ಮಾದಕ ದ್ರವ್ಯ ಮಾರಾಟ ಜಾಲ ನಿಯಂತ್ರಣಕ್ಕೆ ಶಾಸಕಿ ಸೂಚನೆ
Team Udayavani, Apr 12, 2017, 11:44 AM IST
ಪುತ್ತೂರು: ನಗರದಲ್ಲಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಗಾಂಜಾ ಮತ್ತಿತರ ಅಮಲು ಪದಾರ್ಥಗಳನ್ನು ಮಾರಾಟ ಮಾಡಲಾಗುತ್ತಿರುವ ಆತಂಕಕಾರಿ ಸಂಗತಿ ಬೆಳಕಿಗೆ ಬರುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಕಠಿನ ಕ್ರಮಕ್ಕೆ ಮುಂದಾಗುವಂತೆ ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು ಮಂಗಳವಾರ ನಡೆದ ತಾ.ಪಂ. ಕೆಡಿಪಿ ಸಭೆಯಲ್ಲಿ ಸೂಚನೆ ನೀಡಿದ್ದಾರೆ.
ಮಾದಕ ಪದಾರ್ಥ ಮಾರಾಟ ಪ್ರಕರಣ ಪತ್ತೆ ಆಗಿರುವ ಬಗ್ಗೆ ಸಭೆಧಿಯಲ್ಲಿ ಪ್ರಸ್ತಾವಿಸಿದ ಶಾಸಕಿ, ಪೊಲೀಸ್ ಅಧಿಕಾರಿಯಲ್ಲಿ ಈ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದರು. ಉತ್ತರಿಸಿದ ನಗರ ಠಾಣಾ ಎಸ್‌ಐ ಓಮನಾ, ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳು ಗಾಂಜಾ, ಅಮಲು ಪದಾರ್ಥ ಸೇವಿಸಿ ಸಿಕ್ಕಿಬಿದ್ದಿರುವ ಪ್ರಕರಣ ದಾಖಲಾಗಿದೆ. ಕೆಲ ಸಂಶಯಿತರನ್ನು ಮಂಗಳೂರಿನಲ್ಲಿ ತಪಾಸಣೆ ಮಾಡಿದಾಗ ಗಾಂಜಾ ಸೇವಿಸಿರುವುದು ಪತ್ತೆ ಆಗಿದೆ. ಅಮಲು ಪದಾರ್ಥ ಸೇವನೆ ಮಾಡಿದವರಲ್ಲಿ ಹದಿಹರೆಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಅಮಲು ಪದಾರ್ಥಗಳ ಪೂರೈಕೆ ಕುರಿತು ವಿದ್ಯಾರ್ಥಿಗಳನ್ನು ಪ್ರಶ್ನಿಸಿದಾಗ, ಅವರಿಂದ ಸಮರ್ಪಕ ಉತ್ತರ ಸಿಕ್ಕಿಲ್ಲ. ಪೊಲೀಸ್ ಇಲಾಖೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಿದೆ ಎಂದು ಉತ್ತರಿಸಿದರು.
ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು, ಅಮಲು ಪದಾರ್ಥ ಸೇವನೆ ಮಾಡುವುದು ಎಷ್ಟು ಅಪರಾಧವೊ ಮಾರಾಟ ಮಾಡುವುದು ಅದಕ್ಕಿಂತ ಘೋರ ಅಪರಾಧ. ಹದಿಹರೆಯದ ಮಕ್ಕಳನ್ನು ಮಾದಕ ವ್ಯಸನಿಗಳನ್ನಾಗಿಸಿ ಅವರ ಜೀವನ ಹಾಳು ಮಾಡುವ ಜಾಲದ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಮಲು ಪದಾರ್ಥ ಸೇವಿಸಿದ ವ್ಯಕ್ತಿ ಯಾವ ಕೃತ್ಯಕ್ಕೂ ಮುಂದಾಗುವ ಅಪಾಯ ಇದೆ. ಡ್ರಗ್ಸ್‌ನ ಅಪಾಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ, ಚಟಕ್ಕೆ ಬೀಳದಂತೆ ಎಚ್ಚರ ವಹಿಸುವುದು ಉತ್ತಮ ಎಂದರು.
ಸಭೆಯಲ್ಲಿ ಜಿ.ಪಂ. ಸದಸ್ಯರಾದ ಅನಿತಾ ಹೇಮನಾಥ ಶೆಟ್ಟಿ, ಪಿ.ಪಿ. ವರ್ಗೀಸ್, ಸರ್ವೋತ್ತಮ ಗೌಡ, ಶಯನಾ ಜಯಾನಂದ, ಪ್ರಮೀಳಾ ಜನಾರ್ದನ, ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.