ಗ್ರಾಮ ಕರಣಿಕರು ಹಣ ಕೇಳಿದರೆ ಗಮನಕ್ಕೆ ತನ್ನಿ: ತಹಶೀಲ್ದಾರ್
Team Udayavani, Jul 26, 2017, 7:55 AM IST
ಉರ್ವಸ್ಟೋರ್: ಗ್ರಾಮ ಮಟ್ಟದಲ್ಲಿ ಸರ್ವೆ ಕಾರ್ಯ ಮಾಡಬೇಕಾದರೆ ಗ್ರಾಮ ಕರಣಿಕರಿಗೆ ಒಂದು ಸಾವಿರ ರೂ.ಗಳಿಂದ ಎರಡು ಸಾವಿರ ರೂ.ಗಳ ತನಕ ನೀಡಬೇಕು ಎಂದು ಬೇಡಿಕೆ ಇಡುತ್ತಿದ್ದಾರೆ. ಬಡವರ ಬಳಿ ಹೀಗೆ ಹಣ ಪಡೆಯುವುದರಿಂದ ಅವರಿಗೆ ಅನಗತ್ಯ ಸಮಸ್ಯೆಯಾಗುತ್ತದೆ. ಇದಕ್ಕೆ ಕಡಿವಾಣ ಅಗತ್ಯವಾಗಿದೆ ಎಂದು ತಾಲೂಕು ಪಂಚಾಯತ್ ಸದಸ್ಯರು ಒತ್ತಾಯಿಸಿದರು.
ತಾ.ಪಂ. ಅಧ್ಯಕ್ಷ ಮಹಮ್ಮದ್ ಮೋನು ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ತಾ.ಪಂ. ಸಾಮಾನ್ಯ ಸಭೆ ಜರಗಿತು.
ಇದಕ್ಕೆ ಪ್ರತಿಕ್ರಿಯಿಸಿದ ಮಂಗಳೂರು ತಹಶೀಲ್ದಾರ್ ಮಹಾದೇವಯ್ಯ ಅವರು, ಸರ್ವೆ ಕಾರ್ಯಕ್ಕೆ ಯಾವುದೇ ರೀತಿಯ ಹಣ ನೀಡುವ ನಿಯಮವಿಲ್ಲ. ಒಂದು ವೇಳೆ ಅಂತಹ ಪ್ರಕರಣಗಳು ಕಂಡು ಬಂದರೆ ತತ್‌ಕ್ಷಣ ನನ್ನ ಗಮನಕ್ಕೆ ತನ್ನಿ. ಅಂತಹ ಗ್ರಾಮ ಕರಣಿಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮೂಡಬಿದಿರೆ ತಹಶೀಲ್ದಾರ್ ಮಹಮ್ಮದ್ ಇಸಾಕ್ ಮಾತನಾಡಿ, ಮೂಡಬಿದಿರೆಯಲ್ಲಿ ಹಕ್ಕುಪತ್ರ ನೀಡಲು ಡೀಮ್ಡ್ ಫಾರೆಸ್ಟ್ ಸಮಸ್ಯೆ ತಲೆದೋರಿದೆ. ಈಗಾಗಲೇ ಉಂಟಾಗಿರುವ ಸಮಸ್ಯೆ ಬಗೆಹರಿಸಿಕೊಂಡು ಹಕ್ಕು ಪತ್ರ ವಿತರಿಸುವ ಕೆಲಸ ನಡೆಯಲಿದೆ ಎಂದರು.
ಕುಡಿಯುವ ನೀರು ಕಲುಷಿತ
ಮಳವೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಕುಡಿಯುವ ನೀರು ಕಲುಷಿತಗೊಂಡಿರುವುದರ ಬಗ್ಗೆ ಈ ಹಿಂದೆ ತಿಳಿಸ ಲಾಗಿತ್ತು. ಈ ಕುರಿತು ಏನು ಕ್ರಮಗಳಾಗಿವೆ ಎಂದು ಸದಸ್ಯ ಬಶೀರ್ ಅಹಮ್ಮದ್ ಪ್ರಶ್ನಿಸಿದರು.
ತಾಲೂಕು ಪಂಚಾಯ ತ್ ಅಧ್ಯಕ್ಷ ಮಹಮ್ಮದ್ ಮೋನು ಮಾತನಾಡಿ, ನೀರು ಕಲುಷಿತಗೊಂಡಿರುವ ಬಗ್ಗೆ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಅವರಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲಾ ಪಂಚಾಯ ತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ತಾಲೂಕು ಪಂಚಾಯ ತ್ ಉಪಾಧ್ಯಕ್ಷೆ ಪೂರ್ಣಿಮಾ ಗಣೇಶ್, ಸ್ಥಾಯೀ ಸಮಿತಿಯ ರೀಟಾ ಕುಟಿನ್ಹೊ, ಇಒ ಸದಾನಂದ ಮತ್ತತಿರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.