Oct. 21 ರಂದು “ಕುಡ್ಲದ ಪಿಲಿಪರ್ಬ 2023”
Team Udayavani, Oct 19, 2023, 12:34 AM IST
ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಅ. 21ರಂದು ಬೆಳಗ್ಗೆ 10ರಿಂದ ಮಂಗಳೂರಿನ ಕೇಂದ್ರ ಮೈದಾನದಲ್ಲಿ ದ್ವಿತೀಯ ವರ್ಷದ “ಕುಡ್ಲದ ಪಿಲಿಪರ್ಬ- 2023′ ನಡೆಯಲಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸಂಸದ ನಳಿನ್ ಕುಮಾರ್ ಕಟೀಲು ಉದ್ಘಾಟಿಸಲಿದ್ದಾರೆ. ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಸಹಿತ ಅಧಿಕಾರಿಗಳು ಭಾಗವಹಿಸಲಿದ್ದಾರೆ. ತುಳುನಾಡಿನ ಪರಂಪರೆಯ ಹುಲಿ ವೇಷ ಕುಣಿತಕ್ಕೆ ರಾಷ್ಟ್ರ ಮಟ್ಟದಲ್ಲಿ ಮಾನ್ಯತೆ ದೊರಕಿಸುವ ಮತ್ತು ಈ ಕಲಾ ಶ್ರೇಷ್ಠತೆಯನ್ನು ಮುಂದಿನ ತಲೆಮಾರಿಗೆ ದಾಟಿಸುವ ಉದ್ದೇಶದಿಂದ ಕುಡ್ಲದ ಪಿಲಿಪರ್ಬ ಆಯೋಜಿಸಲಾಗಿದೆ ಎಂದರು.
ಭವ್ಯ ಹಾಗೂ ವಿಶಾಲ ವೇದಿಕೆಯಲ್ಲಿ, ಜಿಲ್ಲೆಯ ಪರಿಣಿತ ತೀರ್ಪುಗಾರರ ಸಮ್ಮುಖದಲ್ಲಿ ಸ್ಪರ್ಧೆ ನಡೆಯಲಿದೆ. ಪಂದ್ಯ, ಫಲಿತಾಂಶಗಳ ನಿಖರತೆ ಪಡೆಯುವ ಉದ್ದೇಶಕ್ಕೆ ಈ ಬಾರಿ ಥರ್ಡ್ ಅಂಫೈರ್ ಇರಲಿದ್ದಾರೆ. ಈ
ಸಂಭ್ರಮದಲ್ಲಿ ಪಾಲ್ಗೊಳ್ಳಲು ಪ್ರತಿ ಯೊಬ್ಬರಿಗೂ ಮುಕ್ತ ಅವಕಾಶವಿದೆ. ಹುಲಿವೇಷ ತಂಡಗಳಿಂದ ಇಡೀ ದಿನ ಮನೋರಂಜನೆ ದೊರಕಲಿದೆ ಎಂದರು.
ಸುಸಜ್ಜಿತ ಗ್ಯಾಲರಿ
ಹುಲಿವೇಷ ತಂಡಗಳು ಮೆರವಣಿ ಗೆಯ ಮೂಲಕ ವೇದಿಕೆಯನ್ನು ಪ್ರವೇಶಿಸಲಿದ್ದು, 20 ನಿಮಿಷಗಳ ಪ್ರದರ್ಶನ ನೀಡಲಿವೆ. ಪ್ರತೀ ತಂಡವೂ 38 ಕೆ.ಜಿ. ಭಾರದ ಅಕ್ಕಿಮುಡಿ ಹಾರಿಸುವುದು ಕಡ್ಡಾಯ. ಕರಿಹುಲಿಗಳು, ಮರಿಹುಲಿಗಳು, ಹಿಮ್ಮೇಳ, ಧರಣಿ ಮಂಡಲ ಹೀಗೆ ಇಡೀ ಕೂಟವು ವೈವಿಧ್ಯದಿಂದ ಕೂಡಿರಲಿದೆ. ಮೈದಾನದಲ್ಲಿ 5 ಸಾವಿರ ಮಂದಿ ಕುಳಿತು ವೀಕ್ಷಿಸಬಹುದಾದ ಸುಸಜ್ಜಿತ ಪ್ರೇಕ್ಷಕರ ಗ್ಯಾಲರಿ ನಿರ್ಮಿಸಲಾಗಿದೆ. ದೊಡ್ಡ ಪರದೆಯ ವ್ಯವಸ್ಥೆಯೂ ಇದೆ. ಮೈದಾನದಲ್ಲೇ ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸಲಾಗಿದೆ. ಕಳೆದ ಬಾರಿಯ ಪಿಲಿಪರ್ಬದಲ್ಲಿ 12 ತಂಡಗಳು ಭಾಗಿಯಾಗಿದ್ದವು. ಈ ಬಾರಿ 15 ಪ್ರಸಿದ್ಧ ತಂಡಗಳು ಪಾಲ್ಗೊಳ್ಳಲಿವೆ ಎಂದು ವಿವರಿಸಿದರು.
ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ ಶೆಟ್ಟಿ, ಅಧ್ಯಕ್ಷ, ಮಾಜಿ ಮೇಯರ್ ದಿವಾಕರ ಪಾಂಡೇಶ್ವರ, ಪ್ರಮುಖರಾದ ಚೇತನ್ ಕಾಮತ್, ಜಗದೀಶ್ ಕದ್ರಿ, ಲಲಿತ್ ರಾಜ್ ಮೆಂಡನ್, ಅಶ್ವಿತ್ ಕೊಟ್ಟಾರಿ, ಸೂರಜ್ ಕಾಮತ್, ಉದಯ ಪೂಜಾರಿ, ಕಿರಣ್ ಶೆಣೈ ಪತ್ರಿಕಾಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.