ಅಡಿಕೆಗೆ ಬೆಂಬಲ ಬೆಲೆ, ವಿಶೇಷ ಪ್ಯಾಕೇಜ್: ನಳಿನ್ ಮನವಿ
Team Udayavani, Jul 4, 2019, 5:14 AM IST
ಮಂಗಳೂರು: ಅಡಿಕೆ ಕೃಷಿಯನ್ನೇ ನಂಬಿ ಬದುಕು ಸಾಗಿಸುತ್ತಿರುವ ಸಾವಿರಾರು ರೈತ ಕುಟುಂಬಗಳು ಬೆಳೆದ ಅಡಿಕೆ ಬೆಳೆಗೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗದೆ ಕೃಷಿಕರು ಕಂಗಾಲಾಗಿದ್ದಾರೆ. ಆದ್ದರಿಂದ ಕೇಂದ್ರ ಸರಕಾರ ತತ್‌ಕ್ಷಣವೇ ಮಧ್ಯಪ್ರವೇಶಿಸಿ ಅಡಿಕೆ ಬೆಳೆಗೆ ಬೆಂಬಲ ಬೆಲೆ ಮತ್ತು ಅಡಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲು ಆಗ್ರಹಿಸಿದ್ದಾರೆ.
ಲೋಕಸಭೆಯ ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಅಡಿಕೆ ಮಧ್ಯವರ್ತಿಗಳು ಪ್ರಮುಖವಾಗಿ ನೆರೆಯ ಬಾಂಗ್ಲಾ, ಬರ್ಮಾ, ನೇಪಾಲ, ಶ್ರೀಲಂಕಾ ಹಾಗೂ ಮಲೇಶಿಯಾ ದೇಶಗಳಿಂದ ಕಳಪೆ ಗುಣಮಟ್ಟದ ಅಡಿಕೆಯನ್ನು ಕಸ್ಟಂ ತೆರಿಗೆ ವಂಚಿಸಿ ಗಡಿಪ್ರದೇಶದಿಂದ ಅಕ್ರಮವಾಗಿ ಆಮದು ಮಾಡಿಕೊಳ್ಳುತ್ತಿರುವುದರಿಂದ ಹಾಗೂ ಕೊಳೆರೋಗ ಮತ್ತು ಹಳದಿ ರೋಗಳಗಳಂತಹ ಮಾರಕ ರೋಗಗಳಿಗೆ ತುತ್ತಾಗಿ ಮಾರುಕಟ್ಟೆಯಲ್ಲಿ ದೇಶೀಯ ಅಡಿಕೆಗೆ ಬೆಲೆ ಕುಸಿಯುತ್ತಿದೆ. ಅಡಿಕೆ ಮಧ್ಯವರ್ತಿಗಳು ಕಸ್ಟಂ ತೆರಿಗೆ ವಂಚಿಸಿ ಮಾಡುತ್ತಿರುವ ಈ ಅಕ್ರಮ ಆಮದಿನಿಂದಾಗಿ ಕೇಂದ್ರ ಸರಕಾರಕ್ಕೆ ವರ್ಷಕ್ಕೆ ಸುಮಾರು 5,000 ಕೋ.ರೂ.ಗಳಿಗಿಂತ ಅಧಿಕ ನಷ್ಟ ಉಂಟಾಗಿದೆ ಎಂದರು.
ವಿದೇಶಗಳಿಂದ ಆಮದಾಗುತ್ತಿರುವ ಕಳಪೆ ಅಡಿಕೆಯನ್ನು ತಡೆಯುವತ್ತ ಕೇಂದ್ರ ಸರಕಾರ ವಿಶೇಷ ಗಮನಹರಿಸಬೇಕು ಹಾಗೂ ಈ ಬಗ್ಗೆ ವಿಶೇಷ ತನಿಖಾದಳವನ್ನು ರಚಿಸಬೇಕು. ಭಾರತದಲ್ಲಿ ವಿದೇಶದಿಂದ ಅಕ್ರಮವಾಗಿ ಬರುತ್ತಿರುವ ಕಳಪೆ ಗುಣಮಟ್ಟದ ಅಡಿಕೆಯನ್ನು ಸಂಪೂರ್ಣ ನಿಷೇಧಿಸಬೇಕು ಎಂದವರು ಕೇಂದ್ರ ಸರಕಾರವನ್ನು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.