ಕೆಎಸ್ಸಾರ್ಟಿಸಿಬಸ್ ನಿಲ್ದಾಣಗಳಲ್ಲಿ ಒಂದುರೂ.ಗೆ ಶುದ್ಧ ಕುಡಿಯುವ ನೀರು
Team Udayavani, Dec 12, 2018, 10:16 AM IST
ಮಹಾನಗರ: ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಗಳಲ್ಲಿ ಶೀಘ್ರದಲ್ಲೇ ಸಾರ್ವಜನಿಕರಿಗೆ ಒಂದು ರೂ.ಗೆ ಅರ್ಧ ಲೀಟರ್ ಶುದ್ಧ ಕುಡಿಯುವ ನೀರು ಸಿಗಲಿದೆ. ದೇಶದ ನಂಬರ್ ಒನ್ ಸಾರಿಗೆ ವ್ಯವಸ್ಥೆ ಎಂದೆನಿಸಿಕೊಂಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಈ ಯೋಜನೆಯನ್ನು ಜಾರಿಗೆ ತಂದಿದ್ದು, 1 ರೂ.ಗೆ ಅರ್ಧ ಲೀಟರ್, 2 ರೂ.ಗೆ ಒಂದು ಲೀಟರ್ ಮತ್ತು 5 ರೂ.ಗೆ ಐದು ಲೀಟರ್ ನೀರು ಬಸ್ ನಿಲ್ದಾಣದ ಒಳಗೆ ಲಭ್ಯವಾಗುವಂತಹ ಯೋಜನೆಯನ್ನು ಕಲ್ಪಿಸಿದೆ. ಇದರೊಂದಿಗೆ ಸರಕಾರಿ ಬಸ್ ಸಾರಿಗೆ ವ್ಯವಸ್ಥೆಯಲ್ಲಿ ಈ ಸೇವೆ ಒದಗಿಸುತ್ತಿರುವ ಮೊದಲ ರಾಜ್ಯವಾಗಿ ಕರ್ನಾಟಕ ಪ್ರಾಪ್ತವಾಗಲಿದೆ. ಪ್ರಯಾಣಿಕರು ಅಂಗಡಿಗಳಲ್ಲಿ ಅರ್ಧ ಲೀಟರ್ ಮಿನರಲ್ ವಾಟರ್‌ಗೆ ಸುಮಾರು 10 ರೂ., ಒಂದು ಲೀಟರ್‌ಗೆ 20 ರೂ. ದುಡ್ಡು ಕೊಟ್ಟು ಖರೀದಿ ಮಾಡುವುದು ಇದರಿಂದ ತಪ್ಪಲಿದೆ.
ಕೆಎಸ್ಸಾರ್ಟಿಸಿಯು ಮೊದಲನೇ ಹಂತದಲ್ಲಿ ದ.ಕ. ಜಿಲ್ಲೆಯ ಮಂಗಳೂರು, ಧರ್ಮಸ್ಥಳ ಮತ್ತು ಸುಬ್ರಹ್ಮಣ್ಯ ಸರಕಾರಿ ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಿದೆ. ಧರ್ಮಸ್ಥಳ ಮತ್ತು ಸುಬ್ರಹ್ಮಣ್ಯ ಬಸ್ ನಿಲ್ದಾಣಗಳಲ್ಲಿ ನೀರಿನ ಘಟಕದ ಕೆಲಸ ಕೊನೆಯ ಹಂತದಲ್ಲಿದ್ದು, ಮುಂದಿನ ಒಂದು ತಿಂಗಳೊಳಗಾಗಿ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿದೆ. ಮಂಗಳೂರು ಬಸ್ ನಿಲ್ದಾಣದಲ್ಲಿ ನೀರಿನ ಘಟಕ ಸ್ಥಾಪನೆಯ ಪ್ರಕ್ರಿಯೆಗಳು ಪ್ರಾರಂಭವಾಗಿದ್ದು, ಸುಮಾರು ಎರಡು ತಿಂಗಳೊಳಗೆ ತಲೆಯೆತ್ತಲಿದೆ.
