ನೇತ್ರದಾನ ಘೋಷಣೆ ಸಮಾರಂಭ
Team Udayavani, Jan 24, 2018, 11:08 AM IST
ಮಹಾನಗರ: ಮರಣ ಅನಂತರ ಮಣ್ಣು ಸೇರುವ ಕಣ್ಣುಗಳನ್ನು ದಾನ ಮಾಡಿ ಇನ್ನೊಬ್ಬರ ಬದುಕನ್ನು
ಬೆಳಗಿಸುವ ಕಾರ್ಯಕ್ಕೆ ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ಎಂ.ಆರ್. ರವಿ ಹೇಳಿದರು.
ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಸಹಯೋಗದಲ್ಲಿ ಮಂಗಳವಾರ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಆಯೋಜಿಸಿದ ಸ್ಪರ್ಶ ಮತ್ತು ಸಮೂಹ ಮಾನಸಿಕ ಆರೋಗ್ಯ ಶಿಕ್ಷಣ, ನೇತ್ರದಾನ ಅಭಿನಂದನೆ ಮತ್ತು ನೇತ್ರದಾನ ಘೋಷಣೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಶಿಕ್ಷಣ ಹಾಗೂ ಆರೋಗ್ಯ ಜತೆಯಾಗಿ ಸಾಗಬೇಕು ಎನ್ನುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿ
ಸಲಾಗುತ್ತಿದೆ. ಇದರ ಪ್ರಮುಖ ಭಾಗವಾಗಿ 340 ಮಂದಿ ನೇತ್ರದಾನಿಗಳನ್ನಷ್ಟೆ ಗುರುತಿಸಲು ಸಾಧ್ಯವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಒಂದೇ ವರ್ಷದಲ್ಲಿ ನೇತ್ರದಾನಿಗಳ ಸಂಖ್ಯೆ 12 ಸಾವಿರ ಗಡಿ ದಾಟಿದೆ. ಇದು ರಾಜ್ಯದ ವೈದ್ಯಕೀಯ ಇತಿಹಾಸದಲ್ಲೇ ಪ್ರಥಮ. ಇದಕ್ಕಾಗಿ ಶ್ರಮಿಸಿದ ತಂಡದ ಸದಸ್ಯರ ಕಾರ್ಯ ಶ್ಲಾಘನೀಯ ಎಂದರು.
ಯಾವುದೇ ಉತ್ತಮ ಕಾರ್ಯವೂ ಒಬ್ಬನಿಂದ ಸಾಧ್ಯವಿಲ್ಲ. ಎಲ್ಲ ಇಲಾಖೆಯೂ ಒಮ್ಮತದಿಂದ ಮುನ್ನಡೆದರೆ ಏನನ್ನಾದರೂ ಸಾಧಿಸಬಹುದು ಎಂಬುದು ಈ ಕಾರ್ಯದ ಮೂಲಕ ರುಜುವಾತಾವಾಗಿದೆ. ಈಗಾಗಲೇ ನೇತ್ರದಾನಕ್ಕೆ ಸಹಿ ಹಾಕಿದ ಜನರ ಮಾಹಿತಿ ಕಲೆ ಹಾಕಿದೆ. ಅವರಿಗೆ ಗುರುತಿನ ಚೀಟಿಯನ್ನು ವಿತರಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ದ.ಕ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರು ಉದ್ಘಾಟಿಸಿದರು. ನೇತ್ರ ತಜ್ಞ
ಡಾ| ರತ್ನಾಕರ್, ದಿನಕರ್ ಶೆಟ್ಟಿ, ಡಾ| ಜೆಸಿಂತಾ, ಸತೀಶ್ ಚಂದ್ರ ಮೊದಲಾದವರು ಉಪಸ್ಥಿತರಿದ್ದರು. ಜಯಂತ್
ಅವರು ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಂ. ರಾಮಕೃಷ್ಣ ರಾವ್ ಅವರು
ಪ್ರಸ್ತಾವನೆಗೈದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.