ಮೋದಿಯಿಂದ ರಾಷ್ಟ್ರದಲ್ಲಿ ಸೂತಕದ ಛಾಯೆ: ಮಿಥುನ್‌ ರೈ

Team Udayavani, Nov 9, 2017, 10:10 AM IST

9-Nov–2.jpg

ಹಳೆಯಂಗಡಿ: ದೇಶದ ಆರ್ಥಿಕ ಸ್ಥಿತಿಯನ್ನು ಅಧೋಗತಿಗೆ ತಳ್ಳಿದ ನರೇಂದ್ರ ಮೋದಿಯ ನೋಟ್‌ ಬ್ಯಾನ್‌ನಿಂದ ರಾಷ್ಟ್ರದಲ್ಲಿ ವರ್ಷ ಕಳೆದರೂ ಸೂತಕದ ಛಾಯೆ ಮೂಡಿದೆ. ಚಾರ್ಲ್ಸ್‌ ಶೋಭರಾಜ್‌, ಗಬ್ಬರ್‌ಸಿಂಗ್‌ನಂತವರನ್ನೇ ಮೋದಿ ಮೀರಿಸಿದ್ದು, ಇವರ ವಿರುದ್ಧ ವಂಚನೆ ಪ್ರಕರಣವನ್ನು ದಾಖಲಿಸಬೇಕು ಎಂದು ಜಿಲ್ಲಾ ಯುವ ಕಾಂಗ್ರೆಸ್‌ನ ಅಧ್ಯಕ್ಷ ಮಿಥುನ್‌ ರೈ ಹೇಳಿದರು.

ಹಳೆಯಂಗಡಿ ಮುಖ್ಯ ಬಸ್‌ ನಿಲ್ದಾಣದಲ್ಲಿ ಮೂಲ್ಕಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯಿಂದ ನ. 8ರಂದು ಕೇಂದ್ರ ಸರಕಾರದ ನೋಟು ಅಮಾನ್ಯೀಕರಣದ ಕಾರ್ಯಕ್ರಮಕ್ಕೆ ಒಂದು ವರ್ಷ ಪೂರೈಸಿದ್ದರಿಂದ ಅದನ್ನು ವಿರೋಧಿಸಿ ನಡೆದ ಕರಾಳ ದಿನಾಚರಣೆಯ ಪ್ರತಿಭಟನ ಸಭೆಯಲ್ಲಿ ಅವರು ಮಾತನಾಡಿದರು.

ವಿದೇಶದಿಂದ ಕಾಳಧನಿಕರ ಹಣವನ್ನು ಮರಳಿ ದೇಶಕ್ಕೆ ತರುತ್ತೇವೆ ಎಂದು ಹೇಳಿಕೊಂಡ ಮೋದಿ, ಸರಕಾರ ಕೊಟ್ಟ ಭರವಸೆಯನ್ನು ಈಡೇರಿಸಿಲ್ಲ, ಬಡವರಿಗೆ ಬರೆ ಹಾಕಿ ಸಿರಿವಂತರಿಗೆ ತಿಜೋರಿ ತುಂಬಿಸುವ ಪರೋಕ್ಷ ಅಭಿಯಾನವೇ ಈ ನೋಟು ಬದಲಾವಣೆಯ ನಾಟಕದ ಹಿಂದಿನ ಮಸಲತ್ತಾಗಿದೆ ಎಂದರು.

ಮೂಲ್ಕಿ ಬ್ಲಾಕ್‌ ಅಧ್ಯಕ್ಷ ಧನಂಜಯ ಮಟ್ಟು ಮಾತನಾಡಿ, ಜನ ಸಾಮಾನ್ಯರನ್ನು ಬಲಿ ಪಶುಮಾಡಿ ದೊಡ್ಡ ದೊಡ್ಡ ಉದ್ಯಮಿಗಳಿಗೆ ನೆರವು ನೀಡಿದ ನರೇಂದ್ರ ಮೋದಿ ನೋಟು ಅಮಾನತು ಮಾಡಿ ವರ್ಷ ಕಳೆದರು ಅದರ ಪರಿಣಾಮದಿಂದ ಇನ್ನೂ ಜನ ಸಾಮಾನ್ಯರು ಎಚ್ಚೆತ್ತುಕೊಂಡಿಲ್ಲ, ಬಿಜೆಪಿಯ ನಿಜಬಣ್ಣ ಬಯಲಾಗಿದೆ ಎಂದರು.

ಕೆಪಿಸಿಸಿ ಸದಸ್ಯ ಎಚ್‌. ವಸಂತ ಬೆರ್ನಾಡ್‌, ಮೂಲ್ಕಿ ಬ್ಲಾಕ್‌ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಯುವ ಕಾಂಗ್ರೆಸ್‌ ಅಧ್ಯಕ್ಷ ಹಕೀಂ ಮೂಲ್ಕಿ, ಹಳೆಯಂಗಡಿ ಗ್ರಾಮ ಸಮಿತಿಯ ಅಧ್ಯಕ್ಷ ಮನ್ಸೂರ್‌ ಸಾಗ್‌, ಎಪಿಎಂಸಿ ಅಧ್ಯಕ್ಷ ಪ್ರಮೋದ್‌ ಕುಮಾರ್‌, ಪಡುಪಣಂಬೂರು ಗ್ರಾಮ ಸಮಿತಿಯ ಅಧ್ಯಕ್ಷೆ ಸವಿತಾ ಶರತ್‌ ಬೆಳ್ಳಾಯರು, ಮೂಲ್ಕಿ ನ.ಪಂ.ಸದಸ್ಯರಾದ ವಿಮಲಾ ಪೂಜಾರಿ, ಪುತ್ತುಬಾವ, ಬಶೀರ್‌ ಕುಳಾಯಿ, ಅಶೋಕ್‌ ಪೂಜಾರ್‌, ಯೋಗೀಶ್‌ ಕೋಟ್ಯಾನ್‌, ಹಳೆಯಂಗಡಿ ಗ್ರಾ.ಪಂ. ಅಧ್ಯಕ್ಷೆ ಜಲಜಾ, ಸದಸ್ಯರಾದ ಅಬ್ದುಲ್‌ ಖಾದರ್‌, ಅಜೀಜ್‌, ಅನಿಲ್‌ ಬಂಗೇರ, ಚಂದ್ರಶೇಖರ ಸಸಿಹಿತ್ಲು, ಚಿತ್ರಾ ಸುರೇಶ್‌, ಪ್ರವೀಣ್‌ ಸಾಲ್ಯಾನ್‌, ಶರ್ಮಿಳಾ ಕೋಟ್ಯಾನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್‌; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

6

Mangaluru: ಅಪಾರ್ಟ್‌ಮೆಂಟ್‌, ಮಾಲ್‌ಗ‌ಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ

5

Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು

4

Kulur: ಗೈಲ್‌ ಪೈಪ್‌ಲೈನ್‌ ಕಾಮಗಾರಿ; ಹೆದ್ದಾರಿ ಕುಸಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.