ಅಮಾಯಕರ ಬಂಧನ ಇಲ್ಲ : ಎಡಿಜಿಪಿ ಆಲೋಕ್‌


Team Udayavani, Jul 13, 2017, 3:50 AM IST

ADGP-Alok-Mohan.jpg

ಮಂಗಳೂರು: ಬಂಟ್ವಾಳ ತಾಲೂಕಿನಲ್ಲಿ ನಡೆದ ಅಹಿತಕರ ವಿದ್ಯಮಾನಗಳಿಗೆ ಸಂಬಂಧಿಸಿ ಅಮಾಯಕರನ್ನು ಬಂಧಿಸುವುದಿಲ್ಲ; ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನೈಜ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಎಡಿಜಿಪಿ ಆಲೋಕ್‌ ಮೋಹನ್‌ ತಿಳಿಸಿದರು.

ಬುಧವಾರ ದ.ಕ. ಜಿಲ್ಲೆಗೆ ಭೇಟಿ ನೀಡಿದ ಅವರು ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿ ಬಂಟ್ವಾಳ ಮತ್ತು ಉಳ್ಳಾಲಕ್ಕೆತೆರಳಿ ಪರಿಸ್ಥಿತಿ ಅವಲೋಕಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಶರತ್‌ ಕೊಲೆ ಪ್ರಕರಣದ ಆರೋಪಿಗಳಿಗೆ ಸಂಬಂಧಿಸಿ ಕೆಲ ವೊಂದು ಸುಳಿವುಗಳು ಲಭ್ಯವಾಗಿವೆ. ಈ ಪ್ರಕರಣ ಮತ್ತು ನಂತರದ ಘಟನಾ ವಳಿಗೆ ಸಂಬಂಧಿಸಿ ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ. ಅತೀ ಶೀಘ್ರ ದಲ್ಲಿ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ. ಕೆಲವು ಘಟನೆಗಳಿಗೆ ಸಂಬಂಧಿಸಿ ಸೂಕ್ತ ಸಾಕ್ಷಾ  éಧಾರಗಳು ಲಭಿಸಿದ ಕಾರಣ ಶೀಘ್ರ ಆರೋಪಿಗಳ ಪತ್ತೆ ಸಾಧ್ಯವಾಗಿದೆ.

ಸಾಕ್ಷ್ಯಾಧಾರಗಳಿಲ್ಲದೆ ಯಾರನ್ನೂ ಬಂಧಿಸುವುದಿಲ್ಲ ಎಂದರು. ಬಂಟ್ವಾಳ ಸಹಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗ ಪರಿಸ್ಥಿತಿ ಶಾಂತಿಯುತ ವಾಗಿದೆ. ಎಲ್ಲಿಯೂ ಕೋಮು ಸಂಘರ್ಷ ಗಳು ನಡೆದ ಬಗ್ಗೆ ವರದಿ ಯಾಗಿಲ್ಲ. ಆದರೆ ಇತರ ಸಾಮಾನ್ಯ ಅಪರಾಧ ಗಳಿಗೆ ಸಂಬಂಧಿಸಿ ಉಳ್ಳಾಲ, ಉಪ್ಪಿನಂಗಡಿ, ಕುಪ್ಪೆಪದವಿನಲ್ಲಿ 3 ಪ್ರತ್ಯೇಕ ಪ್ರಕರಣಗಳು ನಡೆ ದಿದ್ದು, ಎಲ್ಲವೂ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಸಂಭವಿ ಸಿವೆ ಎಂದರು.

ಸಾಮಾಜಿಕ ಜಾಲ ತಾಣಗಳಲ್ಲಿ ಬರುತ್ತಿರುವ ಕೆಲವೊಂದು ಸುದ್ದಿ ಗಳು ಸುಳ್ಳು ಎಂಬುದು ಈಗ ಜನರಿಗೂ ಅರ್ಥವಾಗಿದೆ. ಇಂತಹ ಸುದ್ದಿಗಳಲ್ಲಿ ಅಪರಾಧ ಸಂಬಂಧಿತ ಸುದ್ದಿಗಳಿದ್ದರೆ ಪೊಲೀಸರು ಕ್ರಮ ಜರಗಿಸು ತ್ತಾರೆ. ಈ ಹಿಂದೆ ಮಂಗಳೂರಿನ ಕಮಿಷನರ್‌ ಆಗಿದ್ದ ಎಂ. ಚಂದ್ರ ಶೇಖರ್‌ ಅವರು ಫೇಸ್‌ಬುಕ್‌ ಸಂಸ್ಥೆಯ ಮೇಲೆ ದಾಖಲಿ ಸಿದ್ದ ದೂರು ಪ್ರಕರಣಗಳನ್ನು ಅಲ್ಲಿಗೇ ಕೈಬಿಡುವುದಿಲ್ಲ ಎಂದು ವಿವರಿಸಿದರು.

