ಕಾಂಗ್ರೆಸ್‌ಗೆ ಲಾಭವಾಗದ ಹೊಂದಾಣಿಕೆ; ಬೆಂಬಲ
Team Udayavani, May 24, 2019, 6:10 AM IST
ಮಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡದಲ್ಲಿಯೂ ಬಿಜೆಪಿಯನ್ನು ಮಣಿಸುವುದಕ್ಕೆ ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮತ್ತು ಅತ್ತ ಸಿಪಿಎಂ, ಸಿಪಿಐ ಸೇರಿದಂತೆ ಎಡಪಕ್ಷಗಳಿಂದ ಪರೋಕ್ಷವಾಗಿ ಬೆಂಬಲ ಗಳಿಸಿದ್ದರೂ ಕಾಂಗ್ರೆಸ್‌ಗೆ ಅದರಿಂದ ಯಾವುದೇ ಲಾಭವಾಗಿಲ್ಲ ಎನ್ನುವುದು ಗಮನಾರ್ಹ.
ಈ ಬಾರಿಯ ಫಲಿತಾಂಶವನ್ನು ಅವಲೋಕಿಸಿದರೆ, ಕಾಂಗ್ರೆಸ್ ಪರಾಭವದ ಅಂತರ ಕಳೆದ ಬಾರಿಯ ಚುನಾವಣೆಗಿಂತಲೂ ಜಾಸ್ತಿಯಾಗಿದೆ. ಇದು ಪಕ್ಷದ ನಾಯಕರನ್ನು ಮತ್ತಷ್ಟು ಚಿಂತೆಗೀಡು ಮಾಡಿದೆ. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ 2009 ಮತ್ತು 2014ರ ಚುನಾವಣೆಗಳಲ್ಲಿ ಸಿಪಿಎಂ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. 2009ರಲ್ಲಿ ಸಿಪಿಎಂ ಅಭ್ಯರ್ಥಿ ಬಿ. ಮಾಧವ ಅವರು 18,328 ಮತ್ತು 2014ರಲ್ಲಿ ಯಾದವ ಶೆಟ್ಟಿ 9394 ಮತಗಳನ್ನು ಗಳಿಸಿದ್ದರು. ಈ ಬಾರಿ ಸ್ಪರ್ಧೆ ಮಾಡದೆ, ಕೋಮವಾದಿ ಶಕ್ತಿಗಳನ್ನು ಸೋಲಿಸುವ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಪ್ರಬಲ ಜಾತ್ಯತೀತ ಪಕ್ಷವನ್ನು ಬೆಂಬಲಿಸುವುದಾಗಿ ಎಡಪಕ್ಷಗಳು ಕೂಡ ಘೋಷಣೆ ಮಾಡಿದ್ದವು. ಆ ಮೂಲಕ ಪರೋಕ್ಷವಾಗಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದ್ದವು. ಅಲ್ಲದೆ ರಾಜ್ಯದಲ್ಲಿ ಮೈತ್ರಿಯ ಭಾಗವಾಗಿ, ಈ ಹಿಂದೆ ಪ್ರತ್ಯೇಕ ಸ್ಪರ್ಧಿಸಿದ್ದ ಜೆಡಿಎಸ್ ಕೂಡ ಕಾಂಗ್ರೆಸ್ ಬೆಂಬಲಿಸಿತ್ತು.
ಮಂಗಳೂರು ಲೋಕಸಭಾ ಕ್ಷೇತ್ರ, ಪುನರ್ ವಿಂಗಡನೆಯ ಬಳಿಕ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರವಾಗಿ ರೂಪುಗೊಂಡವರೆಗಿನ 1957ರಿಂದ 2014ರ ವರೆಗಿನ ಒಟ್ಟು 16 ಚುನಾವಣೆಗಳಲ್ಲಿ ಸಿಪಿಐ ಎರಡು ಬಾರಿ ಮತ್ತು ಸಿಪಿಎಂ 6 ಬಾರಿ ಸೇರಿ ಒಟ್ಟು 8 ಬಾರಿ ಸ್ಪರ್ಧೆ ಮಾಡಿತ್ತು. 1957ರ ಚುನಾವಣೆಯಲ್ಲಿ ಸಿಪಿಐಯ ಕೃಷ್ಣ ಶೆಟ್ಟಿ ಅವರು ಕಾಂಗ್ರೆಸ್‌ಗೆ ನಿಕಟ ಸ್ಪರ್ಧೆ ನೀಡಿದ್ದರು.
ಬಲ ವೃದ್ಧಿಸಿಕೊಂಡ ಎಸ್‌ಡಿಪಿಐ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಸ್‌ಡಿಪಿಐ ಮತ ಗಳಿಕೆಯನ್ನು ಹೆಚ್ಚಿಸಿಕೊಳ್ಳುವ ಮೂಲಕ ಗಮನ ಸೆಳೆದಿದೆ. 2014 ಚುನಾವಣೆಯಲ್ಲಿ ಎಸ್‌ಡಿಪಿಐ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹನೀಫ್ ಖಾನ್ ಕೋಡಾಜೆಯವರು 27,254 ಮತಗಳನ್ನು ಗಳಿಸಿದ್ದರು. ಈ ಬಾರಿ ಮಹಮ್ಮದ್ ಇಲ್ಯಾಸ್ ಸ್ಪರ್ಧಿಸಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಮತಗಳ ಮೇಲೆ ಪ್ರಭಾವ ಬೀರಬಹುದು ಎನ್ನುವ ಲೆಕ್ಕಾಚಾರ ಇತ್ತು. ಕಳೆದ ಲೋಕಸಭೆ ಚುನಾವಣೆಗಿಂತ ಈ ಸಲ ಎಸ್‌ಡಿಪಿಐ ಹೆಚ್ಚಿನ ಸಂಖ್ಯೆ ಮತಗಳನ್ನು ಗಳಿಸಿವೆ. ಆದರೆ ಈ ಬಾರಿಯ ಚುನಾವಣೆಯಲ್ಲಿಯೂ ಬಿಜೆಪಿಯ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕುವುದಕ್ಕೆ ಎಸ್‌ಡಿಪಿಐ ಪಕ್ಷದಿಂದ ಸಾಧ್ಯವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.