ಮತ್ತೂಂದು ವಿಮಾನ ನಿಲ್ದಾಣ ಸದ್ಯಕ್ಕಿಲ್ಲ : ಶಶಿಕಾಂತ್‌ ಸೆಂಥಿಲ್‌

Team Udayavani, Aug 26, 2018, 11:38 AM IST

mangalore-airport.jpg

ಮಂಗಳೂರು: ಕರಾವಳಿ ಭಾಗದಲ್ಲಿ ಮತ್ತೂಂದು ಹೊಸ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಹೇಳಿದರು.

ಕೆನರಾ ಕೈಗಾರಿಕೆ ಮತ್ತು ವಾಣಿಜ್ಯ ಕೈಗಾರಿಕಾ ಸಂಸ್ಥೆ ವತಿಯಿಂದ ಶನಿವಾರ ಸಂಸ್ಥೆಯ ಸಭಾಂಗಣದಲ್ಲಿ “ಏರ್‌ ಸರ್ವಿಸ್‌ ಮತ್ತು ಏರ್‌ ಕಾರ್ಗೊ ಪರಿಚಯ’ ಕುರಿತು ನಡೆದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಈಗಿರುವ ಮಂಗಳೂರು ವಿಮಾನ ನಿಲ್ದಾಣವು ಮುಂದಿನ 50 ವರ್ಷಗಳ ಅವಧಿಗೆ ಜನರ ಬೇಡಿಕೆ ಪೂರೈಸುವ ಸಾಮರ್ಥ್ಯ ಹೊಂದಿದೆ. ಆದ್ದರಿಂದ ಹೊಸ ವಿಮಾನ ನಿಲ್ದಾಣದ ಯೋಜನೆ ಇಲ್ಲ ಎಂದು ತಿಳಿಸಿದರು.

ದ.ಕ. ಜಿಲ್ಲೆಯ ಗಡಿ ಪ್ರದೇಶವಾದ ಕಾಸರಗೋಡು ಮತ್ತು ಕೊಡಗು ಪ್ರದೇಶಗಳ ಕೃಷಿ ಉತ್ಪನ್ನಗಳು ಗಲ್ಫ್ ರಾಷ್ಟ್ರಗಳಿಗೆ ರಫ್ತಾಗುತ್ತಿವೆ. ಇದಕ್ಕೆಂದು ಪ್ರತ್ಯೇಕ ಕಾರ್ಗೋ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಮುಂದಿನ ದಿನಗಳಲ್ಲಿ ವಿಮಾನ ನಿಲ್ದಾಣ, ಕೆಸಿಸಿಐ ಮತ್ತು ಜಿಲ್ಲಾಡಳಿತ ಚಿಂತನೆ ನಡೆಸಲಿದೆ ಎಂದರು.

33 ಎಕರೆ ಸ್ವಾಧೀನ
ಮಂಗಳೂರು ವಿಮಾನ ನಿಲ್ದಾಣದ ಅಭಿವೃದ್ಧಿ ವಿಚಾರವಾಗಿ ಗಮನಹರಿಸಲಾಗುವುದು. ವಿಮಾನ ನಿಲ್ದಾಣ ಸೌಲಭ್ಯ ವಿಸ್ತರಣೆಗೆ ಅವಶ್ಯವಿರುವ 33 ಎಕರೆ ಜಾಗ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಪೂರ್ಣಗೊಂಡಿದೆ. ಮಂಗಳೂರು ನಗರದಿಂದ ಬಜಪೆ ವಿಮಾನ ನಿಲ್ದಾಣ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗುಂಡಿ ಬಿದ್ದಿದ್ದು, ಈ ಬಗ್ಗೆ ಜಿಲ್ಲಾಡಳಿತಕ್ಕೆ ಅನೇಕ ದೂರುಗಳು ಬಂದಿವೆ. ಆದರೆ ಹೆದ್ದಾರಿಗಳು ಕೇಂದ್ರ ಸರಕಾರದ ಅಧೀನಕ್ಕೆ ಒಳಪಟ್ಟಿರುತ್ತದೆ. ಈ ಬಗ್ಗೆ ಹೆದ್ದಾರಿ ಪ್ರಾಧಿಕಾರ ಗಮನಹರಿಸಬೇಕಿದೆ. ಜಿಲ್ಲಾಡಳಿತವೂ ವಿಶೇಷ ಗಮನಹರಿಸಲಿದೆ ಎಂದು ಹೇಳಿದರು.ರಾಜ್ಯದಲ್ಲಿ ದ.ಕ. ಜಿಲ್ಲೆಗೆ ಮೊದಲನೇ ಸ್ಥಾನಕ್ಕೇರುವ ಎಲ್ಲ ಅರ್ಹತೆಗಳಿವೆ. ದ.ಕ. ಅವಕಾಶಗಳ ಹೆಬ್ಟಾಗಿಲಾಗಿದ್ದು, ಮೂಲಸೌಕರ್ಯಕ್ಕೆ, ಮಾನವ ಸಂಪದಕ್ಕೆ ಯಾವುದೇ ರೀತಿಯ ಕೊರತೆ ಇಲ್ಲ. ಎಂದರು.

