ಪೌಷ್ಟಿಕ ಆಹಾರ – ಅಧ್ಯಯನದೊಂದಿಗೆ ಜನಜಾಗೃತಿ ಅಗತ್ಯ
Team Udayavani, Jan 22, 2018, 11:41 AM IST
ಉಳ್ಳಾಲ: ಪೌಷ್ಟಿಕ ಆಹಾರಗಳ ಕುರಿತು ಹೆಚ್ಚಿನ ಅಧ್ಯಯನದ ಜತೆಗೆ ಜನರಲ್ಲಿ ಜಾಗೃತಿ ಮೂಡಿಸಿದಲ್ಲಿ ಸ್ವಸ್ಥ ಭಾರತ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಪ್ಯಾರಾ ಮೆಡಿಕಲ್‌ನ ವಿವಿಧ ವಿಭಾಗಗಳು ಒಗ್ಗಟ್ಟಾಗಿ ಕಾರ್ಯನಿರ್ವಹಿಸುವ ಆಗತ್ಯ ಇದೆ ಎಂದು ನಿಟ್ಟೆ ವಿ.ವಿ. (ಸ್ವಾಯತ್ತೆಯಾಗಲಿರುವ ವಿ.ವಿ.) ಉಪಕುಲಾಧಿಪತಿ ಡಾ| ಎಂ. ಶಾಂತಾರಾಮ ಶೆಟ್ಟಿ ಅಭಿಪ್ರಾಯಪಟ್ಟರು.
ಅವರು ನಿಟ್ಟೆ ಕ್ಯಾಂಪಸ್ಸಿನ ಕ್ಷೇಮ ಆಡಿಟೋರಿಯಂನಲ್ಲಿ ಶುಕ್ರವಾರ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ, ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೆಬಲ್ ಆಸ್ಪತ್ರೆಯ ಡಯಟೆಟಿಕ್ಸ್ ಆ್ಯಂಡ್ ನ್ಯೂಟ್ರಿಶನ್ ವಿಭಾಗದ ಆಶ್ರಯದಲ್ಲಿ ನಡೆದ ನ್ಯಾಶನಲ್ ನ್ಯೂಟ್ರಿಶಿಯನ್ ಕಾನ್ಫರೆನ್ಸ್ “ನ್ಯೂಟ್ರಿಕಾನ್ -2018’ಗೆ ಚಾಲನೆ ನೀಡಿ ಮಾತನಾಡಿದರು.
ಪೌಷ್ಟಿಕತೆಗೆ ಹೆಚ್ಚಿನ ಒತ್ತು
ಹಿಂದೆ ಆರೋಗ್ಯಕರ ಆಹಾರ ಪದ್ಧತಿಯಿಂದ ಯಾವುದೇ ಸಮಸ್ಯೆಗಳಿರಲಿಲ್ಲ. ಆದರೆ ಇಂದು ಎಲ್ಲ ಆಹಾರಗಳು ರಾಸಾಯನಿಕಗಳಿಂದ ಕೂಡಿವೆ. ಇದರೊಂದಿಗೆ ದೇಶದಲ್ಲಿ ಮಧುಮೇಹ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು. ಇಂತಹ ಜನರಿಗೆ ಪೌಷ್ಟಿಕ ಆಹಾರ ನೀಡುವ ವಿಧಾನ ಮತ್ತು ಅದರಿಂದ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ನ್ಯೂಟ್ರಿಶಿಯನ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದ ಅವರು, ಸರಕಾರ ಇದನ್ನು ಗಮನದಲ್ಲಿಟ್ಟುಕೊಂಡು ಸ್ವಸ್ಥ ಭಾರತ ಕಲ್ಪನೆ ಜತೆಗೆ ಪೌಷ್ಟಿಕತೆಗೆ ಹೆಚ್ಚಿನ ಒತ್ತು ನೀಡುವುದರ ಜತೆಗೆ ಗ್ರಾಮೀಣ ಭಾಗಗಳಲ್ಲಿ ಪರಿಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸುವ ಮೂಲಕ ಉತ್ತಮ ಹೆಜ್ಜೆಯನ್ನು ಇಟ್ಟಿದೆ. ಇದರಿಂದ ಗ್ರಾಮೀಣ ಭಾಗದ ಜನರಲ್ಲಿ ಜಾಗೃತಿಯ ಜತೆಗೆ ರೋಗಗಳನ್ನು ತಡೆಗಟ್ಟಲು ಸಾಧ್ಯ. ಪೌಷ್ಟಿಕ ತಜ್ಞರ ಸಮ್ಮೇಳನ ದೇಶದಲ್ಲಿ ಇಂತಹ ಜಾಗೃತಿಯನ್ನು ಮೂಡಿಸಲು ವೇದಿಕೆಯಾಗಲಿ ಎಂದರು.
ನಿಟ್ಟೆ ಉಪಕುಲಪತಿ ಡಾ| ಸತೀಶ್ ಕುಮಾರ್ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಡಾ| ಇಂದ್ರಾಣಿ ಕರುಣಾಸಾಗರ್ ದಿಕ್ಸೂಚಿ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಇಂಡಿಯನ್ ಡಯಟೆಟಿಕ್ಸ್ ಅಸೋಸಿಯೇಶನ್‌ನ ಬೆಂಗಳೂರು ಚಾಪ್ಟರ್ ಅಧ್ಯಕ್ಷೆ ಹಾಗೂ ಮೌಂಟ್ ಕಾರ್ಮೆಲ್ ಕಾಲೇಜು (ಸ್ವಾಯತ್ತ) ಸಹಾಯಕ ಪ್ರಾಧ್ಯಾಪಕಿ ಡಾ| ಗೀತಾ ಸಂತೋಷ್, ಸಮ್ಮೇಳನ ಆಯೋಜನ ಸಮಿತಿ ಕಾರ್ಯದರ್ಶಿ ಸೆಲ್ಲಿ ಜೆ. ಕಟ್ಟಿಕಾರನ್, ಜತೆ ಕಾರ್ಯದರ್ಶಿ ಡಾ| ಪ್ರೇರಣಾ ಹೆಗ್ಡೆ ಉಪಸ್ಥಿತರಿದ್ದರು.
ಕ್ಷೇಮ ಡೀನ್ ಹಾಗೂ ಆಯೋಜನ ಸಮಿತಿ ಅಧ್ಯಕ್ಷ ಡಾ| ಪಿ.ಎಸ್. ಪ್ರಕಾಶ್ ಸ್ವಾಗತಿಸಿದರು. ಕ್ಷೇಮ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಮೇಜರ್ ಡಾ| ಶಿವಕುಮಾರ್ ಹಿರೇಮಠ ವಂದಿಸಿದರು. ಡಿ. ರಶ್ಮಿ ಕುಂದಾಪುರ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
MUST WATCH
ಹೊಸ ಸೇರ್ಪಡೆ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.