Mangaluru: ಆನ್‌ಲೈನ್ ಟ್ರೇಡಿಂಗ್; 1.25 ಕೋ.ರೂ. ವರ್ಗಾಯಿಸಿ ವಂಚನೆ
Team Udayavani, Oct 20, 2024, 6:45 AM IST
ಮಂಗಳೂರು: ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುವುದಾಗಿ ವಾಟ್ಸಾಪ್ ಚಾಟಿಂಗ್‌ನಲ್ಲಿ ಅಪರಿಚಿತರು ಹೇಳಿರುವುದನ್ನು ನಂಬಿ 1,25,67, 726 ರೂ. ಕಳೆದುಕೊಂಡಿರುವ ಕುರಿತಂತೆ ಮಂಗಳೂರಿನ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೂರುದಾರರ ವಾಟ್ಸಾಪ್‌ಗೆ ಆನ್‌ಲೈನ್ ಟ್ರೇಡಿಂಗ್ ಕುರಿತಂತೆ ಮೆಸೇಜ್ ಬಂದಿದ್ದು, ಮೆಸೇಜ್ ಮಾಡಿದ ವ್ಯಕ್ತಿ ಚಾಟಿಂಗ್‌ನಲ್ಲಿ ತಿಳಿಸಿದಂತೆ ಹೂಡಿಕೆ ಮಾಡಲು ಒಪ್ಪಿಕೊಂಡಿದ್ದಾರೆ. ಅನಂತರ ವಿಐಪಿ ಎಚ್2 ಶೇರ್‌ಖಾನ್ ಕ್ಯಾಪಿಟಲ್ ಎಂಬ ವಾಟ್ಸಾಪ್ ಗ್ರೂಪ್‌ಗೆ ದೂರುದಾರರನ್ನು ಸೇರಿಸಲಾಗಿದೆ.
ಬಳಿಕ ಲಿಂಕ್ ಒಂದನ್ನು ಕಳುಹಿಸಿದ್ದು, ಅದನ್ನು ಒತ್ತುವ ಮೂಲಕ ಶೇರ್‌ಖಾನ್ ಇಂಟರ್‌ನ್ಯಾಷನಲ್ ಸೆಕ್ಯೂರಿಟಿ ಫ್ಲಾಟ್‌ಫಾರಂಗೆ ಸೇರಿಸಿದ್ದಾರೆ. ಮೊದಲಿಗೆ 2024ರ ಸೆ.1ರಂದು 1 ಲಕ್ಷ ರೂ. ಅನ್ನು ಅವರು ತಿಳಿಸಿದಂತೆ ಅವರ ಖಾತೆಗೆ ಯುಪಿಐ ಮಾಡಿದ್ದಾರೆ. ಹೆಚ್ಚಿನ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ದೊರೆಯುತ್ತದೆ ಎಂದು ತಿಳಿಸಿದಂತೆ ಸೆ.1ರಿಂದ 15ರ ನಡುವೆ ಒಟ್ಟು 25 ಲಕ್ಷ ರೂ. ಹಣ ವರ್ಗಾವಣೆ ಮಾಡಿದ್ದಾರೆ. ಬಳಿಕ ಆ ಹಣವನ್ನು ವಿತ್ ಡ್ರಾ ಮಾಡಲು ಪ್ರಯತ್ನಿಸಿದಾಗ ಅಕೌಂಟ್ ನಂಬರ್ ತಪ್ಪಾಗಿದೆ, ಪ್ರೊಟೆಕ್ಷನ್ ಮೆಕ್ಯಾನಿಸಮ್ ಆ್ಯಕ್ಟಿವೇಟ್ ಆಗಿದೆ ಪುನಃ 35 ಲಕ್ಷ ರೂ. ವರ್ಗಾವಣೆ ಮಾಡಬೇಕು ಎಂದು ಸೂಚನೆ ಬಂದಿದೆ. ಅದರಂತೆ ತಲಾ 35 ಲಕ್ಷ ರೂ. ಅನ್ನು ಎರಡು ಬಾರಿ ಆರ್‌ಟಿಜಿಎಸ್ ಮೂಲಕ ವರ್ಗಾಯಿಸಿದ್ದಾರೆ.
ಆ ಬಳಿಕವೂ ಹೂಡಿಕೆ ಮಾಡಿದ ಹಣವನ್ನು ಹಿಂಪಡೆಯಲು ಪ್ರಯತ್ನಿಸಿದಾಗ ಸಾಧ್ಯವಾಗಿಲ್ಲ. ಈ ಬಗ್ಗೆ ಸ್ನೇಹಿತರಲ್ಲಿ ವಿಚಾರಿಸಿದಾಗ ಮೋಸ ಹೋಗಿರುವ ವಿಚಾರ ತಿಳಿದು ಬಂದಿದೆ. ಹೀಗೆ ಆನ್‌ಲೈನ್ ಟ್ರೇಡಿಂಗ್ ಮೂಲಕ ಹೆಚ್ಚಿನ ಲಾಭದ ಆಮಿಷ ತೋರಿಸಿ ಒಟ್ಟು 1,25,67, 726 ರೂ. ಹಣವನ್ನು ವರ್ಗಾಯಿಸಿಕೊಂಡು ವಂಚನೆ ಮಾಡಿದ್ದಾರೆ ಎಂದು ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್
Baindur: ರೈಲ್ವೇ ಗೇಟ್ ಬಂದ್; ಕೋಟೆಮನೆಗೆ ಸಂಪರ್ಕ ಕಟ್
Mangaluru: ಪ್ಲಾಸ್ಟಿಕ್ ಉತ್ಪಾದನ ಘಟಕ, ಮಾರಾಟದ ಮೇಲೆ ನಿಗಾ
MUST WATCH
ಹೊಸ ಸೇರ್ಪಡೆ
NABARD loan 58 % ಕಡಿತ: ಚರ್ಚೆಗೆ ನಿರ್ಮಲಾ ಬಳಿ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು
Vikram Gowda ಎನ್‌ಕೌಂಟರ್; ತನಿಖೆ ಕರೆ ತಳ್ಳಿ ಹಾಕಿದ ಡಾ.ಜಿ. ಪರಮೇಶ್ವರ್
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.