ಅಧಿಕಾರಿ ವರ್ಗವಿರುವುದು ಸುಲಿಗೆಗಾಗಿ ಅಲ್ಲ: ರಾಮಚಂದ್ರ


Team Udayavani, Jul 11, 2017, 2:45 AM IST

1007kpk4.jpg

ಪುತ್ತೂರು : ಇಲ್ಲಿನ ವಿವೇಕಾನಂದ ಅಧ್ಯಯನ ಕೇಂದ್ರ ಯಶಸ್‌ ಹಾಗೂ ವಿವೇಕಾನಂದ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಟಿ ವೃಕ್ಷ ಅಭಿಯಾನ ಪ್ರಯುಕ್ತ ವೃûಾರೋಪಣ ಹಾಗೂ 3ನೇ ವರ್ಷದ ಯಶಸ್‌ ತರಗತಿಗಳ ಪ್ರಾರಂಭೋತ್ಸವ ವಿವೇಕಾನಂದ ಮಹಾವಿದ್ಯಾಲಯದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಂ. ರಾಮಚಂದ್ರ, ಆಡಳಿತ ಸೇವೆಯ ಅಧಿಕಾರಿಗಳಾಗುವುದು ಸುಲಭದ ಮಾತಲ್ಲ. ಪ್ರತಿ ಐಎಎಸ್‌, ಐಪಿಎಸ್‌, ಕೆಎಎಸ್‌ ಅಧಿಕಾರಿಗಳ ಯಶಸ್ಸಿನ ಹಿಂದೆ ಹಲವು ವರ್ಷಗಳ ಪರಿಶ್ರಮವಿದೆ. ಒಂದು ಬಾರಿ ಆಡಳಿತಾಧಿಕಾರಿಯಾಗಿ ಆಯ್ಕೆಯಾದ ಮೇಲೆ ನಡೆದು ಬಂದ ಹಾದಿಯನ್ನು ಮರೆಯಬಾರದು. ನಮ್ಮ ಕಾರ್ಯ ಸಾಧನೆಯ ಗುರಿ ಏನಾಗಿತ್ತು ಎಂಬುದನ್ನು ಅವಗಣಿಸಬಾರದು ಎಂದು ನುಡಿದರು.

ಅಧಿಕಾರಿ ವರ್ಗ ಆಯ್ಕೆಯಾಗುವುದು ಜನರ ಸೇವೆಗಾಗಿ, ಸುಲಿಗೆಗಾಗಿ ಅಲ್ಲ.  ಆಸೆ ಆಮಿಷಗಳಿಗೆ ಬಲಿಯಾಗಬಾರದು. ಜನಸಾಮಾನ್ಯನಿಗೆ ತನ್ನ ಕೆಲಸ ಮಾಡಿಸಿಕೊಳ್ಳುವುದಕ್ಕೆಂದು ಅನಗತ್ಯವಾಗಿ ಅಲೆದಾಡಬೇಕಾದ ಪರಿಸ್ಥಿತಿ ತಂದೊಡ್ಡುವುದು ತರವಲ್ಲ. ಗುರಿಯ ಹಿಂದೆ ಒಳ್ಳೆಯ ಉದ್ದೇಶ ಇರಿಸಿಕೊಳ್ಳಬೇಕು. ಹಣ ಗಳಿಸುವುದೇ ಉದ್ಯೋಗದ ಉದ್ದೇಶವಾಗಿಬಿಟ್ಟರೆ ಸಮಾಜಸೇವೆಯ ಮೂಲ ಆಶಯಕ್ಕೆ ಧಕ್ಕೆಯಾಗುತ್ತದೆ ಎಂದು ಕಿವಿಮಾತು ಹೇಳಿದರು.