ಪ್ರಯಾಣ ದರ ಹೆಚ್ಚಳ: ಕ್ರಮ
ಪ್ರಾಕೃತಿಕ ವಿಪತ್ತು ಸಂಭವಿಸುವ ವೇಳೆ ವಿಮಾನ ಸೇರಿದಂತೆ ಇತರ ಸಂಚಾರ ವ್ಯವಸ್ಥೆಯ ಪ್ರಯಾಣ ದರ ಹೆಚ್ಚಳವಾಗುತ್ತಿದ್ದು, ಈ ಬಗ್ಗೆ ಸರಕಾರದೊಂದಿಗೆ ಚರ್ಚೆ ನಡೆಸಲಾ ಗುವುದು. ಇತ್ತೀಚೆಗೆ ಮಂಗಳೂರಿನಿಂದ ಬೆಂಗಳೂರಿಗೆ ವಿಮಾನ ಪ್ರಯಾಣದರ ಹೆಚ್ಚಿಸಿದ ಕುರಿತು ನಾಗರಿಕ ವಿಮಾನಯಾನ ನಿರ್ದೇಶನಾಲಯ ಕ್ರಮ ಕೈಗೊಂಡಿತ್ತು ಎಂದು ವಿವರಿಸಿದರು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ವಿ.ವಿ. ರಾವ್‌ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಏರ್‌ ಕಾರ್ಗೊ ಕ್ಷೇತ್ರದಲ್ಲಿ ಬೆಳವಣಿಗೆಯಾಗುತ್ತಿದೆ. ಇಂತಹ ಸಮಯದಲ್ಲಿ ಈ ರೀತಿಯ ಕಾರ್ಯಾಗಾರಗಳ ಆವಶ್ಯಕತೆ ಇದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೆನರಾ ಕೈಗಾರಿಕೆ ಮತ್ತು ವಾಣಿಜ್ಯ ಕೈಗಾರಿಕಾ ಸಂಸ್ಥೆ ಅಧ್ಯಕ್ಷೆ ವತಿಕಾ ಪೈ,ಏರ್‌ಲೈನ್‌ ಸರ್ವಿಸ್‌ ಮತ್ತು ಏರ್‌ಪೋರ್ಟ್‌ ಸಬ್‌ಕಮಿಟಿ ಮಾಜಿ ಅಧ್ಯಕ್ಷ ಕ್ಯಾ| ಜಾನ್‌ ಪ್ರಸಾದ್‌ ಮಿನೇಜಸ್‌, ರೀನಾ ಶೆಟ್ಟಿ, ಪ್ರಶಾಂತ್‌ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

15

Mangaluru: ಚಿನ್ನದ ಬಿಸ್ಕೆಟ್‌ ಇದೆ ಎಂದು ನಂಬಿಸಿ 4 ಲಕ್ಷ ರೂ. ವಂಚನೆ

ssa

Mangaluru: ಮಾದಕ ವಸ್ತು ಸೇವನೆ; ಯುವಕ ವಶಕ್ಕೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.