ಕಾಸರಗೋಡಿಗೆ ಸರ್ಕಾರಿ, ಖಾಸಗಿ ಬಸ್ ಸಂಚಾರವಿಲ್ಲ: ನಳೀನ್ ಕುಮಾರ್ ಕಟೀಲು
Team Udayavani, Jul 31, 2021, 7:44 PM IST
ಮಂಗಳೂರು: ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದುಎಂದು ಸಂಸದರಾದ ನಳೀನ್ ಕುಮಾರ್ ಕಟೀಲು ಅವರು ತಿಳಿಸಿದರು.
ಅವರು ಜುಲೈ 31ರ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ತೆ ವಹಿಸಿ ಮಾತನಾಡಿದರು.
ಇದನ್ನೂ ಓದಿ: ಕೋವಿಡ್ :ರಾಜ್ಯದಲ್ಲಿಂದು 1987 ಹೊಸ ಪ್ರಕರಣ ಪತ್ತೆ, 1632 ಸೋಂಕಿತರು ಗುಣಮುಖ
ಕೋವಿಡ್ ಪಾಸಿಟಿವಿಟಿ ಪ್ರಕರಣಗಳು ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿಯೂ ಹೆಚ್ಚಾಗುತ್ತಿದ್ದು, ಜಿಲ್ಲೆಯ ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಕೊರೊನಾ ಸೋಂಕು ಹರಡದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದರೊಂದಿಗೆ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ ಎಂದ ಅವರು, ಆಗಸ್ಟ್ 1 ರಿಂದ 7 ದಿನ ಮಂಗಳೂರಿನಿಂದ ಕೇರಳ ರಾಜ್ಯದ ಕಾಸರಗೋಡುಗೆ ಹೋಗುವ ಕೆ.ಎಸ್.ಆರ್.ಟಿ.ಸಿ ಹಾಗೂ ಖಾಸಗಿ ಬಸ್‍ಗಳ ಸಂಚಾರವನ್ನು ನಿಲ್ಲಿಸಬೇಕು, ಕೇರಳದಿಂದ ಜಿಲ್ಲೆಗೆ ಬರುವ ವಿದ್ಯಾರ್ಥಿಗಳಲ್ಲಿ ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ಇರಬೇಕು, ಮುಖ್ಯವಾಗಿ ಅಲ್ಲಿನ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ತಾವಿರುವ ವಿದ್ಯಾರ್ಥಿನಿಲಯಗಳಲ್ಲಿಯೇ ಒಂದು ವಾರ ಹೋಂ ಕ್ವಾರಂಟೈನ್‍ನಲ್ಲಿಯೇ ಇರಬೇಕು, ಪ್ರತಿ ದಿನ ಅವರುಗಳ ಬಗ್ಗೆ ನಿಗಾ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್ಮೆಂಟ್, ಮಾಲ್ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Kulur: ಗೈಲ್ ಪೈಪ್ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.