ಪ್ರಧಾನ ಹಿರಿಯ ವ್ಯಾವಹಾರಿಕ ನ್ಯಾಯಾ ಧೀಶ ಮತ್ತು ಪ್ರÅಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾ|ಮೂ| ಸಿ.ಕೆ.ಬಸವರಾಜ್‌, ಯಾವುದೇ ಫಲಾಪೇಕ್ಷೆಯಿಲ್ಲದೆ ಕಳೆದ ಎರಡು ವರ್ಷಗಳಿಂದ ಉಚಿತವಾಗಿ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿರುವ ವಿವೇಕಾನಂದ ಅಧ್ಯಯನ ಕೇಂದ್ರ ಯಶಸ್‌ ಅನ್ನು ಅಭಿನಂದಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ ಕೃಷ್ಣ ಭಟ್‌ ಮಾತನಾಡಿ, ಗುರಿಯ ಹಾದಿಯಲ್ಲಿ ಕಷ್ಟ ಪಡಲೇಬೇಕು. ಶ್ರೀಮಂತರು ತಮ್ಮ ಪ್ರಭಾವ ಬಳಸಿ ಹೇಗೋ ತಮ್ಮ ಕೆಲಸಗಳನ್ನು ಪೂರೈಸಿಕೊಳ್ಳುತ್ತಾರೆ. ಆದರೆ ಬಡವರು ಅಧಿಕಾರಿಗಳನ್ನೇ ನಂಬಿಕೊಂಡಿರುತ್ತಾರೆ. ಆ ನಂಬಿಕೆಯನ್ನು ಉಳಿಸಿಕೊಳ್ಳಬೇಕು ಎಂದು ನುಡಿದರು.

ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ, ಸಾಹಿತಿ ಡಾ| ತಾಳ್ತಜೆ ವಸಂತ ಕುಮಾರ್‌ ಹಾಗೂ ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಭಾಸ್ಕರ ಕೋಡಿಂಬಾಳ ಯಶಸ್‌ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರಧಾನ ವ್ಯಾವಹಾರಿಕಾ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾ| ಮೂ| ಪ್ರಕಾಶ್‌ ಪಿ.ಎಂ. ಮೊದಲಾದವರು ಉಪಸ್ಥಿತರಿದ್ದರು.

ಯಶಸ್‌ ವಿದ್ಯಾರ್ಥಿನಿಯರಾದ ಅಂಶಿಕಾ ಹಾಗೂ ಮೈಥಿಲಿ ಪ್ರಾರ್ಥಿಸಿದರು. ವಿವೇಕಾನಂದ ಅಧ್ಯಯನ ಕೇಂದ್ರ ಯಶಸ್‌ ಕಾರ್ಯದರ್ಶಿ ಮುರಳಿಕೃಷ್ಣ ಕೆ. ಎನ್‌ ಸ್ವಾಗತಿಸಿ, ಸದಸ್ಯೆ ವಿದ್ಯಾಗೌರಿ ವಂದಿಸಿದರು. ಉಪನ್ಯಾಸಕಿ ವಿಜಯ ಸರಸ್ವತಿ ಕಾರ್ಯಕ್ರಮ ನಿರೂಪಿಸಿದರು.

ಯುವಜನತೆ ಅವಕಾಶ ಸರಿಯಾಗಿ ಬಳಸಿಕೊಳ್ಳಲಿ
ನಮ್ಮದು ಸ್ವತಂತ್ರ ಭಾರತ. ಎಲ್ಲವೂ ಸಂವಿಧಾನದಲ್ಲಿ ಸೂಚಿಸಿದಂತೆ ನಡೆಯಲ್ಪಡುತ್ತದೆ. ಸಾಮಾಜಿಕ ನ್ಯಾಯದ ಆಧಾರದ ಮೇಲೆ ನೇಮಕಾತಿ ನಡೆಯುತ್ತದೆ. ಅನೇಕ ರೀತಿಯಲ್ಲಿ ಮೀಸಲಾತಿ ನೀಡಲ್ಪಟ್ಟಿದೆ. ಸಿಕ್ಕ ಅವಕಾಶಗಳನ್ನು ಯುವಜನತೆ ಸದುಪಯೋಗ ಪಡಿಸಿಕೊಂಡು ಅಪರಾಧ ಮುಕ್ತ ಸಮಾಜವನ್ನು ಕಟ್ಟುವಲ್ಲಿ ಯಶಸ್ವಿ ಆಗಬೇಕು ಎಂದು ಹೆಚ್ಚುವರಿ ಹಿರಿಯ ವ್ಯವಹಾರಿಕ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನಾ|ಮೂ| ಮಂಜುನಾಥ ಅವರು ಹೇಳಿದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.