ಜೂ. 6ರ ವರೆಗೆ ಹಳೆ ಬಸ್ ಪಾಸ್: ಸಚಿವ ಖಾದರ್
Team Udayavani, Jun 2, 2019, 10:44 AM IST
ಮಂಗಳೂರು: ಹೊಸ ಬಸ್ ಪಾಸ್ ಜೂ. 6ರಿಂದ ವಿತರಣೆಯಾಗುವ ಕಾರಣ ಅಲ್ಲಿವರೆಗೆ ವಿದ್ಯಾರ್ಥಿಗಳು ಹಾಲಿ ಪಾಸ್ ಬಳಸಿ ಪ್ರಯಾಣಿಸಬಹುದು ಎಂದು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ದ.ಕ. ಜಿ.ಪಂ. ಸಭಾಂಗಣದಲ್ಲಿ ಶನಿವಾರ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
43 ಶಾಲೆಗಳಲ್ಲಿ ಇಂಗ್ಲಿಷ್
ಸರಕಾರ ವಿವಿಧ ಸೌಲಭ್ಯಗಳು, ಯೋಜನೆಗಳ ಜಾರಿ, ಶಾಲೆಗಳ ಕುಂದು ಕೊರತೆಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಮಾಹಿತಿ ಪಡೆದಿದ್ದೇನೆ. 43 ಶಾಲೆ ಗಳಲ್ಲಿ 1ನೇ ತರಗತಿಯಿಂದ ಇಂಗ್ಲಿಷ್ ಶಿಕ್ಷಣ ಆರಂಭಗೊಂಡಿದೆ. ಅನೇಕ ಶಾಲೆಗಳಿಂದ ಆಂಗ್ಲ ತರಗತಿ ಆರಂಭಿಸುವಂತೆ ಬೇಡಿಕೆ ಬಂದಿದೆ ಎಂದರು.
ಫಲಿತಾಂಶ ಹೆಚ್ಚಳಕ್ಕೆ ಕ್ರಮ
ಜಿಲ್ಲೆ ಎಸೆಸೆಲ್ಸಿ ಪರೀಕ್ಷೆಯಲ್ಲಿ ಮತ್ತೆ ಮುಂಚೂಣಿ ಸ್ಥಾನವನ್ನು ಪಡೆಯುವ ನಿಟ್ಟಿನಲ್ಲಿ ಸಮಗ್ರ ಕಾರ್ಯಯೋಜನೆ ರೂಪಿಸಲು ಸೂಚಿಸಿದ್ದೇನೆ.ಸರಕಾರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿ ಸುವುದರಿಂದ ಅಂಗನವಾಡಿಗಳಿಗೆ ತೊಂದರೆಯಾಗಲಿದೆ ಎಂಬ ಆಕ್ಷೇಪ ಕೇಳಿ ಬರುತ್ತಿದೆ. ಯಾವುದೇ ಕಾರಣಕ್ಕೆ ಅಂಗನವಾಡಿಗಳನ್ನು ಅವಗಣಿಸುವುದಿಲ್ಲ ಎಂದರು.
ಜಿಲ್ಲೆಗೆ ಶೇ. 80ರಷ್ಟು ಪಠ್ಯಪುಸ್ತಕಗಳು ಸರಬರಾಜು ಆಗಿದ್ದು, ಬಾಕಿ ಇರುವವು ಜೂ. 10ರೊಳಗೆ ಬರಲಿವೆ. ಶೂ ಮತ್ತು ಸಾಕ್ಸ್ ಸರಬರಾಜಿಗೆ ಕ್ರಮ ಕೈಗೊಳ್ಳಲಾಗಿದೆ. ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುವುದು. ಈ ವರ್ಷ 564 ಶಿಕ್ಷಕರ ನೇಮಕವಾಗಲಿದೆ. ಇದೇ ರೀತಿ ಪ್ರೌಢಶಾಲೆಗಳಲ್ಲಿ ಈ ವರ್ಷ 101 ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುವುದು. ಕಳೆದ ವರ್ಷ ಆರ್‌ಎಂಎಸ್ ಯೋಜನೆಯಡಿ ಪ್ರಾರಂಭವಾದ 8 ಶಾಲೆಗಳಿಗೆ ತರಗತಿ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದೆ ಎಂದರು.
ಬಂಟ್ವಾಳ-ಬೆಳ್ತಂಗಡಿ ಬಿಇಒ ಕಚೇರಿ ವ್ಯಾಪ್ತಿಗೆ ಸಂಬಂಧಪಟ್ಟಂತೆ ತಾಂತ್ರಿಕ ಕಾರಣಗಳಿಂದ ವೇತನ ಸಮಸ್ಯೆ ಉಂಟಾಗುತ್ತಿದೆ. ರಾಜ್ಯ ಹಣಕಾಸು ಇಲಾಖೆ ಕಾರ್ಯದರ್ಶಿ ಜತೆ ಚರ್ಚಿಸಿ ಸಮಸ್ಯೆ ಪರಿಹಾರಕ್ಕೆ ಕ್ರಮವಹಿಸಲಾಗುವುದು ಎಂದು ಸಚಿವರು ಹೇಳಿದರು. ಜಿ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಇಬ್ರಾಹಿಂ, ಮಂಗಳೂರು ತಾ.ಪಂ. ಅಧ್ಯಕ್ಷ ಮಹಮ್ಮದ್ ಮೋನು, ಜಿ.ಪಂ. ಸದಸ್ಯ ರಾದ ಮಮತಾ ಗಟ್ಟಿ, ಸಾಹುಲ್ ಹಮೀದ್ ಉಪಸ್ಥಿತರಿದ್ದರು.
ಶಾಲೆಗಳಲ್ಲಿ ನೀರು ಕೊರತೆ: ಸ್ಪಂದಿಸಲು ಸೂಚನೆ
ಜಿಲ್ಲೆಯ ಶಾಲೆಗಳಲ್ಲಿ ನೀರಿನ ಕೊರತೆ ಇದ್ದರೆ ತತ್‌ಕ್ಷಣ ಸ್ಪಂದಿಸಿ ಪೂರಕ ಕ್ರಮಗಳನ್ನು ಕೈಗೊಳ್ಳಲು ಶಿಕ್ಷಣ ಇಲಾಖೆಯ ಬ್ಲಾಕ್ ಮತ್ತು ಕ್ಲಸ್ಟರ್ ಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಟ್ಯಾಂಕರ್ ಅಥವಾ ಬೋರ್‌ವೆಲ್‌ನ ವ್ಯವಸ್ಥೆ ಮಾಡಿ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸುವುದಾಗಿ ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.