥಾನ, ಹರಿಯಾಣ ಕ್ವಾರ್ಟರ್‌ ಫೈನಲ್‌ಗೆ

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

1-raj

Vijay Hazare Trophy; ರಾಜಸ್ಥಾನ, ಹರಿಯಾಣ ಕ್ವಾರ್ಟರ್‌ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.