DC ಮನ್ನಾ ಸ್ಥಳಗಳ ಪಟ್ಟಿ ಒದಗಿಸುವಂತೆ ಸೂಚನೆ
Team Udayavani, Aug 22, 2023, 12:41 AM IST
ಮಂಗಳೂರು: ನಿವೇಶನ ಹಾಗೂ ಕೃಷಿಗಾಗಿ ಅರ್ಹರಿಗೆ ಡಿಸಿ ಮನ್ನಾ ಜಮೀನು ನೀಡಲು ಜಿಲ್ಲೆಯ ಬೆಳ್ತಂಗಡಿ, ಮೂಡುಬಿದಿರೆ ಹಾಗೂ ಮಂಗಳೂರು ತಾಲೂಕಿನಲ್ಲಿ ಡಿಸಿ ಮನ್ನಾ ಜಮೀನು ಎಂದು ಘೋಷಿಸಲಾಗಿರುವ ಸ್ಥಳಗಳ ಪಟ್ಟಿಯನ್ನು ಒದಗಿಸುವಂತೆ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ನಿರ್ದೇಶನ ನೀಡಿದರು.
ಸೋಮವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಡಿಸಿ ಮನ್ನಾ ಜಮೀನಿಗೆ ಸಂಬಂಧಿಸಿ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಮೀನು ಮಾಹಿತಿ ವ್ಯತ್ಯಾಸ ಜಿಲ್ಲೆಯಲ್ಲಿರುವ ಡಿಸಿ ಮನ್ನಾ ಜಮೀನುಗಳು ಯಾವುದು, ಎಷ್ಟಿದೆ ಎಂಬ ಮಾಹಿತಿಯಲ್ಲಿ ವ್ಯತ್ಯಾಸ ಕಂಡುಬಂದಿರುವುದರಿಂದ ಹಾಗೂ ಸಭೆಯಲ್ಲಿ ಸಮುದಾಯದ ಮುಖಂಡರು ಡಿಸಿ ಮನ್ನಾ ಜಮೀನು ಇನ್ನೂ ಹೆಚ್ಚು ಇದೆ ಎಂಬ ಅಂಶಗಳನ್ನು ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ಒಟ್ಟಾರೆಯಾಗಿ “ಅಡಂಗಲ್’ ಒಳಗೊಂಡಂತೆ ಎಲ್ಲ ದಾಖಲೆ ಪರಿಶೀಲಿಸಿ, ಡಿಸಿ ಮನ್ನಾ ಜಮೀನು ಎಷ್ಟಿದೆ ಎಂಬುದನ್ನು ಒಂದರಿಂದ ಒಂದೂವರೆ ತಿಂಗಳಲ್ಲಿ ಪರಿಶೀಲಿಸಿ ವರದಿ ನೀಡುವಂತೆ ತಹಶೀಲ್ದಾರರಿಗೆ ಸೂಚಿಸಿದರು.
ವರದಿ ಬಂದ ಅನಂತರ ಅದನ್ನು ಪ್ರಕಟಿಸಿ, ಸಾರ್ವಜನಿಕರಿಂದಲೂ ಆಕ್ಷೇಪಣೆ ಆಹ್ವಾನಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karkala: ಚಿನ್ನದಂಗಡಿ ಕಳ್ಳತನ: ಕುಖ್ಯಾತ ಸರಗಳ್ಳ ಅರೆಸ್ಟ್
ICC ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೆ ಜಸ್‌ಪ್ರೀತ್ ಬುಮ್ರಾ ಹೆಸರು
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್ ಡ್ರಾ
Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.