Karnataka Election ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್: ಪೊಲೀಸ್ ನಿಗಾ
Team Udayavani, Apr 7, 2023, 4:07 PM IST
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಬರವಣಿಗೆ, ಪೋಸ್ಟ್ ಗಳನ್ನು ಹಾಕುವ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾ ಪೊಲೀಸ್, ಪುತ್ತೂರು ಮತ್ತು ಬಂಟ್ವಾಳ ಪೊಲೀಸ್ ಉಪಾಧೀಕ್ಷಕರ ಕಚೇರಿಗಳಲ್ಲಿ ಸಾಮಾಜಿಕ ಜಾಲತಾಣ ನಿಗಾ ಘಟಕ ಕಾರ್ಯ ನಿರ್ವಹಿಸುತ್ತಿದ್ದು, ಕಾನೂನುಬಾಹಿರ ಪೋಸ್ಟ್‌ಗಳನ್ನು ಪ್ರಸಾರ ಮಾಡುವುದು ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಲಲ್ಲಿ ಚುನಾವಣ ನೀತಿ ಸಂಹಿತೆ ಉಲ್ಲಂಘನೆ ಆಗುವಂತಹ ಪೋಸ್ಟ್‌ಗಳನ್ನು ಹಾಕುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧ. ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡುವ ಸುದ್ದಿ, ಸುಳ್ಳುಸುದ್ದಿ, ಅಶ್ಲೀಲ- ಅಸಭ್ಯ ವಿಷಯಗಳನ್ನು ಒಳಗೊಂಡು ಪೋಸ್ಟ್ ಹಾಕುವುದು ಕೂಡಾ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಯಾವುದೇ ವ್ಯಕ್ತಿಗಳ ಚಾರಿತ್ರ್ಯಹರಣ, ಮಾನಹಾನಿ ಮಾಡುವಂತಹ ಪೋಸ್ಟ್ ಗಳನ್ನು ಹಾಕುವುದು ಅಪರಾಧವಾಗಿದ್ದು, ಇಂತಹ ಪೋಸ್ಟ್‌ಗಳ ಮೇಲೆ ನಿಗಾ ವಹಿಸಲಾಗುತ್ತಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:Kiccha sudeepa ನಟನೆಯ ಶೋ, ಭಾವಚಿತ್ರಗಳನ್ನು ತಡೆ ಹಿಡಿಯಬೇಕು: ಜೆಡಿಎಸ್ ದೂರು
ರಾಜ್ಯದಲ್ಲಿ ಮೇ.10ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೇ.13ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.