ಹಿಂಜಾವೇ ಮುಖಂಡ ಸತ್ಯಜಿತ್‌ ಸುರತ್ಕಲ್‌ ಅವರ ವಿರುದ್ಧ ಪ್ರಕರಣ ದಾಖಲಿಸಿರುವ ಬಗ್ಗೆ ಪ್ರಶ್ನಿಸಿದಾಗ ಪ್ರಕರಣ ದಾಖಲಿಸುವುದು ಮತ್ತು ಚಾರ್ಜ್‌ ಶೀಟ್‌ ಹಾಕುವುದು ಬೇರೆ ಬೇರೆ ಪ್ರಕ್ರಿಯೆಗಳಾಗಿವೆ. ಸೂಕ್ತ ಸಾಕ್ಷ್ಯಾಧಾರ ಲಭಿಸಿದರೆ ಮಾತ್ರ ಚಾರ್ಜ್‌ ಶೀಟ್‌ ಹಾಕಲಾಗುತ್ತದೆ. ಈ ಪ್ರಕರಣದಲ್ಲಿ ಜನರ ಹೇಳಿಕೆಗಳನ್ನು ಹಾಗೂ ಸತ್ಯಜಿತ್‌ ಅವರ ಹೇಳಿಕೆಗಳನ್ನೂ ಪಡೆದು ಮುಂದಿನ ಕ್ರಮ ಜರಗಿಸಲಾಗುವುದು. ಆದರೆ ಏನಿದ್ದರೂ ಅಮಾಯಕರ ಮೇಲೆ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಎಡಿಜಿಪಿ ತಿಳಿಸಿದರು.

ವಿವಿಧ ವಿದ್ಯಮಾನಗಳಿಗೆ ಸಂಬಂಧಿಸಿ ಸಾರ್ವಜನಿಕರು ಕೂಡ ಪೊಲೀಸರಿಗೆ ಮಾಹಿತಿ ನೀಡಬಹುದು. ಮಾಹಿತಿದಾರರ ಬಗ್ಗೆ  ಗೌಪ್ಯತೆ ಕಾಪಾಡಲಾಗುವುದು ಎಂದು ತಿಳಿಸಿದರು. 

ಕಲ್ಲು  ತೂರಾಟ:
6 ಕೇಸು ದಾಖಲು

ಶರತ್‌ ಶವಯಾತ್ರೆ ಸಂದರ್ಭ ದಲ್ಲಿ ಬಿ.ಸಿ.ರೋಡ್‌ ಕೈಕಂಬದಲ್ಲಿ ನಡೆದ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿ ಒಟ್ಟು 6 ಪ್ರಕರಣ ಗಳನ್ನು ದಾಖಲಿಸಲಾಗಿದೆ. ವಿವಿಧ ಪ್ರಕರಣಗಳಿಗೆ ಸಂಬಂಧಿಸಿ ಇದುವರೆಗೆ ಒಟ್ಟು 17 ಜನರನ್ನು ಬಂಧಿಸಲಾಗಿದೆ. ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಸಿಸಿ ಟಿವಿ ಫೂಟೇಜ್‌ಗಳನ್ನು ಆಧರಿಸಿ ಜಿಲ್ಲಾ ಎಸ್‌ಪಿ ಮತ್ತು ಐಜಿಪಿ ಅವರು ದೃಢೀಕರಿಸಿದ ಬಳಿಕ ಬಂಧಿಸುವ ಪ್ರಕ್ರಿಯೆ ನಡೆದಿದೆ ಎಂದು ಐಜಿಪಿ ವಿವರಿಸಿದರು. 

ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಬಂಧನಕ್ಕೆ ಸರಕಾರದಿಂದ ಯಾವುದೇ ಸೂಚನೆ ಬಂದಿದೆಯೇ ಎಂದು ಪತ್ರಕರ್ತರು ಪ್ರಶ್ನಿಸಿದಾಗ “ನಾವು ಕಾನೂನು ಪ್ರಕಾರ ನಡೆಯುತ್ತೇವೆ’ ಎಂದಷ್ಟೇ ಎಡಿಜಿಪಿ ತಿಳಿಸಿದರು.

ಟಾಪ್ ನ್ಯೂಸ್

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

6

Mangaluru; ನಗರದ ಇನ್ನಷ್ಟು ಕಡೆ ಬೀದಿ ಬದಿ ವ್ಯಾಪಾರಸ್ಥರ ವಲಯ: ಮೇಯರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.