ಪುಣಚದಲ್ಲಿ ನೋಟಾ ಅಭಿಯಾನ
Team Udayavani, May 7, 2018, 12:28 PM IST
ಮಹಾನಗರ: ಪುತ್ತೂರು ವಿಧಾನ ಸಭಾಕ್ಷೇತ್ರದ ಪುಣಚಗ್ರಾಮ- ವಾರ್ಡ್ ಸಂಖ್ಯೆ 5ರಲ್ಲಿ ಎರ್ಮೆತೊಟ್ಟಿಯಿಂದ ಮುಂದಕ್ಕೆ ಬಾಳಂತಿಮೊಗರಿಗೆ ಸಾಗುವ ರಸ್ತೆತೀರಾ ಹದಗೆಟ್ಟು ಹೋಗಿದ್ದು, ವಾಹನ ಸಂಚಾರ ದುಸ್ತರವಾಗಿದೆ. ರಸ್ತೆ ದುರಸ್ತಿಗೆ ಸಂಬಂಧಿಸಿ ಜನಪ್ರತಿನಿಧಿಗಳ ನಡೆಗೆ ರೋಸಿಹೋಗಿರುವ ಗ್ರಾಮಸ್ಥರು ಈ ಬಾರಿಯ ಚುನಾವಣೆಗೆ ನೋಟಾ ಅಭಿಯಾನಕ್ಕೆ ಇಳಿದಿದ್ದಾರೆ.
ಕಳೆದ ಹತ್ತು ವರ್ಷಗಳಿಂದ ಈ ರಸ್ತೆಯನ್ನು ಮೇಲ್ದರ್ಜೆಗೆ ಎರಿಸಬೇಕೆಂದು ಇಲ್ಲಿನ ಮತದಾರರು ಮನವಿ ಮಾಡುತ್ತಿದ್ದರೂ, ಈ ಹಿಂದೆ ಆಡಳಿತದಲ್ಲಿದ್ದ ಬಿಜೆಪಿ, ಕಾಂಗ್ರೆಸ್ ಸರಕಾರಗಳು ಸ್ಪಂದಿಸಲಿಲ್ಲ. ಮನವಿಗೆ ಆಡಳಿತ ಪಕ್ಷಗಳು ಸ್ಪಂದಿಸದ ಹಿನ್ನಲೆಯಲ್ಲಿ ಇಲ್ಲಿನ ಜನ ಈ ನಿರ್ಧಾರಕ್ಕೆ ಬಂದಿದ್ದಾರೆ. ವಾರ್ಡಿನ 18 ಮನೆಗಳಲ್ಲೂ ನೋಟಾ ಅಭಿಯಾನದ ಫಲಕಗಳು ರಾಜಕೀಯ ಪಕ್ಷಗಳನ್ನು ಸ್ವಾಗತಿಸುತ್ತಿವೆ. ಚುನಾವಣ ಪ್ರಕ್ರಿಯೆಗೆ ಮಾತ್ರ ನಾವೂ ಪುತ್ತೂರು ಕ್ಷೇತ್ರಕ್ಕೆ ಒಳಪಟ್ಟಿದ್ದು, ಆಡಳಿತಾತ್ಮಕವಾಗಿ ಬಂಟ್ವಾಳ ತಾಲೂಕು ವ್ಯಾಪ್ತಿಗೆ ಬರುತ್ತೇವೆ. ಸ್ಥಳೀಯ ಜನ ಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಇಲ್ಲಿಯ ಮತದಾರರು ಅಭಿವೃದ್ಧಿಯಿಂದ ವಂಚಿತರಾಗಿದ್ದಾರೆ ಎಂದು ಇಲ್ಲಿನ ಮತದಾರ ಸುಬ್ರಹ್ಮಣ್ಯ ಭಟ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.