ನೂಜಿಬಾಳ್ತಿಲ: ಪಂಜಳ ಸೇತುವೆ, ರಸ್ತೆಗೆ ಅನುದಾನ ಮಂಜೂರು… ಹಲವು ವರ್ಷಗಳ ಬೇಡಿಕೆಗೆ ಮನ್ನಣೆ
Team Udayavani, Jan 6, 2023, 6:00 AM IST
ಸುಬ್ರಹ್ಮಣ್ಯ: ನೂಜಿಬಾಳ್ತಿಲ ಗ್ರಾಮದ ಕುಬಲಾಡಿ ಬಳಿಯ ಪಂಜಳ ಪರಿಶಿಷ್ಟ ಜಾತಿ ಕಾಲನಿ ಬಳಿ ಹರಿಯುವ ತೋಡಿಗೆ ಸೇತುವೆ ನಿರ್ಮಿಸಬೇಕೆಂಬ ಬಹುಕಾಲದ ಬೇಡಿಕೆಗೆ ಮನ್ನಣೆ ದೊರೆತಿದ್ದು, ರಸ್ತೆ ಹಾಗೂ ಸೇತುವೆ ಅಭಿವೃದ್ಧಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅನುದಾನ ಬಿಡುಗಡೆಯಾಗಿದೆ.
ನೂಜಿಬಾಳ್ತಿಲ ಗ್ರಾ. ಪಂ. ವ್ಯಾಪ್ತಿಯ ಕುಬಲಾಡಿ ಬಳಿಯ ಪಂಜಳ ಪರಿಶಿಷ್ಟ ಜಾತಿ ಕಾಲನಿಯ ಜನತೆ ಇಲ್ಲಿ ಹರಿಯುವ ತೋಡಿಗೆ ಸೇತುವೆ ಇಲ್ಲದೆ ನೀರು ದಾಟಿ ತೆರಳುತ್ತಿದ್ದರು. ಮಳೆಗಾಲದಲ್ಲಿ ಸುತ್ತು ಬಳಸಿ ಕಡಬ, ಕೊಲ್ಯದಕಟ್ಟೆ, ವಿಮಲಗಿರಿ, ಉಕ್ಕಿನಡ್ಕ ಭಾಗದತ್ತ ತೆರಳಬೇಕಾಗಿತ್ತು.
ಶಾಲಾ-ಕಾಲೇಜಿನ ಮಕ್ಕಳು ಸೇತುವೆ ಇಲ್ಲದೆ ಸಂಕಷ್ಟ ಅನುಭವಿಸುತ್ತಿದ್ದರು. ಇಲ್ಲಿ ಸೇತುವೆ ನಿರ್ಮಿಸುವಂತೆ ಹಲವು ವರ್ಷಗಳಿಂದ ಸಂಬಂಧಿಸಿದವರಿಗೆ ಸ್ಥಳೀಯರು ಮನವಿ ಸಲ್ಲಿಸುತ್ತಾ ಬಂದಿದ್ದರು. ಆದರೆ ಈವರೆಗೆ ಮನವಿಗೆ ಪೂರಕ ವಾತಾವರಣ ನಿರ್ಮಾಣ ಆಗಿರಲೇ ಇಲ್ಲ. ಸದ್ಯ ಅನುದಾನ ಬಿಡುಗಡೆಗೊಂಡಿದೆ.
12.5 ಲಕ್ಷ ರೂ. ಅನುದಾನ
ಪಂಜಳ ಪರಿಶಿಷ್ಟ ಜಾತಿ ಕಾಲನಿಗೆ ರಸ್ತೆ ಅಭಿವೃದ್ಧಿಗೆ ಹಾಗೂ ಸೇತುವೆ ರಚನೆಗೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 12.5 ಲಕ್ಷ ರೂ. ಅನುದಾನ ಬಿಡುಗಡೆಗೊಂಡಿದೆ. ಶೀಘ್ರ ಕಾಮಗಾರಿ ಆರಂಭವಾಗುವ ನಿರೀಕ್ಷೆ ಇದೆ. ಸೇತುವೆ ರಚನೆ ಹಾಗೂ ಸೇತುವೆ ಸಂಪರ್ಕ ರಸ್ತೆಯ ಅಭಿವೃದ್ಧಿ ಕಾರ್ಯವೂ ನಡೆಯಲಿದೆ. ಇಲ್ಲಿನ ಸಮಸ್ಯೆ ಹಾಗೂ ಬೇಡಿಕೆ ಬಗ್ಗೆ ಉದಯವಾಣಿ ಸುದಿನದಲ್ಲಿ ಸರಕಾರದ ಗಮನ ಸೆಳೆಯಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.