ಗಂಟೆಗೆ 250 ಲೀಟರ್ ನೀರು ಶುದ್ಧೀಕರಣ
ಕೆಎಸ್ಸಾರ್ಟಿಸಿಯು ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ನೀರಿನ ಘಟಕ ಸ್ಥಾಪನೆ ಮಾಡುತ್ತಿದ್ದು, ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಸಹಯೋಗದಲ್ಲಿ ಘಟಕಗಳು ತಲೆಯೆತ್ತಲಿವೆ. ಘಟಕವು ಗಂಟೆಗೆ 250 ಲೀಟರ್ ಶುದ್ಧೀಕರಣ ನೀರು ಪಡೆಯುವ ಸಾಮರ್ಥ್ಯವನ್ನು ಹೊಂದಿರಲಿವೆ. ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ ದಿನಂಪ್ರತಿ ಸುಮಾರು 350ಕ್ಕೂ ಹೆಚ್ಚು ಬಸ್‌ಗಳು, ಧರ್ಮಸ್ಥಳ ಮತ್ತು ಸುಬ್ರಹ್ಮಣ್ಯ ನಿಲ್ದಾಣದಿಂದ ನೂರಕ್ಕೂ ಹೆಚ್ಚು ಬಸ್‌ಗಳು ಸಂಚರಿಸುತ್ತವೆ.
ನಾನಾ ಪ್ರದೇಶಗಳಿಗೆ ದಿನಂಪ್ರತಿ ಸಂಚರಿ ಸುತ್ತಿದ್ದು, ನೂತನ ಯೋಜನೆಯಿಂದ ಸಾವಿರಾರು ಪ್ರಯಾಣಿಕರಿಗೆ ಅನುಕೂಲ ವಾಗಲಿದೆ. ಕೆಎಸ್ಸಾರ್ಟಿಸಿ ಐಷಾರಾಮಿ ಬಸ್‌ಗಳಲ್ಲಿ ಪ್ರಯಾಣಿಕರಿಗೆ ಈಗಾಗಲೇ ಅರ್ಧ ಲೀಟರ್ ಕುಡಿಯುವ ನೀರಿನ ಬಾಟಲಿಗಳನ್ನು ನೀಡಲಾಗುತ್ತಿದೆ. ನಿಗಮ ಇದಕ್ಕಾಗಿ ವರ್ಷಕ್ಕೆ ಸುಮಾರು 6 ಕೋಟಿ ರೂ. ವ್ಯಯಿಸುತ್ತಿದೆ. ಇವಿಷ್ಟೇ ಅಲ್ಲದೆ, ಎಲ್ಲ ಐಷಾರಾಮಿ ಬಸ್‌ಗಳಲ್ಲಿ ಪ್ರಯಾಣಿಕರಿಗೆ ಬೆಳಗ್ಗಿನ ವೇಳೆ ದಿನಪತ್ರಿಕೆಯನ್ನು ನೀಡಲಾಗುತ್ತಿದೆ.
ದಿನದ 24 ಗಂಟೆ ಸೇವೆ
ಕೆಎಸ್ಸಾರ್ಟಿಸಿಯ ಯೋಜನೆಯಾದ ಶುದ್ಧ ಕುಡಿಯುವ ನೀರಿನ ಘಟಕ ದಿನದ 24 ಗಂಟೆಯೂ ಕಾರ್ಯಾಚರಿಸಲಿದೆ. 1 ರೂ., 2 ರೂ. ಮತ್ತು 5 ರೂ. ನಾಣ್ಯವನ್ನು ಯಂತ್ರಕ್ಕೆ ಹಾಕುವ ಮೂಲಕ ಮಿನರಲ್ ನೀರು ಪಡೆಯಬಹುದಾಗಿದೆ. ಕೆಲವೊಂದು ಬಸ್ ನಿಲ್ದಾಣಗಳಲ್ಲಿನ ಅಂಗಡಿಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಕುಡಿಯುವ ನೀರು ಮಾರಾಟ ಮಾಡಲಾಗುತ್ತಿದ್ದು, ನೂತನ ಘಟಕದಿಂದ ಇದಕ್ಕೆ ಕಡಿವಾಣ ಬೀಳಬಹುದು.
2 ತಿಂಗಳಲ್ಲಿ ಆರಂಭ
ಶುದ್ಧ ಕುಡಿಯುವ ನೀರಿನ ಘಟಕ ತಲೆಯೆತ್ತುವುದರಿಂದ ಕೆಎಸ್ಸಾರ್ಟಿಸಿ ಬಸ್ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಮಂಗಳೂರು ವಿಭಾಗದಲ್ಲಿ ಪ್ರಕ್ರಿಯೆಗಳು ಪ್ರಾರಂಭವಾಗಿದ್ದು, ಮುಂದಿನ ಎರಡು ತಿಂಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಘಟಕ ಪ್ರಾರಂಭವಾಗಲಿದೆ.
– ದೀಪಕ್ ಕುಮಾರ್,
ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗಾಧಿಕಾರಿ
ನವೀನ್ ಭಟ್ ಇಳಂತಿಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.